ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಹೈಕೋರ್ಟ್ನಿಂದ ಬೆಂಗಳೂರು ಪೊಲೀಸ್ ಕಮಿಷನರ್ಗೆ ಬಿಗ್ ರಿಲೀಫ್
Ramesh Jarkiholi Case: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಎಂ.ಎನ್. ಅನುಚೇತ್, ಇನ್ಸ್‌ಪೆಕ್ಟರ್ ಮಾರುತಿ ಬಿ. ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಲಾಗಿದೆ.
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ (Ramesh Jarkiholi CD Case) ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನೇಶ್ ಕಲ್ಲಹಳ್ಳಿ (Dinesh Kallahalli) ದೂರು ಆಧರಿಸಿ ಕೇಸ್ ದಾಖಲಿಸದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ಖಾಸಗಿ ದೂರು ಸಲ್ಲಿಸಲಾಗಿತ್ತು. ಪೊಲೀಸ್ ಆಯುಕ್ತ ಕಮಲ್ ಪಂತ್ (Kamal Pant), ಡಿಸಿಪಿ ಎಮ್.ಎನ್. ಅನುಚೇತ್ (MN Anucheth), ಇನ್ಸ್‌ಪೆಕ್ಟರ್ ಬಿ. ಮಾರುತಿ (Maruthi B) ವಿರುದ್ಧ ತನಿಖೆಗೆ ಆದೇಶ ಹೊರಡಿಸಲಾಗಿತ್ತು. ಆದರೆ, ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ಗೆ ಹೈಕೋರ್ಟ್ ರಿಲೀಫ್ ನೀಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಎಂ.ಎನ್. ಅನುಚೇತ್, ಇನ್ಸ್‌ಪೆಕ್ಟರ್ ಮಾರುತಿ ಬಿ. ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಲಾಗಿದೆ. ಈ ಪ್ರಕರಣ ರದ್ದು ಕೋರಿ ಪೊಲೀಸ್ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು.
ರಮೇಶ್ ಜಾರಕಿಹೊಳಿ ಕೇಸ್‌ನ ತನಿಖೆ ಮುಕ್ತಾಯವಾಗಿದೆ. ಅಂತಿಮ ವರದಿ ಸಲ್ಲಿಸಲು ಅನುಮತಿ ಕೋರಲಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧದ ತನಿಖೆ ಆದೇಶಕ್ಕೆ ತಡೆ ನೀಡಬೇಕೆಂದು ಹೈಕೋರ್ಟ್‌ಗೆ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಈ ವಿಚಾರಣೆ ನಡೆಸಿದ ಹೈಕೋರ್ಟ್ 8ನೇ ಎಸಿಎಂಎಂ ಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ದಿನೇಶ್ ಕಲ್ಲಹಳ್ಳಿ ದೂರು ಆಧರಿಸಿ ಕೇಸ್ ದಾಖಲಿಸದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಖಾಸಗಿ ದೂರು ದಾಖಲಾಗಿತ್ತು. ಆದರ್ಶ್ ಅಯ್ಯರ್ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್‍ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ತನಿಖೆಯ ಆದೇಶವನ್ನು ರದ್ದುಗೊಳಿಸಬೇಕೆಂದು ಮೂವರು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಖಾಸಗಿ ದೂರು ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಇನ್ಸ್‌ಪೆಕ್ಟರ್ ಮಾರುತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಯಾವುದೇ ಕರ್ತವ್ಯಲೋಪ ಎಸಗಿಲ್ಲ. ಅಲ್ಲದೆ, ದೂರುದಾರರು ಸಂತ್ರಸ್ಥೆಗೆ ಸಂಬಂಧಿಸಿದ ವಿವರಗಳನ್ನು ಆರಂಭದಲ್ಲಿ ಒದಗಿಸಿರಲಿಲ್ಲ. ಪ್ರಕರಣದಲ್ಲಿ ಆರೋಪಿತ ಮಾಜಿ ಸಚಿವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಈ ಮಧ್ಯೆ ಖಾಸಗಿ ದೂರು ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ತಮ್ಮ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿರುವ ಆದೇಶ ರದ್ದು ಮಾಡಬೇಕು ಎಂದು ಅಧಿಕಾರಿಗಳು ಕೋರಿದ್ದರು.
ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಮತ್ತು ಸುಲಿಗೆ ಆರೋಪದ ಪ್ರತಿದೂರು ಕುರಿತ ವರದಿಗಳನ್ನು ಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಬೆಂಗಳೂರು ಪೊಲೀಸ್ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ಈ ಹಿಂದೆ ಸೂಚಿಸಿತ್ತು.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ದೂರು ಆಧರಿಸಿ ಕೇಸ್ ದಾಖಲಿಸದ ಹಿನ್ನೆಲೆ; ಪೊಲೀಸರ ವಿರುದ್ಧ ತನಿಖೆಗೆ ಆದೇಶ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ತನಿಖಾ ವರದಿ ಪರಿಶೀಲಿಸುವಂತೆ ಎಸ್‌ಐಟಿ ಮುಖ್ಯಸ್ಥರಿಗೆ ಹೈಕೋರ್ಟ್ ಸೂಚನೆ
Published On - 5:23 pm, Thu, 25 November 21