ಕಾಂಗ್ರೆಸ್​ನಲ್ಲಿ ಒಡಕಿಲ್ಲ, ಬಿಜೆಪಿಯದ್ದು ಸುಳ್ಳು ಆರೋಪ; ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿ ಕಂಗಾಲು: ರಣದೀಪ್ ಸುರ್ಜೆವಾಲ

Randeep Singh Surjewala in Bengaluru: ಸಿಎಂ ಮತ್ತು ಡಿಸಿಎಂ ಮಧ್ಯೆ ಯಾವ ಒಡಕಿಲ್ಲ. ಇದೆಲ್ಲವೂ ಕೆಲ ಮಾಧ್ಯಮಗಳ ಸೃಷ್ಟಿ ಮಾತ್ರ ಎಂದು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಸರ್ವಸದಸ್ಯರ ಸಭೆಯ ವೇಳೆ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಯಲ್ಲೇ ಹಲವು ಬಣಗಳಿವೆ. ವಿಜಯೇಂದ್ರ, ಯತ್ನಾಳ, ಅಶೋಕ್, ಅಶ್ವತ್ಥನಾರಾಯಣ ಅವರ ಬಣಗಳ ನಡುವೆ ಜಗಳ ಇದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್​ನಲ್ಲಿ ಒಡಕಿಲ್ಲ, ಬಿಜೆಪಿಯದ್ದು ಸುಳ್ಳು ಆರೋಪ; ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿ ಕಂಗಾಲು: ರಣದೀಪ್ ಸುರ್ಜೆವಾಲ
ರಣದೀಪ್ ಸುರ್ಜೆವಾಲ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 13, 2025 | 1:27 PM

ಬೆಂಗಳೂರು, ಜನವರಿ 13: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಬಿಜೆಪಿಯವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಈ ಆರೋಪ ಮಾಡುತ್ತಿದ್ದಾರೆ. ಕೆಲ ಮಾಧ್ಯಮಗಳ ಗುಂಪಿನಿಂದ ಈ ಗೊಂದಲ ಸೃಷ್ಟಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ. ಇಂದು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡುತ್ತಾ ಈ ವಿಚಾರವನ್ನು ಪ್ರಸ್ತಾಪಿಸಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 58 ಸಾವಿರ ಕೋಟಿ ರೂಗಳ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಇವುಗಳ ಲಾಭ ಜನತೆಗೆ ಸಿಗುತ್ತಿದೆ. ಇವು ದೇಶದ ದೊಡ್ಡ ಯೋಜನೆಗಳೆನಿಸಿವೆ. ಇವುಗಳ ಯಶಸ್ಸಿನಿಂದ ಬಿಜೆಪಿ ಹತಾಶೆಗೊಂಡಿದೆ. ಇದನ್ನು ಮರೆಮಾಚಲು ಕಾಂಗ್ರೆಸ್​ನಲ್ಲಿ ಇಲ್ಲದ ಒಡಕನ್ನು ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ರಣದೀಪ್ ಸುರ್ಜೆವಾಲ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ತಿಂಥಿಣಿ ಕನಕಗುರುಪೀಠದ ಸ್ವಾಮೀಜಿ ಅಸಮಾಧಾನ

ಕರ್ನಾಟಕ ಘಟಕದ ಬಿಜೆಪಿಯಲ್ಲಿ ಬೇರೆ ಬೇರೆ ಬಣಗಳಿವೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬಣ ಇದೆ. ಇನ್ನೊಂದೆಡೆ ಬಸನಗೌಡ ಪಾಟೀಲ್ ಯತ್ನಾಳರದ್ದು ಬಣ ಇದೆ. ಮತ್ತೊಂದೆಡೆ ಆರ್ ಅಶೋಕ್ ಅವರ ಬಣ ಇದೆ. ಮಗದೊಂದೆಡೆ ಅಶ್ವತ್ಥ ನಾರಾಯಣ ಅವರ ಬಣ ಇದೆ ಎಂದು ಬಿಜೆಪಿ ವಿರುದ್ಧ ಸುರ್ಜೆವಾಲ ವ್ಯಂಗ್ಯ ಮಾಡಿದ್ದಾರೆ.

ವಿಜಯೇಂದ್ರ ವಿರುದ್ಧ ಯತ್ನಾಳ ವಾಗ್ದಾಳಿ ನಡೆಸುತ್ತಿದ್ದಾರೆ. ಯತ್ನಾಳರಿಗೆ ರಮೇಶ್ ಜಾರಕಿಹೊಳಿ ಬೆಂಬಲ ನೀಡುತ್ತಿದ್ದಾರೆ. ಬಿಜೆಪಿಯ ಆಂತರಿಕ ಕಿತ್ತಾಟಕ್ಕೆ ಜೆಡಿಎಸ್ ಕೂಡ ಬೆಂಬಲ ನೀಡುತ್ತಿದೆ. ಈ ಎಲ್ಲಾ ಹತಾಶೆಗಳನ್ನು ಮುಚ್ಚಿಹಾಕಲು ಕಾಂಗ್ರೆಸ್ ವಿರುದ್ಧ ಬಿಜೆಪಿ ಇಲ್ಲದ ಆರೋಪ ಮಾಡುತ್ತಿದೆ ಎಂದು ರಣದೀಪ್ ಸುರ್ಜೆವಾಲ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಒಡಕಿಲ್ಲ. ಸಿಎಂ ಮತ್ತು ಡಿಸಿಎಂ ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್​ನ ಉಸ್ತುವಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ದಲಿತ ನಾಯಕರು ಊಟ ಮಾಡುವುದಕ್ಕೂ ನಿರ್ಬಂಧ ಹೇರಿದರೆ ಹೇಗೆ ಸ್ವಾಮಿ? ಪ್ರಿಯಾಂಕ್ ಖರ್ಗೆ

ರಣದೀಪ್ ಸಿಂಗ್ ಸುರ್ಜೆವಾಲ ಇವತ್ತು ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಪಿಸಿಸಿ ಸರ್ವಸದಸ್ಯರ ಸಭೆಯೂ ಸೇರಿದಂತೆ ಇವತ್ತು ಮೂರು ಸಭೆಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಆ ಸಭೆಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
ಇಂದು ಬನದ ಹುಣ್ಣಿಮೆ, ಈ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಇಂದು ಬನದ ಹುಣ್ಣಿಮೆ, ಈ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಹಸುಗಳ ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆ ಎಂದ ಸಚಿವ ಜಮೀರ್
ಹಸುಗಳ ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆ ಎಂದ ಸಚಿವ ಜಮೀರ್