AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಗೃಹ ಇಲಾಖೆ ಆದೇಶ

ನಟಿ ರನ್ಯಾ ರಾವ್ ದುಬೈನಿಂದ ಚಿನ್ನದ ಕಳ್ಳಸಾಗಾಣೆ ಮಾಡಿದ ಪ್ರಕರಣವು ಈಗ ಆಕೆಯ ಮಲತಂದೆ ಮತ್ತು ಡಿಜಿಪಿ ರಾಮಚಂದ್ರ ರಾವ್ ಅವರನ್ನೂ ಸಂಕಷ್ಟಕ್ಕೆ ಸಿಲುಕಿಸಿದೆ. ವಿಮಾನ ನಿಲ್ದಾಣದಲ್ಲಿ ರನ್ಯಾ ಅವರಿಗೆ ನೀಡಲಾದ ಶಿಷ್ಟಾಚಾರದಲ್ಲಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿದೆ. ರನ್ಯಾ ಜತೆ ಸಂಪರ್ಕದಲ್ಲಿ ಇಲ್ಲ, ಪ್ರಕರಣಕ್ಕೂ ತಮಗೂ ಸಂಬಂಧ ಇಲ್ಲ ಎಂದು ರಾಮಚಂದ್ರ ರಾವ್ ಇತ್ತೀಚೆಗೆ ಹೇಳಿದ್ದರು.

ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಗೃಹ ಇಲಾಖೆ ಆದೇಶ
ಡಿಜಿಪಿ ರಾಮಚಂದ್ರ ರಾವ್ ಮತ್ತು ರನ್ಯಾ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Mar 11, 2025 | 12:08 PM

Share

ಬೆಂಗಳೂರು, ಮಾರ್ಚ್ 11: ನಟಿ ರನ್ಯಾ ರಾವ್ (Ranya Rao) ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ (Gold Smuggling) ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ (DGP Ramachandra Rao) ಅವರಿಗೂ ಸಂಕಷ್ಟ ಎದುರಾಗಿದೆ. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.

ನಟಿ ರನ್ಯಾ ಚಿನ್ನ ನಸಾಗಾಟ ಮಾಡುವಾಗ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಹೆಸರು ಬಳಸಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವಾದ ಸಂಗತಿಗಳು ಯಾವುವು? ಕೇಸ್​​ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿ ನೇಮಿಸಲಾಗಿದೆ. ಇವರು ತಕ್ಷಣ ತನಿಖೆ ಪ್ರಾರಂಭಿಸಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕಿದೆ.

ಪ್ರಕರಣ ಸಂಬಂಧ ಉದ್ಯಮಿ ಪುತ್ರ ತರುಣ್ ರಾಜು ಎಂಬವರನ್ನು ಡಿಆರ್​​ಐ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ.

ಇದನ್ನೂ ಓದಿ
Image
ರನ್ಯಾ ಪ್ರಕರಣ: ಏರ್​ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಶಂಕೆ
Image
ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಭಾವಿ ರಾಜಕಾರಣಿ
Image
ರನ್ಯಾ ಹಿಂದಿದೆ ಸ್ಲಗ್ಲಿಂಗ್ ಸಿಂಡಿಕೇಟ್: ಬಗೆದಷ್ಟು ಹೊರಬರುತ್ತಿವೆ ರಹಸ್ಯ
Image
ರನ್ಯಾ ಚಿನ್ನ ಕಳ್ಳಸಾಗಣೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಪ್ರೊಟೊಕಾಲ್ ಬಿಗಿ

ಮತ್ತೊಂದೆಡೆ, ವಿಧಾನಸಭೆ ಕಲಾಪದಲ್ಲಿಯೂ ರನ್ಯಾ ಚಿನ್ನಕಳ್ಳಸಾಗಣೆ ಪ್ರಕರಣ ಭಾರಿ ಸದ್ದು ಮಾಡಿದೆ. ರಾಜಕಾರಣಿಗಳ ಕೈವಾಡದ ಆರೋಪ, ಪ್ರಭಾವಿ ವ್ಯಕ್ತಿಗಳು ರನ್ಯಾ ಹಿಂದಿರುವ ಅನುಮಾನಗಳು ರಾಜಕೀಯವಾಗಿಯೂ ಪ್ರಕರಣ ಸದ್ದು ಮಾಡುವಂತೆ ಮಾಡಿದೆ. ಹೀಗಾಗಿ ಗೃಹ ಇಲಾಖೆ ರಾಮಚಂದ್ರ ರಾವ್ ಬಗ್ಗೆಯೂ ತನಿಖೆಗೆ ಆದೇಶಿಸಿದೆ.

ಶಿಷ್ಟಾಚಾರ ದುರ್ಬಳಕೆ ಬಗ್ಗೆ ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಕೆ

ಮತ್ತೊಂದೆಡೆ, ಚಿನ್ನ ಸ್ಮಗ್ಲಿಂಗ್​ ಕೇಸ್​ನಲ್ಲಿ ಜೈಲುಪಾಲಾಗಿರುವ ರನ್ಯಾ ರಾವ್ ವಿಚಾರದಲ್ಲಿ ಶಿಷ್ಟಾಚಾರ ದರ್ಬಳಕೆಯಾಗಿರುವ ಬಗ್ಗೆ ಪೊಲೀಸ್ ಆಯುಕ್ತರಿಗೆ ಡಿಸಿಪಿ ಸುಚಿತ್ ವರದಿ ಸಲ್ಲಿಸಿದ್ದಾರೆ. ರನ್ಯಾ ಬಂಧನಕ್ಕೊಳಗಾದ ದಿನ ಶಿಷ್ಟಾಚಾರ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಬಸವರಾಜ್ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ನಟಿ ರನ್ಯಾ ಮಲತಂದೆ ರಾಮಚಂದ್ರ ರಾವ್ ಹಿನ್ನೆಲೆಯೇನು? ಚಿನ್ನ ಸ್ಮಗ್ಲಿಂಗ್​ನಲ್ಲಿ ಡಿಜಿಪಿ ಕೈವಾಡವೂ ಇತ್ತೇ?

ದುಬೈನಿಂದ ಬರುವಾಗಲೇ ಕಾನ್‌ಸ್ಟೇಬಲ್‌ ಬಸವರಾಜ್‌ಗೆ ರನ್ಯಾ ಕರೆ ಮಾಡಿದ್ದಾರೆ. ಟರ್ಮಿನಲ್‌ 1ಕ್ಕೆ ಬರುವುದಾಗಿ ತಿಳಿಸಿದ್ದಾರೆ. ಈ ವೇಳೆ, ‘ಇಲ್ಲ ಮೇಡಂ, ಬೇರೆ ಅಫೀಸರ್‌ ಬರುತ್ತಿದ್ದಾರೆ ಅವರನ್ನು ರಿಸೀವ್ ಮಾಡಿಕೊಳ್ಳಬೇಕು’ ಎಂದು ಬಸವರಾಜ್ ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ರನ್ಯಾ, ‘ನೀವೇ ಬರಬೇಕು. ಇಲ್ಲಾಂದ್ರೆ ಅಪ್ಪಾಜಿಗೆ ಹೇಳುತ್ತೇನೆ’ ಎಂದು ಬೆದರಿಸಿದ್ದರು. ಈ ವಿಚಾರವನ್ನು ಪೊಲೀಸ್ ಆಯುಕ್ತರಿಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ