ರಾಮೇಶ್ವರಂ ಬಾಂಬ್​ ಬ್ಲಾಸ್ಟ್​​: ಅಗತ್ಯ ಬಿದ್ದರೆ ಎನ್​ಐಎ ತನಿಖೆಗೆ; ಸಿದ್ದರಾಮಯ್ಯ

Bengaluru Rameshwaram Cafe Bomb Blast: ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿರುವ ರಾಮೇಶ್ವರಂ ಯಾರು ಸಿಕ್ಕಿಲ್ಲ, ಸಿಕ್ಕರೇ ನೋಡೋಣ. ಅಗತ್ಯ ಬಿದ್ದರೆ ಎನ್​ಐಎಗೆ ನೀಡಲಾಗುವುದು. ಬಾಂಬ್​ ಬ್ಲಾಸ್ಟ್​​ ಸಿಲ್ಲಿ ಪ್ರಕರಣ ಅಲ್ಲ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಮೇಶ್ವರಂ ಬಾಂಬ್​ ಬ್ಲಾಸ್ಟ್​​: ಅಗತ್ಯ ಬಿದ್ದರೆ ಎನ್​ಐಎ ತನಿಖೆಗೆ; ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
|

Updated on: Mar 04, 2024 | 7:40 AM

ಚಿಕ್ಕಮಗಳೂರು, ಮಾರ್ಚ್​​ 04: ನಗರದ ವೈಟ್‌ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Bengaluru Rameshwaram Cafe Bomb Blast) ಸಂಭವಿಸಿ ಮೂರು ದಿನಗಳು ಕಳೆದಿದೆ. ಬೆಂಗಳೂರು ಪೊಲೀಸರು ಪ್ರಕರಣವನ್ನು ಭೇದಿಸಲು 8 ತಂಡಗಳನ್ನು ರಚಿಸಿದ್ದಾರೆ. ಆದರೂ ಕೂಡ ಯಾವುದೇ ಪ್ರಗತಿ ಕಂಡು ಬರುತ್ತಿಲ್ಲ. ಏತನ್ಮಧ್ಯೆ, ಈ ಪ್ರಕರಣದ ತನಿಖೆಯನ್ನು ಅಗತ್ಯ ಬಿದ್ದರೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ಪ್ರಕರಣವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಎನ್​ಐಗೆ ನೀಡಬೇಕೆಂಬ ಬಿಜೆಪಿ ನಾಯಕರ ಆಗ್ರಹ ವಿಚಾರವಾಗಿ ಮಾತನಾಡಿದ ಅವರು, ಯಾರು ಸಿಕ್ಕಿಲ್ಲ, ಸಿಕ್ಕರೇ ನೋಡೋಣ. ಅಗತ್ಯ ಬಿದ್ದರೆ ಎನ್​ಐಎಗೆ ನೀಡಲಾಗುವುದು. ಬಾಂಬ್​ ಬ್ಲಾಸ್ಟ್​​ ಸಿಲ್ಲಿ ಪ್ರಕರಣ ಅಲ್ಲ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರಕ್ಕೆ ಜನರ ಭದ್ರತೆ ಮುಖ್ಯ, ಜನರಿಗೆ ರಕ್ಷಣೆ ಕೊಡಬೇಕು ಎಂದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್‌ ಬೇಟೆಗಾಗಿ ಪೊಲೀಸರ ತಲಾಶ್: ಶಂಕಿತನ ಮತ್ತೊಂದು ದೃಶ್ಯ ಲಭ್ಯ, ಇಲ್ಲಿದೆ ಪ್ರಕರಣದ ಸಮಗ್ರ ಮಾಹಿತಿ

ಬ್ರ್ಯಾಂಡ್​ ಬೆಂಗಳೂರು ಬಾಂಬ್​ ಬೆಂಗಳೂರು ಆಗುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಅವರ ಕಾಲದಲ್ಲೂ ಬಾಂಬ್​ ಬ್ಲಾಸ್ಟ್​ ಆಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ? 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು? ಇದು ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಎನ್.ಐ.ಎ, RAW ಗಳ ವೈಫಲ್ಯವಲ್ಲವೇ? ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಹಾಗೂ ಹಿಂದೊಮ್ಮೆ ಬಿಜೆಪಿ ಕಚೇರಿ ಮುಂದೆಯೇ ಬಾಂಬ್ ಸ್ಫೋಟವಾಗಿತ್ತು. ಆಗ ಬಿಜೆಪಿಯೇ ಅಧಿಕಾರದಲ್ಲಿದ್ದರು. ಅವರಂತೆಯೇ ಇದನ್ನು ನಾವು ರಾಜಕೀಯ ದೃಷ್ಟಿಯಿಂದ ನೋಡಿದೆವಾ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಟ್ವೀಟ್

ಕಾಂಗ್ರೆಸ್ ಸರ್ಕಾರ ಸಮಾಜ ವಿರೋಧಿ ಶಕ್ತಿಗಳು ಮತ್ತು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಹಾನುಭೂತಿ ಹೊಂದಿದೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟವನ್ನು ರಾಜಕೀಯಗೊಳಿಸಲು ಬಿಜೆಪಿ ಪ್ರಯತ್ನಿಸುವ ಮೂಲಕ ಕರ್ನಾಟಕ ಮತ್ತು ಬೆಂಗಳೂರಿನ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ