AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಪ್ರಕರಣದ ನಂತರ ಮೊದಲ ಬಾರಿಗೆ ಇಂದು ಗೋಕಾಕ್​ಗೆ ರಮೇಶ್ ಜಾರಕಿಹೊಳಿ ಆಗಮಿಸುವ ಸಾಧ್ಯತೆ

ಬೆಳಗಾವಿ ಜಿಲ್ಲೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು 40ಕ್ಕೂ ಹೆಚ್ಚು ವಾಹನಗಳಲ್ಲಿ ನಗರಕ್ಕೆ ಆಗಮಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ತಮ್ಮ ನಾಯಕನನ್ನು ಕಣ್ತುಂಬಿಕೊಳ್ಳಲು ಮತ್ತು ತಮ್ಮ ಯಾವತ್ತೂ ಬೆಂಬಲವನ್ನು ಘೋಷಿಸಲು ಅಭಿಮಾನಿಗಳು ಕಾತುರರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಡಿ ಪ್ರಕರಣದ ನಂತರ ಮೊದಲ ಬಾರಿಗೆ ಇಂದು ಗೋಕಾಕ್​ಗೆ ರಮೇಶ್ ಜಾರಕಿಹೊಳಿ ಆಗಮಿಸುವ ಸಾಧ್ಯತೆ
ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ
guruganesh bhat
|

Updated on:Mar 30, 2021 | 11:20 AM

Share

ಬೆಳಗಾವಿ: ಸಿಡಿ ಪ್ರಕರಣದ ನಂತರ ಮೊದಲ ಬಾರಿಗೆ ಗೋಕಾಕ್‌ಗೆ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಭೇಟಿ ನೀಡಲಿದ್ದಾರೆ ಎಂದೇ ಹೇಳಲಾಗುತ್ತಿದೆ. ಇಂದು ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ ವೇಳೆ ರಮೇಶ್ ಜಾರಕಿಹೊಳಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ತಡರಾತ್ರಿ ರಮೇಶ್ ಜಾರಕಿಹೊಳಿ ಗೋಕಾಕ್​ಗೆ ಆಗಮಿಸಿದ್ದಾರೆ, ಬಿಜೆಪಿ ನಾಯಕರ ಸಲಹೆಯಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಇಂದು ಸಿಡಿ ಪ್ರಕರಣದ ಯುವತಿ ಕೋರ್ಟ್​ಗೆ ಹಾಜರಾಗುವ ಸಂಭಾವ್ಯತೆಗಳು ಸಹ ಇದ್ದೂ, ಶಾಸಕ ರಮೇಶ್ ಜಾರಕಿಹೊಳಿ ಗೋಕಾಕ್​ನಲ್ಲಿ ಅಭಿಮಾನಿಗಳನ್ನು ಭೇಟಿಯಾಗುವ ಎಲ್ಲ ಲಕ್ಷಣಗಳಿವೆ. 

ಬೆಳಗಾವಿ ಜಿಲ್ಲೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು 40ಕ್ಕೂ ಹೆಚ್ಚು ವಾಹನಗಳಲ್ಲಿ ನಗರಕ್ಕೆ ಆಗಮಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ತಮ್ಮ ನಾಯಕನನ್ನು ಕಣ್ತುಂಬಿಕೊಳ್ಳಲು ಮತ್ತು ತಮ್ಮ ಯಾವತ್ತೂ ಬೆಂಬಲವನ್ನು ಘೋಷಿಸಲು ಅಭಿಮಾನಿಗಳು ಕಾತುರರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಟೆಂಪಲ್ ರನ್! ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆ ಮಂಗಳಾ ಅಂಗಡಿ ಟೆಂಪಲ್ ರನ್ ಮಾಡಿದ್ದಾರೆ. ಬೆಳಗಾವಿಯ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿರುವ ಅವರು, ಬೆಳಗಾವಿಯ ಶಿವಾಜಿ ಉದ್ಯಾನವನದಲ್ಲಿರುವ ಶಿವಾಜಿ ಪ್ರತಿಮೆ ಮಾಲಾರ್ಪಣೆ ಮಾಡಿದ್ದಾರೆ. ಜತೆಗೆ ಬೆಳಗಾವಿಯ ಬಸವೇಶ್ವರ ವೃತ್ತದ ಉದ್ಯಾನವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಂಗಳಾ ಅಂಗಡಿ ಜತೆ ಅವರ ಇಬ್ಬರು ಮಕ್ಕಳು, ಸಹೋದರ, ಕುಟುಂಬದ ಸದಸ್ಯರು ಜತೆಯಾಗಿದ್ದಾರೆ.

ಇಷ್ಟೇ ಅಲ್ಲದೇ ಮಂಗಳಾ ಅಂಗಡಿ ಅವರು ನಾಮಪತ್ರ ಸಲ್ಲಿಕೆ ಮುಂಚೆಯೇ ದೇವಸ್ಥಾನಗಳ ದರ್ಶನ ಮುಂದುವರೆಸಿದ್ದಾರೆ. ಬೆಳಗಾವಿ ನಗರದ ಹನುಮಾನ್ ದೇವಸ್ಥಾನಕ್ಕೆ ಭೇಟಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಲಿರುವ ಮಂಗಳ ಅಂಗಡಿಗೆ ಪುತ್ರಿ ಶ್ರದ್ದಾ ಶೆಟ್ಟರ್, ಸ್ಪೂರ್ತಿ ಪಾಟೀಲ್ ಮತ್ತು ಸಹೋದರ ಚಂದ್ರಪ್ಪ ಅಂಗಡಿ ಸೇರಿ ಜತೆಯಾಗುವ ಸಾಧ್ಯತೆಯಿದೆ.

ಈ ಕುರಿತು ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ ಮಂಗಳಾ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್, ‘ನಮ್ಮ ತಂದೆ ಚುನಾವಣೆಗೆ ಸ್ಪರ್ಧಿಸಿದಾಗ ಅವರ ಜತೆಗಿದ್ದೆವು. ಈಗ ನಮ್ಮ ತಾಯಿಯವರ ಜೊತೆ ನಾವು ಹೋಗುತ್ತೇವೆ’ ಎಂದು ಚುನಾವಣಾ ಪ್ರಕ್ರಿಯೆಯಲ್ಲಿ ತಾಯಿಯ ಜತೆ ನಿಲ್ಲುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

ಆ ಮಹಿಳೆ ಬರೀ ವಿಡಿಯೋ ಬಿಟ್ರೆ ಪ್ರಯೋಜನವಿಲ್ಲ. ಪೊಲೀಸರ ಮುಂದೆ ಬರಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌

Published On - 11:05 am, Tue, 30 March 21

Follow Us
guruganesh bhat
guruganesh bhat
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ