ಕಾಂಗ್ರೆಸ್ ಪಾಳಯದಲ್ಲಿ ಇಂದು ಮತ್ತೆ ಸಿಡಿಯಲಿದೆಯಾ ಅಸಮಾಧಾನ?

ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕುವ ಸಂಬಂಧ ಸುರ್ಜೇವಾಲಾ ಸೂಚನೆ ನೀಡಬಹುದು. ಈ ವೇಳೆ ಸಿಎಂ ವಿಚಾರದ ಬಗ್ಗೆ ಸಭೆಯಲ್ಲಿ ಹಿರಿಯ ನಾಯಕರಿಂದ ಅಸಮಾಧಾನ ಸ್ಫೋಟವಾಗಬಹುದು.

ಕಾಂಗ್ರೆಸ್ ಪಾಳಯದಲ್ಲಿ ಇಂದು ಮತ್ತೆ ಸಿಡಿಯಲಿದೆಯಾ ಅಸಮಾಧಾನ?
ಕಾಂಗ್ರೆಸ್ ಪಾರ್ಟಿ ಚಿಹ್ನೆ
Follow us
TV9 Web
| Updated By: sandhya thejappa

Updated on:Jun 26, 2021 | 2:08 PM

ಬೆಂಗಳೂರು: ಇಂದು ಸಂಜೆ (ಜೂನ್ 26) ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಿರಿಯ ಕೈ ನಾಯಕರ ಜೊತೆ ವೀಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ನಾಲ್ಕು ಘಂಟೆಗೆ ನಡೆಯುವ ಸಭೆಯಲ್ಲಿ ಸರಣಿ ಪ್ರತಿಭಟನೆ, ಸರಣಿ ಪತ್ರಿಕಾಗೋಷ್ಟಿ ಮೂಲಕ ಸರ್ಕಾರದ ವಿರುದ್ಧ ನಡೆಸಿರುವ ಹೋರಾಟಗಳ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲಾ ಮಾಹಿತಿ ಪಡೆಯಲಿದ್ದಾರೆ. ಜೊತೆಗೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಹೇಳಿಕೆ ವಿಚಾರ ಚರ್ಚೆಯಾಗುವ ಸಾಧ್ಯತೆಯಿದೆ.

ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕುವ ಸಂಬಂಧ ಸುರ್ಜೇವಾಲಾ ಸೂಚನೆ ನೀಡಬಹುದು. ಈ ವೇಳೆ ಸಿಎಂ ವಿಚಾರದ ಬಗ್ಗೆ ಸಭೆಯಲ್ಲಿ ಹಿರಿಯ ನಾಯಕರಿಂದ ಅಸಮಾಧಾನ ಸ್ಫೋಟವಾಗಬಹುದು. ಕಳೆದ ಬಾರಿಯ ಸುರ್ಜೇವಾಲಾ ವಿಡಿಯೋ ಕಾನ್ಫರೆನ್ಸ್​ನಲ್ಲಿ ಕೆಲವು ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯವೈಖರಿ ಬಗ್ಗೆ ಕೆಲ ನಾಯಕರು ಅಸಮಾಧಾನ ಹೊರಹಾಕಿದ್ದರು.

ಇದೀಗ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮೇರೆಗೆ ಸುರ್ಜೇವಾಲಾ ಕೆಲ ನಾಯಕರ ಹೇಳಿಕೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಲಿದ್ದಾರೆ. ಹೀಗಾಗಿ ಇಂದು ನಡೆಯುವ ಸುರ್ಜೇವಾಲಾ ವಿಡಿಯೋ ಕಾನ್ಫರೆನ್ಸ್ ಸಾಕಷ್ಟು ಕುತೂಹಲ ಮೂಡಿಸಿದೆ.

ಕೂಸೂ ಹುಟ್ಟಲ್ಲ, ಕುಲಾವಿ ಹೊಲಿಸುವ ಸಂದರ್ಭವೂ ಬರಲ್ಲ; ಲಕ್ಷ್ಮಣ ಸವದಿ ರಾಜ್ಯ ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿಗಾಗಿ ಕಿತ್ತಾಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸೋದು ಇತ್ತೀಚಿನ ದಿನಗಳಲ್ಲಿ ನಡಿಯುತ್ತಿದೆ. ಕಾಂಗ್ರೆಸ್‌ ಪಕ್ಷದವರಿಗೆ ಕೂಸೂ ಹುಟ್ಟುವುದಿಲ್ಲ. ಕುಲಾವಿ ಹೊಲಿಸುವ ಸಂದರ್ಭವೂ ಅವರಿಗೆ ಬರುವುದಿಲ್ಲ. ಬೇರೆ ಪಕ್ಷದ ಬಗ್ಗೆ ನಾವು ಚರ್ಚೆ ಮಾಡುವುದು ಸೂಕ್ತ ಅಲ್ಲ. 2023ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದಿದ್ದಾರೆ.

ಕೊರೊನಾ ರೂಪಾಂತರ ವೈರಸ್​ಗಳಲ್ಲೆಲ್ಲ ಡೆಲ್ಟಾ ವೈರಾಣು ತುಂಬ ವೇಗವಾಗಿ ಹರಡಬಲ್ಲದು, ಅಪಾಯಕಾರಿಯೂ ಹೌದು: ವಿಶ್ವ ಆರೋಗ್ಯ ಸಂಸ್ಥೆ

ಕೃಷಿ ಸಚಿವ ಬಿ.ಸಿ. ಪಾಟೀಲ್‌ ಕಾರು ರಸ್ತೆ ಮಧ್ಯೆ… ಕೆಸರಿನಲ್ಲಿ ಸಿಲುಕಿದ ಪ್ರಸಂಗ ಉಡುಪಿ ಬಳಿ ನಡೆದಿದೆ!

(Randeep Singh Surjewala will hold a meeting with Congress leaders)

Published On - 1:57 pm, Sat, 26 June 21

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್