Maski By Election: ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್​ ಪ್ರಚಾರ ಮಾಡಿದ ಗ್ರಾಮಗಳಲ್ಲಿ ಕೊರೊನಾ ಟೆಸ್ಟ್​ಗೆ ಸೂಚನೆ

ಒಟ್ಟಾರೆ‌ 305 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 2,06429 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕೊವಿಡ್ ಪಾಸಿಟಿವ್ ಸೋಂಕಿತರು ಮತ್ತು ಸಂಪರ್ಕಿತರಿಗೆ 6 ಗಂಟೆಯ ನಂತರ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದರು.

Maski By Election: ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್​ ಪ್ರಚಾರ ಮಾಡಿದ ಗ್ರಾಮಗಳಲ್ಲಿ ಕೊರೊನಾ ಟೆಸ್ಟ್​ಗೆ ಸೂಚನೆ
ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್
Follow us
guruganesh bhat
|

Updated on: Apr 15, 2021 | 7:51 PM

ರಾಯಚೂರು: ಏಪ್ರಿಲ್ 17ರಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್​ಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಅವರ ಸಂಪರ್ಕದಲ್ಲಿದ್ದ 18 ಜನರಿಗೆ ಕೊವಿಡ್​ ಟೆಸ್ಟ್ ಮಾಡಲಾಗಿದೆ. ಅಲ್ಲದೇ ಪ್ರತಾಪಗೌಡ ಪಾಟೀಲ್​ ಪ್ರಚಾರ ನಡೆಸಿದ ತುರವಿಹಾಳ, ಬಳಗಾನೂರು, ಪಾಮನಕಲ್ಲು ಗ್ರಾಮಗಳಲ್ಲಿ ಕೊವಿಡ್ 19  ರ‍್ಯಾಂಡಮ್ ಟೆಸ್ಟ್ ನಡೆಸಲು ಸೂಚಿಸಲಾಗಿದೆ ಎಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದರು.

ಮಸ್ಕಿ ಕ್ಷೇತ್ರದಲ್ಲಿ ಇದುವರೆಗೂ 14 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 7 ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಜತೆಗೆ 46 ಕೋವಿಡ್ ನಿಯಮಗಳ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಅನುಮತಿ ಇಲ್ಲದೆ ಚುನಾವಣ ಪ್ರಚಾರಕ್ಕೆಂದು ಸಾಗಿಸುತ್ತಿದ್ದ 3.50 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೇ, 1.33 ಲಕ್ಷ ಮೌಲ್ಯದ 355 ಲೀಟರ್ ಅಕ್ರಮ ಮದ್ಯವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಇಂದಿನಿಂದ ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹೀಗಾಗಿ ಯಾವುದೇ ಬಹಿರಂಗ ಸಭೆ, ಪ್ರಚಾರ ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ. ಒಟ್ಟಾರೆ‌ 305 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 2,06429 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕೊವಿಡ್ ಪಾಸಿಟಿವ್ ಸೋಂಕಿತರು ಮತ್ತು ಸಂಪರ್ಕಿತರಿಗೆ 6 ಗಂಟೆಯ ನಂತರ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದರು.

ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 62 ಸೂಕ್ಷ್ಮ, 07 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 739 ಪೊಲೀಸ್ ಕಾನ್ಸ್​ಟೇಬಲ್, 71 ಎಎಸ್​ಐ, 25 ಪಿಎಸ್​ಐ, 07 ಸಿಪಿಐ, 3 ಡಿಎಸ್​ಪಿ, 1 ಸಿಆರ್​ಪಿಎಫ್, ಕೆಎಸ್​ಆರ್​ಪಿ ಪೊಲೀಸ್ ತಂಡವನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇದುವರೆಗೂ ಕ್ಷೇತ್ರವ್ಯಾಪ್ತಿಯಲ್ಲಿ 7 ಐಪಿಸಿ ಪ್ರಕರಣ ದಾಖಲಾಗಿದ್ದು, 18 ಜನರನ್ನು ಬಂಧಿಸಲಾಗಿದೆ. ಹಣ ಹಂಚಿಕೆ ವೈರಲ್ ಆದ ಬಗ್ಗೆ ವಿಡಿಯೋದಲ್ಲಿ ಕಂಡುಬಂದ ಎಲ್ಲಾ ವ್ಯಕ್ತಿಗಳನ್ನೂ ಬಂಧಿಸಲಾಗಿದೆ‌. ಮತದಾನ ಆರಂಭದಿಂದ ಮತದಾನ ಮುಗಿದ ಅರ್ಧಗಂಟೆಯವರೆಗೂ ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್​ಗೆ ಕೊರೊನಾ ಸೋಂಕು

Mangli: ಮಸ್ಕಿಯಲ್ಲಿ ಮತಬೇಟೆಗಿಳಿದ ಮಂಗ್ಲಿ; ಬಿಜೆಪಿ ಅಭ್ಯರ್ಥಿ ಪರ ಅಬ್ಬರದ ಪ್ರಚಾರ

(Random Covid 19 test in all BJP Candidate Pratapgouda Patil campaigned villages says Maski Election Officer)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್