ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ನೆಲೆಸಿದ್ದ ಬಂಧಿತ ಉಗ್ರರ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಮುಸಾವೀರ್​ ಹುಸೇನ್​ ಶಾಜಿಬ್​ ಮತ್ತು ಅಬ್ದುಲ್​ ಮತೀನ್​ ತಾಹಾ ಭಯೋತ್ಪಾದಕ ಸಂಘಟನೆ ಐಸಿಸ್​ ಜೊತೆ ಸಂಪರ್ಕ ಹೊಂದಿದ್ದರು. ಇವರು ಬೆಂಗಳೂರಿನ ಸುದ್ದುಗುಂಟೆಪಾಳ್ಯದಲ್ಲಿ ವಾಸವಾಗಿದ್ದರು.

ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ನೆಲೆಸಿದ್ದ ಬಂಧಿತ ಉಗ್ರರ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ
ಬಂಧಿತ ಉಗ್ರರು
Follow us
TV9 Web
| Updated By: ವಿವೇಕ ಬಿರಾದಾರ

Updated on: Apr 14, 2024 | 11:04 AM

ಬೆಂಗಳೂರು, ಏಪ್ರಿಲ್​ 14: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪಕ್ರರಣದ ಪ್ರಮುಖ ಆರೋಪಿಗಳಾದ, ಐಸಿಸ್ (ISIS)​ ಜೊತೆ ನಂಟು ಹೊಂದಿರುವ ಉ್ರಗರಾದ ಮುಸಾವೀರ್​ ಹುಸೇನ್​ ಶಾಜಿಬ್​ ಮತ್ತು ಅಬ್ದುಲ್​ ಮತೀನ್​ ತಾಹಾ ಅನ್ನು ಶುಕ್ರವಾರ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಈ ಇಬ್ಬರೂ ಐಸಿಸ್​ ಜೊತೆ ನೇರ ನಂಟು ಹೊಂದಿದ್ದ ಮೆಹಬೂಬ್ ಪಾಷಾನ ಸಂರ್ಪಕದಲ್ಲಿದ್ದರು. ಮೆಹಬೂಬ್ ಪಾಷಾ 2020ರಲ್ಲಿ ಬೆಂಗಳೂರಿನ ಸುದ್ದುಗುಂಟೆಪಾಳ್ಯದ ಮನೆಯಲ್ಲಿ ವಾಸವಿದ್ದನು. ಸುದ್ದಗುಂಟೆ ಪೊಲೀಸ್​ ಠಾಣೆ ವ್ಯಾಪ್ತಿಯ ಸೂರ್ಯ ರೆಸಿಡೆನ್ಸಿಯ ಎರಡನೇ ಮಹಡಿಯ ಮನೆಯಲ್ಲಿದ್ದನು. ಈ ಹೆಸರನ್ನು ಬದಲಿಸಿಕೊಂಡು ಮನೆ ಬಾಡಿಗೆ ಪಡೆದಿದ್ದನು.

ಒಂದು ವರ್ಷಕ್ಕೂ ಹೆಚ್ಚು ಕಾಲ ಬೆಂಗಳೂರಿನಲ್ಲಿ ವಾಸವಿದ್ದ ಮೆಹಬೂಬ್ ಪಾಷಾ​ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದನು. ಸಾಮಾಜಿಕ ಕಾರ್ಯ ಮಾಡುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ “ಅಲ್ ಹಿಂದ್ ಐಸಿಸ್” ಎಂಬ ಹೆಸರಿನ NGO ಸ್ಥಾಪನೆ ಮಾಡಲು ಮುಂದಾಗಿದ್ದನು. ಈ ಎನ್​ಜಿಒ ಮೂಲಕ ಮುಸ್ಲಿಂ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಜೋಡಿಸುತ್ತಿದ್ದನು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟದ ಮಾಸ್ಟರ್​ ಮೈಂಡ್​​ ಮತೀನ್​ ನಿವೃತ್ತ ಯೋಧನ ಮಗ

ಈ ಸಂಬಂಧ ಮೆಹಬೂಬ್ ಪಾಷಾ ಗುರಪ್ಪನಪಾಳ್ಯದ ಮನೆಯಲ್ಲಿ ಶಂಕಿತ ಉಗ್ರರ ಜೊತೆ ಸರಣಿ ಸಭೆ ನಡೆಸುತ್ತಿದ್ದನು. ಈ ಸಭೆಯಲ್ಲಿ ಮುಸಾವಿರ್ ಹುಸೇನ್ ಮತ್ತು ಅಬ್ದುಲ್ ಮತಿನ್ ಕೂಡ ಭಾಗಿಯಾಗಿದ್ದರು. ಬಳಿಕ ಮುಸಾವಿರ್ ಹುಸೇನ್ ಮತ್ತು ಅಬ್ದುಲ್ ಮತಿನ್ ಕೂಡ ಶಿವಮೊಗ್ಗದಲ್ಲಿ “ದುವಾ” ಎಂಬ ಹೆಸರಿನ ಎನ್​ಜಿಒ ತೆರೆದಿದ್ದರು. ಸಾಮಾಜಿಕ ಸೇವೆ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಸೇರಿಸಿ ಜಿಹಾದಿ ಭೋದಿಸುತ್ತಿದ್ದರು.

ಈ ಮಾಹಿತಿ ತಿಳಿದು ಮೆಹಬೂಬ್ ಪಾಷಾ ಮನೆ ಮೇಲೆ CCB ಮತ್ತು ಗುಪ್ತಚರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮೆಹಬೂಬ್ ಪಾಷಾ ಜೊತೆ ಹಲವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆದರೆ ಮುಸಾವಿರ್, ಮತೀನ್​ ಪರಾರಿಯಾಗಿ ತಲೆಮರೆಸಿಕೊಂಡಿದ್ದರು.

2021ರಲ್ಲಿ ತಲೆ ಮರೆಸಿಕೊಂಡಿದ್ದ ಮುಸಾವಿರ್, ಮತೀನ್ ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ