AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿಗೆ ಏನಾಗಿತ್ತು? ಉಸಿರಾಟದ ತೊಂದರೆಯಾಗಿ, ನಿನ್ನೆ ರಾತ್ರಿಯೇ ಐಸಿಯುಗೆ ದಾಖಲು ಎಂದ ಡಾ.ರವೀಂದ್ರ

ರಮೇಶ್ ಜಾರಕಿಹೊಳಿಗೆ ಏಪ್ರಿಲ್​ ಒಂದರಂದೇ ಕೊವಿಡ್​ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಬಳಿಕ ಎರಡು ದಿನ ಹೋಮ್ ಐಸೋಲೇಷನ್​ನಲ್ಲಿ ಇದ್ದ ಅವರು ನಿನ್ನೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋಕಾಕ್ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗಿದೆ.

ರಮೇಶ್​ ಜಾರಕಿಹೊಳಿಗೆ ಏನಾಗಿತ್ತು? ಉಸಿರಾಟದ ತೊಂದರೆಯಾಗಿ, ನಿನ್ನೆ ರಾತ್ರಿಯೇ ಐಸಿಯುಗೆ ದಾಖಲು ಎಂದ ಡಾ.ರವೀಂದ್ರ
ರಮೇಶ್​ ಜಾರಕಿಹೊಳಿ, ಡಾ.ರವೀಂದ್ರ
Skanda
|

Updated on:Apr 05, 2021 | 12:07 PM

Share

ಬೆಳಗಾವಿ: ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ಡಾ.ರವೀಂದ್ರ ವಿವರಣೆ ನೀಡಿದ್ದು, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನಿನ್ನೆ ರಾತ್ರಿ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಶುಗರ್, ಬಿಪಿಯಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೊವಿಡ್ ನಿಯಮದಂತೆ ಇನ್ನೂ 5 ದಿನ ಆಸ್ಪತ್ರೆಯಲ್ಲಿರಬೇಕು ಎಂದು ತಿಳಿಸಿದ್ದಾರೆ.

ಗೋಕಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ರಮೇಶ್​ ಜಾರಕಿಹೊಳಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಹಿಂದಿನಿಂದಲೂ ಗೋಕಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಿದ್ದರು. ಸದ್ಯ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ, ಬೆಂಗಳೂರಿಗೆ ಹೋಗಿ ಬಂದಿದ್ದ ಕಾರಣ ಅವರಿಗೆ ರ‍್ಯಾಪಿಡ್ ಟೆಸ್ಟ್​ ಮಾಡಲಾಗಿದ್ದು, ಪಾಸಿಟಿವ್ ಕಾಣಿಸಿಕೊಂಡಿದೆ. ತಜ್ಞ ವೈದ್ಯರ ನಿಗಾದಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿಗೆ ಏಪ್ರಿಲ್​ ಒಂದರಂದೇ ಕೊವಿಡ್​ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಬಳಿಕ ಎರಡು ದಿನ ಹೋಮ್ ಐಸೋಲೇಷನ್​ನಲ್ಲಿ ಇದ್ದ ಅವರು ನಿನ್ನೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋಕಾಕ್ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಅಲ್ಲಿಯ ವೈದ್ಯ ಡಾ‌.ರವೀಂದ್ರ ಅಂಟೀನ್ ಹೇಳಿದ್ದಾರೆ.

Ramesh jarkiholi

ರಮೇಶ್​ ಜಾರಕಿಹೊಳಿ

ಇದನ್ನೂ ಓದಿ: Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ

ವಿಚಾರಣೆಗೆ 15 ದಿನ ಕ್ವಾರಂಟೈನ್?: ‘ರಮೇಶ್ ಜಾರಕಿಹೊಳಿಗೆ ಕೊರೊನಾ ಇದೆ’ ಎಂದ ಸಚಿವ ಭೈರತಿ ಬಸವರಾಜು

Published On - 12:05 pm, Mon, 5 April 21

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ