AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರುವ ವೇಳೆ ರೆಡ್​​​ ಹ್ಯಾಂಡ್​​​ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ

ರಾಣೇಬೆನ್ನೂರಿನಲ್ಲಿ ಕದ್ದ ಚಿನ್ನ ಮಾರಾಟಕ್ಕೆ ಯತ್ನಿಸಿದ ಹುಬ್ಬಳ್ಳಿ ಮಹಿಳೆ ಶ್ರೀದೇವಿ ಬಂಧಿತಳಾಗಿದ್ದು, ಆಕೆಯಿಂದ 236 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ, ಕೋಲಾರದ ಕೆಜಿಎಫ್‌ನಲ್ಲಿ ಚಿನ್ನ ಮಿಶ್ರಿತ ಮಣ್ಣನ್ನು ಅಕ್ರಮವಾಗಿ ಕದಿಯುತ್ತಿದ್ದ ಎಂಟು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಚಿನ್ನ ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರುವ ವೇಳೆ ರೆಡ್​​​ ಹ್ಯಾಂಡ್​​​ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಕಳ್ಳತ ಸ್ಟೋರಿ
ಅಕ್ಷಯ್​ ಪಲ್ಲಮಜಲು​​
|

Updated on:Feb 19, 2026 | 11:24 AM

Share

ರಾಣೇಬೆನ್ನೂರು, ಫೆ.19: ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಬಂಗಾರವನ್ನು ಮಾರಾಟ ಮಾಡಲು ನಗರದ ಗೋಲ್ಡ್ ಲೋನ್ ಕಂಪನಿಗೆ ಬಂದಿದ್ದ ಮಹಿಳೆಯೊಬ್ಬಳನ್ನು ರಾಣೇಬೆನ್ನೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಹುಬ್ಬಳ್ಳಿ ಮೂಲದ ಶ್ರೀದೇವಿ ಸಂಜೀವ ಕಟ್ಟೇಕಾರ ಎಂದು ಗುರುತಿಸಲಾಗಿದೆ. ಈಕೆ ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಸುಮಾರು 236 ಗ್ರಾಂ ಚಿನ್ನಾಭರಣಗಳನ್ನು (ಅಂದಾಜು 16 ಲಕ್ಷ ರೂ. ಮೌಲ್ಯ) ಮಾರಾಟ ಮಾಡಲು ರಾಣೇಬೆನ್ನೂರಿನ ಖಾಸಗಿ ಗೋಲ್ಡ್ ಕಂಪನಿಗೆ ಬಂದಿದ್ದಳು.

ಚಿನ್ನ ಮಾರಾಟ ಮಾಡಲು ಬಂದ ಮಹಿಳೆಯ ನಡವಳಿಕೆ ಮತ್ತು ಆಕೆಯ ಬಳಿಯಿದ್ದ ಚಿನ್ನದ ದಾಖಲೆಗಳ ಬಗ್ಗೆ ಗೋಲ್ಡ್ ಕಂಪನಿಯ ಸಿಬ್ಬಂದಿಗೆ ತೀವ್ರ ಅನುಮಾನ ಮೂಡಿದೆ. ತಕ್ಷಣವೇ ಈ ಬಗ್ಗೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ರಾಣೇಬೆನ್ನೂರು ನಗರ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯ ಬಳಿ ಒಟ್ಟು 236 ಗ್ರಾಂ ಚಿನ್ನ ಇರುವುದು ತಿಳಿದುಬಂದಿದೆ. ಅದರಲ್ಲಿ ಆಕೆ 40 ಗ್ರಾಂ ಚಿನ್ನವನ್ನು (ಸುಮಾರು 6 ಲಕ್ಷ ರೂ. ಮೌಲ್ಯ) ಮಾರಾಟ ಮಾಡಲು ಮುಂದಾಗಿದ್ದಳು ಎನ್ನಲಾಗಿದೆ. ಸದ್ಯ ಪೊಲೀಸರು ಚಿನ್ನವನ್ನು ವಶಪಡಿಸಿಕೊಂಡಿದ್ದು, ಈಕೆಯ ಹಿಂದೆ ಬೇರೆ ಜಿಲ್ಲೆಯ ಕಳ್ಳರ ಗ್ಯಾಂಗ್ ಇದೆಯೇ ಎಂಬ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​: ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಖೈದಿಯಿಂದಲ್ಲೇ ಕನ್ನ!

ಕೋಲಾರದಲ್ಲಿ ಪ್ರತ್ಯೇಕ ಘಟನೆ:

ಕೆಜಿಎಫ್‌ನ ಐತಿಹಾಸಿಕ ಚಿನ್ನದ ಗಣಿ ಪ್ರದೇಶದಲ್ಲಿ ಅಕ್ರಮವಾಗಿ ಚಿನ್ನ ಮಿಶ್ರಿತ ಮಣ್ಣನ್ನು ಕದಿಯುತ್ತಿದ್ದ ಎಂಟು ಜನರ ತಂಡವನ್ನು ಉರಿಗಾಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಜಿಎಫ್‌ನ ಗಿಫ್ಫಾರ್ಟ್ ಶಾಪ್ಟ್ ಪ್ರದೇಶದಲ್ಲಿ ಈ ಗ್ಯಾಂಗ್ ಅಕ್ರಮವಾಗಿ ಪ್ರವೇಶಿಸಿತ್ತು. ಗಣಿಯ ಆಳದಿಂದ ಚಿನ್ನದ ಅಂಶವಿರುವ ಮಣ್ಣನ್ನು ಹೊರತೆಗೆದು ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಒಟ್ಟು 8 ಚೀಲಗಳಲ್ಲಿ ತುಂಬಿದ್ದ ಚಿನ್ನ ಮಿಶ್ರಿತ ಮಣ್ಣನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಈ ಮಣ್ಣಿನ ಮೌಲ್ಯ ಸುಮಾರು 40,000 ರೂಪಾಯಿ ಎಂದು ಅಂದಾಜಿಸಲಾಗಿದೆ.

ಬಂಧಿತ ಎಂಟು ಆರೋಪಿಗಳ ವಿರುದ್ಧ ಉರಿಗಾಂ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಕೆಜಿಎಫ್ ಗಣಿ ಮುಚ್ಚಲ್ಪಟ್ಟಿದ್ದರೂ, ಇಂದಿಗೂ ಅದರ ಮಣ್ಣಿನಲ್ಲಿ ಚಿನ್ನದ ಅಂಶವಿರುವ ಕಾರಣ ಇಂತಹ ಕಳ್ಳತನ ಪ್ರಕರಣಗಳು ನಡೆಯುತ್ತಿದೆ. ಈ ಜಾಲದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:21 am, Thu, 19 February 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್