ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ಎಸ್​ಐಟಿ

ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸದರಿ ವ್ಯಕ್ತಿಯು ಅಶ್ಲೀಲ ಸಿಡಿಗೆ ಸಂಬಂಧಿಸಿದ ಕೃತ್ಯದಲ್ಲಿ ಪಾಲ್ಗೊಂಡಿರುವ ಶಂಕೆ ವ್ಯಕ್ತವಾಗಿದೆ.

ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ಎಸ್​ಐಟಿ
ರಮೇಶ್ ಜಾರಕಿಹೊಳಿ
Follow us
Skanda
|

Updated on:Mar 12, 2021 | 3:26 PM

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸದರಿ ವ್ಯಕ್ತಿಯು ಅಶ್ಲೀಲ ಸಿಡಿಗೆ ಸಂಬಂಧಿಸಿದ ಕೃತ್ಯದಲ್ಲಿ ಪಾಲ್ಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸದರಿ ವ್ಯಕ್ತಿಯು ಯುವತಿ ಜೊತೆಯಲ್ಲಿ ಸಂಪರ್ಕದಲ್ಲಿದ್ದ ಎಂಬ ಮಾಹಿತಿಯೂ ಲಭ್ಯವಿದ್ದು, ದಿನೇಶ್​ ಕಲ್ಲಹಳ್ಳಿಗೆ ಯಶವುಂತಪುರದಲ್ಲಿ ಆ ಸಿಡಿ ಹಸ್ತಾಂತರಿಸಿದ್ದು ಸಹ ಆತನೇ ಎಂಬ ಬಗ್ಗೆ ಬಲವಾದ ಅನುಮಾನ ಮೂಡಿದೆ. ಹೀಗಾಗಿ ಆತನನ್ನು ವಿಚಾರಣೆಗೆ ಕರೆತಂದಿರುವ ಎಸ್​ಐಟಿ ಅಧಿಕಾರಿಗಳು ಸತ್ಯಾಂಶ ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿಗೆ ತನಿಖೆ ಹೊಣೆ, ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ 

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಹೇಗಿರುತ್ತೆ SIT ತನಿಖೆ?

Published On - 3:20 pm, Fri, 12 March 21