ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹೇಳಿಕೆ ನೀಡಿರುವ ರಮೇಶ್ ಜಾರಕಿಹೊಳಿ, ಈ ವಿಚಾರ ನನಗೆ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು. ಮಾಜಿ ಶಾಸಕ ನಾಗರಾಜ್ ಮೂಲಕ ಈ ವಿಚಾರ ನನಗೆ ತಿಳಿದಿತ್ತು. ವಿಡಿಯೋ ಮುಂದಿಟ್ಟು 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿತ್ತು. ಆದರೆ ಇದ್ಯಾವುದರ ಬಗ್ಗೆಯೂ ನಾನು ತಲೆ ಕೆಡಿಸಿಕೊಂಡಿರಲಿಲ್ಲ ಎಂದು ತಿಳಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆಯನ್ನು ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ದಾಖಲಿಸಿಕೊಂಡಿದ್ದು, ಇದೇ ವೇಳೆ ಮಾಜಿ ಸಚಿವರು ಹಲವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂಬ ಮಾಹಿತಿಯೂ ಸಿಕ್ಕಿದೆ.
ಆ ವಿಡಿಯೋದಲ್ಲಿರುವುದು ನಾನಲ್ಲವೇ ಅಲ್ಲ, ನನಗೂ ಅದಕ್ಕೂ ಸಂಬಂಧ ಇಲ್ಲ
ಈ ಬಗ್ಗೆ ಎಸ್ಐಟಿ ಮುಂದೆ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಆ ವಿಡಿಯೋದಲ್ಲಿರುವುದು ನಾನಲ್ಲ, ನನಗೂ ಅದಕ್ಕೂ ಸಂಬಂಧವೇ ಇಲ್ಲ ಎಂದು ಹೇಳಿರುವುದು ಅಚ್ಚರಿ ಮೂಡಿಸಿದೆ. ನನ್ನ ತೇಜೋವಧೆ ಮಾಡಲಿಕ್ಕಾಗಿ ಈ ಕೃತ್ಯ ಎಸಗಿದ್ದಾರೆ. ಅದೊಂದು ನಕಲಿ ವಿಡಿಯೋ. ಅದನ್ನು ಸೃಷ್ಠಿ ಮಾಡಲು ಹಲವರು ಭಾಗಿಯಾಗಿದ್ದಾರೆ. ಮೊದಲು ಈ ಕೃತ್ಯದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಎಂದು ಹೇಳಿರುವ ರಮೇಶ್ ಜಾರಕಿಹೊಳಿ, ಹಲವು ವ್ಯಕ್ತಿಗಳ ಹೆಸರು ಮತ್ತು ಮಾಹಿತಿಯನ್ನು ಉಲ್ಲೇಖ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಮೇಶ್ ಜಾರಕಿಹೊಳಿ ಹೇಳಿಕೆಯ ಪ್ರಮುಖ ಅಂಶಗಳು
ಇದನ್ನೂ ಓದಿ:
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಗೋವಾದಿಂದ ಬರಿಗೈಲಿ ಹಿಂದಿರುಗಿದ ಎಸ್ಐಟಿ ತಂಡ?
ಸಿಡಿ ಯುವತಿಯಿಂದ ಲೇಟೆಸ್ಟ್ ವಿಡಿಯೋ ಬಿಡುಗಡೆ: ರಮೇಶ್ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿದೆ
Published On - 12:12 pm, Tue, 16 March 21