AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಕುಲಕರ್ಣಿ ಬಂಧನ BJPಯ ರಾಜಕೀಯ ಪಿತೂರಿ -ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲಾ ಕಿಡಿ

ಬೆಂಗಳೂರು: ಬಿಜೆಪಿ ಸರ್ಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ ಎಂದು ಮಾಜಿ ಸಚಿನ ವಿನಯ್​ ಕುಲಕರ್ಣಿ ಬಂಧನದ ಬಗ್ಗೆ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲಾ ಟ್ವೀಟ್​ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪನವರು ಅರ್ಥಮಾಡಿಕೊಳ್ಳಬೇಕು ಎಂದು ಸಹ ಹೇಳಿದ್ದಾರೆ. ಜೊತೆಗೆ, ಅಸ್ಥಿರ ಯಡಿಯೂರಪ್ಪ ಸರ್ಕಾರವು ತನ್ನ […]

ವಿನಯ್ ಕುಲಕರ್ಣಿ ಬಂಧನ BJPಯ ರಾಜಕೀಯ ಪಿತೂರಿ -ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲಾ ಕಿಡಿ
ರಣದೀಪ್ ಸುರ್ಜೇವಾಲಾ
KUSHAL V
| Updated By: ಸಾಧು ಶ್ರೀನಾಥ್​|

Updated on: Nov 07, 2020 | 1:48 PM

Share

ಬೆಂಗಳೂರು: ಬಿಜೆಪಿ ಸರ್ಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ ಎಂದು ಮಾಜಿ ಸಚಿನ ವಿನಯ್​ ಕುಲಕರ್ಣಿ ಬಂಧನದ ಬಗ್ಗೆ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲಾ ಟ್ವೀಟ್​ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪನವರು ಅರ್ಥಮಾಡಿಕೊಳ್ಳಬೇಕು ಎಂದು ಸಹ ಹೇಳಿದ್ದಾರೆ. ಜೊತೆಗೆ, ಅಸ್ಥಿರ ಯಡಿಯೂರಪ್ಪ ಸರ್ಕಾರವು ತನ್ನ ಮುಂಚೂಣಿ ಘಟಕಗಳಾದ ಸಿಬಿಐ & ಇ.ಡಿ. ಬಳಸಿಕೊಂಡು @DKShivakumar, @DrParameshwara, ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ. ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು ಎಂದು ಟ್ವೀಟ್​ ಮಾಡಿದ್ದಾರೆ.