Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ ಆಯ್ತು ಈಗ ದಿಲ್ಲಿಯಿಂದ ಬರುತ್ತಲ್ಲೇ ವಿಜಯೇಂದ್ರ ವಿರುದ್ಧ ಜಾರಕಿಹೊಳಿ ವಾಗ್ದಾಳಿ

ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹ ಸದ್ಯ ದೆಹಲಿ ಅಂಗಳದಲ್ಲಿದೆ. ಶಾಸಕ ಯತ್ನಾಳರ್​ನ್ನು​ ದೆಹಲಿಗೆ ಕರೆದು ಹೈಕಮಾಂಡ್​ ಕಿವಿ ಹಿಂಡಿ ಕಳಿಸಿದೆ. ಇದರ ಬೆನ್ನೆಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಲಾಯಕ್ ಇಲ್ಲ. ಹೈಕಮಾಂಡ್​ಗೂ ಮನವರಿಕೆ ಆಗಿದೆ ಎಂದು ಕಿಡಿಕಾರಿದ್ದಾರೆ.

ಯತ್ನಾಳ್​ ಆಯ್ತು ಈಗ ದಿಲ್ಲಿಯಿಂದ ಬರುತ್ತಲ್ಲೇ ವಿಜಯೇಂದ್ರ ವಿರುದ್ಧ ಜಾರಕಿಹೊಳಿ ವಾಗ್ದಾಳಿ
ಯತ್ನಾಳ್​ ಆಯ್ತು ಈಗ ದಿಲ್ಲಿಯಿಂದ ಬರುತ್ತಲ್ಲೇ ವಿಜಯೇಂದ್ರ ವಿರುದ್ಧ ಜಾರಕಿಹೊಳಿ ವಾಗ್ದಾಳಿ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Dec 05, 2024 | 9:26 PM

ಬೆಳಗಾವಿ, ಡಿಸೆಂಬರ್​ 05: ಬಿಜೆಪಿ (BJP) ಪಾಳಯದ ಬಣ ಬಡಿದಾಟ ಸದ್ಯ ದೆಹಲಿ ಅಂಗಳದಲ್ಲಿದೆ. ನಿನ್ನೆ ಶಿಸ್ತು ಸಮಿತಿ ಮುಂದೆ ಹಾಜರಾಗಿದ್ದ ಶಾಸಕ ಯತ್ನಾಳ್‌ಗೆ, ಹೈಕಮಾಂಡ್ ಖಡಕ್ ಆಗಿಯೇ ಸೂಚನೆ ನೀಡಿದೆ. ಪಕ್ಷದ ಸಂಘಟನೆಗಾಗಿ ಕೆಲಸ ಮಾಡಿ. ನಿಮಗೆ ಭವಿಷ್ಯ ಇದೆ. ಶಾಂತ ಸ್ವಭಾವದಿಂದ ವರ್ತಿಸುವಂತೆ ತಿಳಿಹೇಳಿದೆ. ಆದರೆ ಈ ಮಧ್ಯೆ ದೆಹಲಿಯಿಂದ ಆಗಮಿಸುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ರಮೇಶ್ ಜಾರಕಿಹೊಳಿ‌ ವಾಗ್ದಾಳಿ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಹುಡುಗಾಟಿಕೆ ಬುದ್ಧಿಯಿದೆ, ಸಣ್ಣ ಹುಡುಗ ಇದ್ದಾನೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಲಾಯಕ್ ಇಲ್ಲ. ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಹೇಳಿದ್ದೇವೆ. ಯಡಿಯೂರಪ್ಪನವರು ಹೋರಾಟ ಮಾಡಿ ಆ ಸ್ಥಾನಕ್ಕೆ ತಲುಪಿದ್ದರು. ಆದರೆ ಯಡಿಯೂರಪ್ಪ ಮಗನಾಗಿ ಆ ಸ್ಥಾನಕ್ಕೆ ತಲುಪಿ ವ್ಯರ್ಥವಾಗುತ್ತಿದ್ದಾರೆ. ಈಗ ಅಧ್ಯಕ್ಷ ಸ್ಥಾನ ತ್ಯಜಿಸಿ, ಅನುಭವ ಆದ್ಮೇಲೆ ಅಧ್ಯಕ್ಷರಾದರೆ ಸೂಕ್ತ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ವಿಜಯೇಂದ್ರ ರಾಜಕಾರಣದಲ್ಲಿ ಪಳಗಿದವರಲ್ಲ; ಯಡಿಯೂರಪ್ಪ ಹೋರಾಟ ಮಾಡಿದವರು: ರಮೇಶ್ ಜಾರಕಿಹೊಳಿ

ವಿಜಯೇಂದ್ರ ಬಾಯಿಬಿಟ್ಟರೆ ಬರೀ ಸುಳ್ಳು ಹೇಳುತ್ತಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಗಂಭೀರವಾಗಿ ಕೆಲಸ ಮಾಡಬೇಕು. ಆದರೆ ಬಿವೈ ವಿಜಯೇಂದ್ರ ಬಹಳ ಹತಾಶೆ ಭಾವನೆಯಿಂದ ಅಧ್ಯಕ್ಷ ಸ್ಥಾನ ನಡೆಸುತ್ತಿದ್ದಾನೆ. ವಕ್ಫ್ ವಿರುದ್ಧ ಹೋರಾಟಕ್ಕೆ ನಾವು ಬಹಳಷ್ಟು ಮನವಿ ಮಾಡಿದ್ದೆವು ಎಂದು ಹೇಳಿದ್ದಾರೆ.

ಅಧ್ಯಕ್ಷರ ಬದಲಾವಣೆ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ‌

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಾಯಕ್ ಇಲ್ಲಾ ಅಂತಾ ಪದೇ ಪದೇ ಹೇಳುತ್ತೇವೆ. ಹೈಕಮಾಂಡ್​ಗೂ ಮನವರಿಕೆ ಆಗಿದೆ. ಯಾವುದೇ ಟೈಮ್​ನಲ್ಲಿ ಏನೋ ತಿಳಿದು ಮಾಡಿದ್ದಾರೆ. ಮಾಡಿದ ಬಳಿಕ ಅವನ ನಡುವಳಿಕೆ ತಿಳ್ಸಿಕೊಟ್ಟಿದ್ದೇವೆ. ಮುಂದೆ ಏನು ಮಾಡ್ತಾರೆ ನೋಡೋಣ. ಅಧ್ಯಕ್ಷರ ಬದಲಾವಣೆ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ‌ ಎಂದಿದ್ದಾರೆ.

ಹೈಕಮಾಂಡ್ ಯಾರಿಗೂ ಏನೂ ಸೂಚನೆ ಕೊಟ್ಟಿಲ್ಲ. ಜೆಪಿಸಿ ಕಮೀಟಿಗೆ ರಿಪೋರ್ಟ್ ಕೊಟ್ಟು ಬಳಿಕ ರಾಜನಾಥ್ ಸಿಂಗ್, ಹಿರಿಯರನ್ನ ಭೇಟಿ ಆಗಿದ್ದೇವೆ. ವಕ್ಪ್ ಮುಂದುವರೆಸಿ ಒಳ್ಳೆ ಕೆಲಸ ಮಾಡ್ತಿದೀರಿ ಅಂತಾ ಹೇಳಿದ್ದಾರೆ. ಅಧಿವೇಶನದ ನಡುವೆ ಬಳ್ಳಾರಿ, ವಿಜಯನಗರ ಜಿಲ್ಲೆ ಮಾಡಬೇಕು ಅಂತಾ ಇದೆ. ತಯಾರಿ ನಡೆಸಿದ ಮೇಲೆ ಎರಡನೇ ಹಂತದ ದಿನಾಂಕ ಘೋಷಣೆ ಮಾಡುತ್ತೇವೆ. ಮೇಲುಗೈ ಯಾರದ್ದು ಆಗುತ್ತೆ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು. ಅವರು ಏನೂ ತೀರ್ಮಾನ ತೆಗೆದುಕೊಳ್ಳುತ್ತಾರೆ ಒಪ್ಪುತ್ತೇವೆ. ನಮ್ಮ ಪರವಾಗಿ ಕೊಡ್ತಾರೋ ಯಾರ ಪರವಾಗಿ ಕೊಡ್ತಾರೆ ಗೊತ್ತಿಲ್ಲ. ನಮ್ಮ ಪಕ್ಷದ ವಿಚಾರ ಇದೆ ಆಂತರಿಕವಾಗಿ ಬಗೆ ಹರಿಸುತ್ತೇವೆ ಎಂದರು.

ವಕ್ಫ್ ಕೆಲಸಕ್ಕೆ ಎಲ್ಲರೂ ಮೆಚ್ಚುಗೆ

ವಕ್ಫ್ ವಿಚಾರವಾಗಿ ಜೆಪಿಸಿ ಅಧ್ಯಕ್ಷರನ್ನು ಭೇಟಿಯಾಗಿ ಬಂದಿದ್ದೇವೆ. ವಕ್ಫ್ ವಿರುದ್ಧದ ಮೊದಲ ಹಂತದ ಹೋರಾಟದ ವರದಿ ಸಲ್ಲಿಸಿದ್ದೇವೆ. ವಕ್ಫ್ ವಿರುದ್ಧ 2ನೇ ಹಂತದ ಹೋರಾಟಕ್ಕೆ ದಿನಾಂಕ ನಿಗದಿ ಮಾಡ್ತೇವೆ. ನಮ್ಮ ಕೆಲಸಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:25 pm, Thu, 5 December 24

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​