ಸಿಡಿ ಯುವತಿಯಿಂದ ಲೇಟೆಸ್ಟ್​ ವಿಡಿಯೋ ಬಿಡುಗಡೆ: ರಮೇಶ್​ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿದೆ

ಹೆಣ್ಣು ಮಗಳಾಗಿಯೂ ಇಷ್ಟೊಂದು ಷಡ್ಯಂತ್ರ ಮಾಡ್ತಿದ್ದಾರೆ. ನಾನು ನಿರಪರಾಧಿ. ಎಷ್ಟು ಸಿಡಿ ಬೇಕಾದ್ರೂ ಅವರು ಬಿಡುಗಡೆ ಮಾಡಲಿ. ಕೆಲವರಿಗೆ ನನಗಿಂತ ಹೆಚ್ಚಿನ ವಿಷಯ ಗೊತ್ತಿದೆ. ಎಸ್‌ಐಟಿಯವರು ಸೂಕ್ತ ತನಿಖೆ ನಡೆಸಲಿ. ಕಾನೂನು ಪ್ರಕಾರ ಯುವತಿಗೆ ರಕ್ಷಣೆ ಕೊಡಲಿ. ಕೇಸ್ ತನಿಖೆ ಬಗ್ಗೆ ಗೃಹಸಚಿವರಿಂದ ಮಾಹಿತಿ ಪಡೆದಿದ್ದೇನೆ ಎಂದು ಗೃಹ ಸಚಿವರ ಭೇಟಿ ಬಳಿಕ ರಮೇಶ್ ಜಾರಕಿಹೊಳಿ ಹೇಳಿದರು.

ಸಿಡಿ ಯುವತಿಯಿಂದ ಲೇಟೆಸ್ಟ್​ ವಿಡಿಯೋ ಬಿಡುಗಡೆ: ರಮೇಶ್​ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿದೆ
ರಮೇಶ್ ಜಾರಕಿಹೊಳಿ ಮತ್ತು ಸಂತ್ರಸ್ತೆ ಎನ್ನಲಾದ ಯುವತಿ
Follow us
KUSHAL V
|

Updated on:Mar 13, 2021 | 10:04 PM

ಬೆಂಗಳೂರು: ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ. ರಮೇಶ್ ಜಾರಕಿಹೊಳಿಯವರಿಂದಲೇ ಸಿಡಿ ರಿಲೀಸ್ ಆಗಿದೆ. ಈ ವಿಡಿಯೋದಿಂದಾಗಿ ನನ್ನ ಮಾನ ಹರಾಜಾಗಿದೆ. ಇದರಿಂದ ನನ್ನ ತಂದೆ, ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನೂ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಸಿಡಿಯಲ್ಲಿ ಕಾಣಿಸಿಕೊಂಡಿರುವ ಸಂತ್ರಸ್ತೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಂತ್ರಸ್ತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅಂದ ಹಾಗೆ, ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತೆ ತನ್ನ ಮುಖವನ್ನು ಬ್ಲರ್​ ಮಾಡದೇ ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇತ್ತ, ಸಂತ್ರಸ್ತೆಯ ವಿಡಿಯೋ ಬಿಡುಗಡೆ ಬಗ್ಗೆ ಮಾತನಾಡಿದ ರಮೇಶ್​ ಜಾರಕಿಹೊಳಿ ಯುವತಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ದೂರು ನೀಡಿದ ಅರ್ಧ ಗಂಟೆಯಲ್ಲೇ ಯುವತಿ ಹೇಳಿಕೆ ಕೊಟ್ಟಿದ್ದಾರೆ. 12 ದಿನ ಏನೂ ಹೇಳದೆ ದೂರು ನೀಡಿದ ಬಳಿಕ ಪ್ರತ್ಯಕ್ಷವಾಗಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಹೆಣ್ಣು ಮಗಳಾಗಿಯೂ ಇಷ್ಟೊಂದು ಷಡ್ಯಂತ್ರ ಮಾಡ್ತಿದ್ದಾರೆ. ನಾನು ನಿರಪರಾಧಿ. ಎಷ್ಟು ಸಿಡಿ ಬೇಕಾದ್ರೂ ಅವರು ಬಿಡುಗಡೆ ಮಾಡಲಿ. ಕೆಲವರಿಗೆ ನನಗಿಂತ ಹೆಚ್ಚಿನ ವಿಷಯ ಗೊತ್ತಿದೆ. ಎಸ್‌ಐಟಿಯವರು ಸೂಕ್ತ ತನಿಖೆ ನಡೆಸಲಿ. ಕಾನೂನು ಪ್ರಕಾರ ಯುವತಿಗೆ ರಕ್ಷಣೆ ಕೊಡಲಿ. ಕೇಸ್ ತನಿಖೆ ಬಗ್ಗೆ ಗೃಹಸಚಿವರಿಂದ ಮಾಹಿತಿ ಪಡೆದಿದ್ದೇನೆ ಎಂದು ಗೃಹ ಸಚಿವರ ಭೇಟಿ ಬಳಿಕ ರಮೇಶ್ ಜಾರಕಿಹೊಳಿ ಹೇಳಿದರು.

‘ಸಂತ್ರಸ್ತೆ ಬಿಡುಗಡೆ ಮಾಡಿರುವ ವಿಡಿಯೋ ಗಮನಿಸಿಲ್ಲ’ ಸಂತ್ರಸ್ತೆ ಬಿಡುಗಡೆ ಮಾಡಿರುವ ವಿಡಿಯೋ ಗಮನಿಸಿಲ್ಲ ಎಂದು ರಮೇಶ್ ಭೇಟಿ ಬಳಿಕ ಗೃಹಸಚಿವ ಬೊಮ್ಮಾಯಿ ಹೇಳಿದ್ದಾರೆ. ಸಂತ್ರಸ್ತೆ ಕುಟುಂಬಕ್ಕೆ ಜೀವ ಭಯವಿದೆ ಎಂಬುವುದು ಗಮನಕ್ಕೆ ಬಂದಿದೆ. ಜೀವ ಭಯವಿದೆ ಎಂದಿರುವುದು ಗಮನಕ್ಕೆ ಬಂದಿದೆ. ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಲು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಸೂಕ್ತ ಭದ್ರತೆ ಒದಗಿಸಲು SIT ಮುಖ್ಯಸ್ಥರಿಗೆ ತಿಳಿಸಿದ್ದೇನೆ. ಸಿಡಿ ಸತ್ಯತೆ ಬಗ್ಗೆ ವೈಯಕ್ತಿಕ ಅಭಿಪ್ರಾಯ ಮುಖ್ಯವಾಗಲ್ಲ. ತನಿಖೆ SITಗೆ ವಹಿಸಿರುವುದರಿಂದ ಸತ್ಯಾಂಶ ಹೊರಬೀಳುತ್ತೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

‘ರಮೇಶ್ ಸಿಡಿಯಲ್ಲಿರುವ ಯುವತಿಯ ರಕ್ಷಣೆಗೆ ಬದ್ಧ’ ರಮೇಶ್ ಸಿಡಿಯಲ್ಲಿರುವ ಯುವತಿಯ ರಕ್ಷಣೆಗೆ ಬದ್ಧ ಎಂದು ಟಿವಿ9ಗೆ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಯತ್ನ ಬೇಡ. ಸಂತ್ತ್ರಸ್ತೆ ಖಿನ್ನತೆಗೊಳಗಾಗಿ ಭಯಪಡುವುದು ಬೇಡ. ಯುವತಿಗೆ ರಕ್ಷಣೆ ನೀಡಲು ಪೊಲೀಸರಿಗೂ ಸೂಚನೆ ಕೊಡುತ್ತೇವೆ. ಡಿಜಿ & ಐಜಿಪಿ, ಪೊಲೀಸ್ ಆಯುಕ್ತರಿಗೂ ಸೂಚನೆ ನೀಡಲಾಗುವುದು ಎಂದು ಟಿವಿ9ಗೆ ಪ್ರಮೀಳಾ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಯವರಿಂದಲೇ ಸಿಡಿ ರಿಲೀಸ್ ಆಗಿದೆ; ಇದರಿಂದ ನನ್ನ ಪೋಷಕರು ಆತ್ಮಹತ್ಯೆಗೆ ಯತ್ನಿಸಿದ್ದಾರೆ -ಸಂತ್ರಸ್ತೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ

Published On - 9:53 pm, Sat, 13 March 21

Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ