ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ: ಇಂದಿನ ಸಭೆಯಲ್ಲಿ ಏನೆಲ್ಲ ಚರ್ಚೆ? ಸುರ್ಜೆವಾಲ ಹೇಳಿದ್ದಿಷ್ಟು

ಕಾಂಗ್ರೆಸ್ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದೆ. ಇದರಕ್ಕೆ ಪೂರಕವೆಂಬಂತೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ. ಇನ್ನು ಈ ಸಭೆಯ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಅದು ಈ ಕೆಳಗಿನಂತಿದೆ ನೋಡಿ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ: ಇಂದಿನ ಸಭೆಯಲ್ಲಿ ಏನೆಲ್ಲ ಚರ್ಚೆ? ಸುರ್ಜೆವಾಲ ಹೇಳಿದ್ದಿಷ್ಟು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 19, 2024 | 8:54 PM

ಬೆಂಗಳೂರು, (ಜನವರಿ 19): ಲೋಕಸಭಾ ಚುನಾವಣೆ (Loksabha Elections 2024) ಸಂಬಂಧ ಕರ್ನಾಟಕ ಕಾಂಗ್ರೆಸ್, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿದ್ದು, ಈ ಸಂಬಂಧ ಮಹತ್ವದ ಸಭೆ ಮಾಡಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಸುದೀರ್ಘವಾಗಿ ಚರ್ಚೆಗಳು ನಡೆದಿವೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಇಂದು ನಡೆದ ಸಭೆಯಲ್ಲಿ ಹಲವು ಅಭ್ಯರ್ಥಿಗಳ ಹೆಸರು ಪ್ರಸ್ತಾಪವಾಗಿದ್ದು, ಜನವರಿ ಅಂತ್ಯದೊಳಗೆ ಅಭ್ಯರ್ಥಿಗಳ ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇಂದು ನಡೆದ ಸಭೆಯಲ್ಲಿ ಹಲವು ಅಭ್ಯರ್ಥಿಗಳ ಹೆಸರು ಪ್ರಸ್ತಾಪವಾಗಿದ್ದು, ಕೇಂದ್ರ ಚುನಾವಣಾ ಸಮಿತಿ ಅಧ್ಯಕ್ಷ ಚೌಧರಿ ಭಾಗಿಯಾಗಿದ್ದರು. ಎಲ್ಲಾ ಸದಸ್ಯರಿಗೆ ವೈಯಕ್ತಿಕ ಅಭಿಪ್ರಾಯ ತಿಳಿಸುವಂತೆ ಹೇಳಿದ್ದೇವೆ. ಈ ತಿಂಗಳ ಅಂತ್ಯದೊಳಗೆ ಕೇಂದ್ರ ಚುನಾವಣಾ ಸಮಿತಿಗೆ ಹೆಸರುಗಳನ್ನು ಶಿಫಾರಸು ಮಾಡಬೇಕು. ಬಳಿಕ ಡಿಸಿಸಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಆಕಾಂಕ್ಷಿಗಳ ಜತೆ ವಿಸ್ತೃತ ಚರ್ಚೆ ನಂತರ ಅಭ್ಯರ್ಥಿ ಹೆಸರು ಅಂತಿಮಗೊಳಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಕುಮಾರಸ್ವಾಮಿ ನೇತೃತ್ವ: ಅಮಿತ್ ಶಾ ಆಹ್ವಾನ

ಇನ್ನು ಲೋಕಸಭಾ ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಸುರ್ಜೆವಾಲ, ಕೆಪಿಸಿಸಿಯಿಂದ ಸ್ಕ್ರೀನಿಂಗ್ ಕಮಿಟಿಗೆ ಶಿಫಾರಸು ಹೋಗುತ್ತದೆ. ಅಲ್ಲಿಂದ ಕೇಂದ್ರ ಚುನಾವಣಾ ಸಮಿತಿಗೆ ಹೋಗುತ್ತದೆ. ಬಳಿಕ ಕೇಂದ್ರ ಚುನಾವಣಾ ಸಮಿತಿ ಎಲ್ಲವನ್ನೂ ನಿರ್ಧಾರ ಮಾಡುತ್ತೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದು ಹೇಳಿದರು.

ಒಟ್ಟಿನಲ್ಲಿ ಕಾಂಗ್ರೆಸ್​ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರು ಮಾಡಿದ್ದು, ಅಂತಿಮವಾಗಿ ಯಾರಿಗೆಲ್ಲ ಟಿಕೆಟ್ ಸಿಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ