ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಇರುವ ಈ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆ ಮೂಲಕ ರಮೇಶ್ ಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ
ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 30, 2024 | 10:44 AM

ಕೋಲಾರ, ಅಕ್ಟೋಬರ್​ 30: ಮಾಜಿ ಸ್ಪೀಕರ್​ ರಮೇಶ್​ ಕುಮಾರ್ (Ramesh Kumar)​ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಆ ಮೂಲಕ ರಮೇಶ್ ಕುಮಾರ್​ಗೆ ಮತ್ತೆ ಸಂಕಷ್ಟ ಎದುರಾಗಿದೆ.

ನ.6ರಂದು ಅರಣ್ಯ ಇಲಾಖೆ & ಕಂದಾಯ ಇಲಾಖೆ ಜಂಟಿ ಸರ್ವೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಹೊಸಹುಡ್ಯ ಸರ್ವೆ ನಂ.1, 2ರಲ್ಲಿನ 122 ಎಕರೆ ಭೂಮಿಯನ್ನು ಏಳು ಜನ ಒತ್ತುವರಿದಾರರ ಪೈಕಿ ರಮೇಶ್​ ಕುಮಾರ್ ಸಹ ಒಬ್ಬರಾಗಿದ್ದಾರೆ.

ಇದನ್ನೂ ಓದಿ: Waqf Land Notice: ಮಂಡ್ಯದಲ್ಲೂ ವಕ್ಫ್ ಸಮಸ್ಯೆ, ವಿಜಯಪುರದ ಮತ್ತೊಂದು ಮಠಕ್ಕೆ ಬಂತು ನೋಟಿಸ್

ಈ ಹಿಂದೆ ದಿವಂಗತ ಡಿ.ಕೆ.ರವಿ ಡಿಸಿ ಆಗಿದ್ದಾಗ ಜಂಟಿ ಸರ್ವೆ ಮಾಡಲಾಗಿತ್ತು. ಹಲವು ಗೊಂದಲಗಳಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಮರು ಸರ್ವೆ ಮಾಡಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಸರ್ವೆ ವೇಳೆ ಸ್ಥಳದಲ್ಲಿ ಹಾಜರಿರುವಂತೆ ರಮೇಶ್ ಕುಮಾರ್​ಗೆ ಪತ್ರ ಬರೆಯಲಾಗಿತ್ತು.

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ವಲಯದ ಜಿನಗಲಕುಂಟೆ ಗ್ರಾಮದಲ್ಲಿ 64 ಎಕರೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಲಾಗಿದೆ. ಸಮೀಕ್ಷೆ ಸಂಖ್ಯೆಯ ಅಡಿಯಲ್ಲಿ ಭೂಮಿಯ ಮೇಲೆ ಜಂಟಿ ಸಮೀಕ್ಷೆಯನ್ನು ನಡೆಸಬೇಕು. ಒತ್ತುವರಿ ಕಂಡುಬಂದಲ್ಲಿ, ಅದನ್ನು ತೆರವುಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು.

ರಾಜ್ಯ ಅರಣ್ಯ ಇಲಾಖೆಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೆಂಗುಟ್ಟಿವೇಲ್​ ಇತ್ತೀಚೆಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: 700 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಆದೇಶ

ಇನ್ನೂ ಈ ಬಗ್ಗೆ ಡಿಎಫ್​ಓ ಏಡುಕುಂಡಲ ಪ್ರತಿಕ್ರಿಯಿಸಿದ್ದು, ಜಿನಗಲಕುಂಟೆ ಅರಣ್ಯ ವಲಯದಲ್ಲಿ 122 ಎಕರಿ ಅರಣ್ಯ ಒತ್ತುವರೆ ಆಗಿದೆ ಎಂಬ ಬಗ್ಗೆ ಗೊಂದಗಳಿದ್ದ ಕಾರಣ ಯಾವುದೇ ಕ್ರಮವಾಗಿಲ್ಲ. ಆದರೆ ಅದರಲ್ಲಿ 2013ರಲ್ಲಿ ಉಚ್ಛ ನ್ಯಾಯಾಲಯ ಜಂಟಿ ಸರ್ವೆ ಸಂಪೂರ್ಣ ಮುಗಿಸಬೇಕು. ಒಂದು ಒತ್ತುವರೆ ಮಾಡುವುರುದು ದೃಢವಾದಲ್ಲಿ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:43 am, Wed, 30 October 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ