Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ

|

Updated on: Apr 06, 2021 | 2:54 PM

ಮಾಜಿ ಸಚಿವ ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಸ್ಪಷ್ಟನೆ ನೀಡಿದ್ದಾರೆ. ಏಪ್ರಿಲ್​ 1ರಂದು ಗೋಕಾಕ ಆಸ್ಪತ್ರೆಗೆ ಬಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ
Follow us on

ಬೆಳಗಾವಿ: ಅಶ್ಲೀಲ ಸಿಡಿ ಪ್ರಕರಣದಲ್ಲಿ ಎಸ್​ಐಟಿ ತನಿಖೆಯನ್ನು ಎದುರು ನೋಡುತ್ತಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದೊಂದು ವಾರದಿಂದ ರಮೇಶ್​ ಜಾರಕಿಹೊಳಿ ಅನಾರೋಗ್ಯಪೀಡಿತರಾಗಿರುವುದಾಗಿ, ಕೊರೊನಾಕ್ಕೆ ತುತ್ತಾಗಿರುವುದಾಗಿ ಅನುಮಾನ, ಆತಂಕ, ಗೊಂದಲಗಳು ಹರಿದಾಡುತ್ತಿದ್ದವು. ಸದ್ಯ ಇದಕ್ಕೆಲ್ಲಾ ತೆರೆ ಬಿದ್ದಿದ್ದು ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿರುವುದಾಗಿ ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಸ್ಪಷ್ಟನೆ ನೀಡಿದ್ದಾರೆ. ಏಪ್ರಿಲ್​ 1ರಂದು ಗೋಕಾಕ ಆಸ್ಪತ್ರೆಗೆ ಬಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ ಎಂದು ಆರೋಗ್ಯಾಧಿಕಾರಿಗಳು ಟಿವಿ9ಗೆ ತಿಳಿಸಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ಹೊತ್ತಿನ ಮುಂಚೆಯೇ ಮಾತನಾಡಿದ್ದ ಸಚಿವ ಭೈರತಿ ಬಸವರಾಜು, ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​ ಇದೆ ಎಂದು ಗೊತ್ತಾಗಿದೆ. ಹೀಗಾಗಿ ಅವರು ಬೈಎಲೆಕ್ಷನ್​ ಪ್ರಚಾರಕ್ಕೆ ಬರುವ ಸಾಧ್ಯತೆ ಕಡಿಮೆ ಎಂದು ಬೆಳಗಾವಿಯಲ್ಲಿ ಹೇಳಿದ್ದರು. ಉಪಚುನಾವಣೆ ಪ್ರಚಾರಕ್ಕೆ ಕರೆಯುವ ಸಲುವಾಗಿ ನಾನು ರಮೇಶ್ ಜಾರಕಿಹೊಳಿ ಅವರಿಗೆ ಕರೆ ಮಾಡಿದ್ದೆ. ಆದರೆ, ಅವರು ಪ್ರಚಾರಕ್ಕೆ ಬರುವುದು ಅನುಮಾನ. ನಾನು ಫೋನ್ ಮಾಡಿದ್ದಾಗ ರಮೇಶ್ ಜಾರಕಿಹೊಳಿ ಅವರೇ ತಮಗೆ ಕೊರೊನಾ ಇರುವುದಾಗಿ ಮಾಹಿತಿ ನೀಡಿದ್ದಾರೆಂದು ಭೈರತಿ ಬಸವರಾಜು ತಿಳಿಸಿದ್ದರು. ಸದ್ಯ ಎಸ್​ಐಟಿ ವಿಚಾರಣೆಗೂ ಅನಾರೋಗ್ಯ ನೆಪವೊಡ್ಡಿ ತಪ್ಪಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ರಮೇಶ್ ಜಾರಕಿಹೊಳಿ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು. ಆದರೆ, ಇದೀಗ ಕೊರೊನಾ ದೃಢಪಟ್ಟಿರುವುದರಿಂದ ಕೆಲದಿನಗಳ ಕಾಲ ರಮೇಶ್​ ಜಾರಕಿಹೊಳಿ ಬಹಿರಂಗವಾಗಿ ಕಾಣಿಸಿಕೊಳ್ಳುವುದು ಕಷ್ಟವಾಗಲಿದೆ.

ಎಸ್​​ಐಟಿ ತನಿಖೆ ಕತೆ ಏನಾಗಲಿದೆ?
ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಎಸ್​ಐಟಿ ತನಿಖೆ ಕತೆ ಏನಾಗಲಿದೆ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸಿದೆ. ಈಗಾಗಲೇ ಎಸ್​ಐಟಿ ತನಿಖಾಧಿಕಾರಿಗಳು ರಮೇಶ್​ ಜಾರಕಿಹೊಳಿಗೆ ನೋಟಿಸ್​ ನೀಡಿ ಇಂದು (ಏಪ್ರಿಲ್​ 5) ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದರು. ಆದರೆ, ಇದೀಗ ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಅವರೇ ತಿಳಿಸಿದಂತೆ ರಮೇಶ್​ ಜಾರಕಿಹೊಳಿಗೆ ಕೊರೊನಾ ದೃಢಪಟ್ಟಿರುವುದರಿಂದ ಕೊರೊನಾ ನಿಯಮಾವಳಿಗಳನ್ನು ಪಾಲಿಸಿ, ಸೂಕ್ತ ಚಿಕಿತ್ಸೆ ಪಡೆದು ಮತ್ತೆ ತನಿಖೆಗೆ ಹಾಜರಾಗಲು ಕನಿಷ್ಠ 15 ದಿನಗಳಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಎಸ್​​ಐಟಿ ಅಧಿಕಾರಿಗಳು ಯಾವ ರೀತಿ ಹೆಜ್ಜೆ ಇಡಲಿದ್ದಾರೆ. ತನಿಖೆ ಯಾವ ಆಯಾಮ ಪಡೆದುಕೊಳ್ಳಲಿದೆ ಎಂಬುದು ಸದ್ಯದ ಕುತೂಹಲ.

ಗೋಕಾಕ ತಾಲ್ಲೂಕು ಆಸ್ಪತ್ರೆ

ಇದನ್ನೂ ಓದಿ:
ವಿಚಾರಣೆಗೆ 15 ದಿನ ಕ್ವಾರಂಟೈನ್?: ‘ರಮೇಶ್ ಜಾರಕಿಹೊಳಿಗೆ ಕೊರೊನಾ ಇದೆ’ ಎಂದ ಸಚಿವ ಭೈರತಿ ಬಸವರಾಜು 

ಮಹಾಂತೇಶ ಕವಟಗಿಮಠಗೆ ಕೊರೊನಾ ಪಾಸಿಟಿವ್; ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ ನಾಯಕರಿಗೆ ಶುರುವಾಯ್ತು ಆತಂಕ

Published On - 11:32 am, Mon, 5 April 21