AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಹಿಂದೆ ಖಾವಿ ಕೃಪಾಕಟಾಕ್ಷ: ಪ್ರಭಾವಿ ಸ್ವಾಮೀಜಿ ಶಾಮೀಲು

ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ಬಂಧಿಸಲಾಗಿದೆ. ಡಿಆರ್​​ ಐ ತನಿಖೆಯಿಂದ ಪ್ರಭಾವಿ ಸ್ವಾಮೀಜಿಯ ಪಾತ್ರ ಬಹಿರಂಗವಾಗಿದೆ. ಸ್ವಾಮೀಜಿ ದುಬೈನಲ್ಲಿ ಕ್ರಿಪ್ಟೋ ಕರೆನ್ಸಿ ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ಹೈಕೋರ್ಟ್ ಮೆಟ್ಟಿಲೇರಿ ಬಂಧನದಿಂದ ರಿಲೀಫ್ ಪಡೆದಿದ್ದಾರೆ. ತನಿಖೆಯಲ್ಲಿ ಹಲವು ಅಂಶಗಳು ಬಯಲಾಗುತ್ತಿವೆ.

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಹಿಂದೆ ಖಾವಿ ಕೃಪಾಕಟಾಕ್ಷ: ಪ್ರಭಾವಿ ಸ್ವಾಮೀಜಿ ಶಾಮೀಲು
ರನ್ಯಾ ರಾವ್​
Shivaprasad B
| Edited By: ವಿವೇಕ ಬಿರಾದಾರ|

Updated on:Mar 12, 2025 | 7:59 AM

Share

ಬೆಂಗಳೂರು, ಮಾರ್ಚ್​ 12: ಚಿನ್ನ ಕಳ್ಳಸಾಗಾಣಿಕೆ (Gold Smuggling) ಆರೋಪದಲ್ಲಿ ನಟಿ ರನ್ಯಾ ರಾವ್​ (Rany Rao) ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ತನಿಖೆಯನ್ನು ಡಿಆರ್​ಐ ಮತ್ತು ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಡಿಆರ್​ಐ ಅಧಿಕಾರಿಗಳಿಗೆ ಒಂದೊಂದೆ ಅಸಲಿಯತ್ತು ತಿಳಿಯುತ್ತಿದೆ. ನಟಿ ರನ್ಯಾ ರಾವ್ ಚಿನ್ನದ ಬಿಸ್ಕೇಟ್ ಕಳ್ಳಸಾಗಣಿಕೆ ಹಿಂದೆ ಪ್ರಭಾವಿ ಸ್ವಾಮೀಜಿ (Swamiji) ಕೃಪಾಕಟಾಕ್ಷವೂ ಇದೆ ಎಂಬ ಅಂಶ ಟಿವಿ9ಗೆ ಡಿಆರ್​ಐ ಮೂಲಗಳಿಂದ ಮಾಹಿತಿ ದೊರೆತಿದೆ.

ನಟಿ ರನ್ಯಾ ರಾವ್, ತರುಣ್ ರಾಜ್ ಮತ್ತು ಪ್ರಭಾವಿ ಸ್ವಾಮೀಜಿ ಮೂವರ ಗುಂಪು ಚಿನ್ನ ಕಳ್ಳಸಾಗಾಣಿಕೆಯಲ್ಲಿ ಶಾಮೀಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸ್ವಾಮೀಜಿ ದುಬೈ‌ನಲ್ಲಿ ಆಫೀಸ್​ ತೆರೆದು ಡಿಲೀಂಗ್ ನಡೆಸುತ್ತಿದ್ದರು. ಆಫೀಸ್​ನಲ್ಲಿ ಸ್ವಾಮೀಜಿ ಕ್ರಿಫ್ಟೋ ಕರೆನ್ಸಿ, ಹಣ ವಿನಿಮಯ ವ್ಯವಹಾರ ಮಾಡುತ್ತಿದ್ದರು. ಸ್ವಾಮೀಜಿ ರಾಜಕೀಯ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿನಲ್ಲಿನ ಸ್ವಾಮೀಜಿ ಮನೆ ಮೇಲೆ ಡಿಆರ್​ಐ ಅಧಿಕಾರಿಗಳು ದಾಳಿ ನಡೆಸಿದಾಗ ಅಪಾರ ಪ್ರಮಾಣದ ಚಿನ್ನ ಪತ್ತೆಯಾಗಿತ್ತು.

ರನ್ಯಾ ಪತಿಗೆ ಹೈಕೋರ್ಟ್ ರಿಲೀಫ್

ಚಿನ್ನ ಕಳ್ಳಸಾಗಣೆ ವೇಳೆ ನಟಿ ರನ್ಯಾ ರಾವ್ ಬಂಧನ ಆಕೆಯ ಪತಿ ಜತಿನ್ ಹುಕ್ಕೇರಿಗೂ ಸಂಕಷ್ಟ ತಂದೊಡ್ಡಿತ್ತು. ಡಿಆರ್‌ಐ ಅಧಿಕಾರಿಗಳು ಬಂಧಿಸಬಹುದೆಂಬ ಭೀತಿಯಿಂದ ರನ್ಯಾ ರಾವ್ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ, ಹೈಕೋರ್ಟ್​ ಜತಿನ್​ ಹುಕ್ಕೇರಿಗೆ ಬಿಗ್​ ರಿಲೀಫ್​ ನೀಡಿದೆ.

ಇದನ್ನೂ ಓದಿ
Image
ಪತಿ ನೀಡಿದ ಸುಳಿವಿನಿಂದ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ?
Image
ಸ್ಮಗ್ಲಿಂಗ್ ಹಿಂದಿರೋ ಸಚಿವರಾರು? ಸದನದಲ್ಲೂ ಸದ್ದು ಮಾಡಿದ ರನ್ಯಾ ರಾವ್ ಕೇಸ್
Image
ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಭಾವಿ ರಾಜಕಾರಣಿ
Image
ರನ್ಯಾ ರಾವ್ ಬೆನ್ನಲ್ಲೇ ಚಿನ್ನ ಸಾಗಾಟ ಮಾಡ್ತಿದ್ದ ಮತ್ತೋರ್ವ ಸಿಕ್ಕಿಬಿದ್ದ

“ಚಿನ್ನ ಕಳ್ಳಸಾಗಣೆ ಪ್ರಕರಣ ರನ್ಯಾ ರಾವ್ ಪತಿ ಜತಿನ್​ ಹುಕ್ಕೇರಿಗೂ ಸಂಕಷ್ಟ ತಂದೊಡ್ಡಿತ್ತು. ವಿಚಾರಣೆಗೆ ಸಹಕರಿಸಿದರೂ ಡಿಆರ್​ಐ ಅಧಿಕಾರಿಗಳು ತಮಗೆ ಕಿರುಕುಳ ನೀಡುತ್ತಿದ್ದಾರೆಂದು ಜತಿನ್ ಹುಕ್ಕೇರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಾರ್ಚ್ 3 ರಂದು ರನ್ಯಾ ಬಂಧನದ ಬಗ್ಗೆಯೂ ತಮಗೆ ತಿಳಿಸದೇ ಮನೆ ಮೇಲೆ ದಾಳಿ ಮಾಡಿ ಶೋಧನೆ ನಡೆಸಿದ್ದಾರೆ. ಮನೆಯಲ್ಲಿ ಮಧ್ಯರಾತ್ರಿ 12 ಗಂಟೆವರೆಗೂ ವಿಚಾರಣೆ ನಡೆಸಿದ್ದಲ್ಲದೇ, ಮರುದಿನವೂ ತನಿಖೆ ಮುಂದುವರಿಸಿ 15 ಗಂಟೆ ವಿಚಾರಣೆ ನಡೆಸಿದ್ದಾರೆ.

ಡಿಆರ್‌ಐ ಕಚೇರಿಗೆ ಕರೆಸಿಕೊಂಡು ರಾತ್ರಿವರೆಗೂ ತನಿಖೆ ಮುಂದುವರಿಸಿದ್ದರು. ಮಾರ್ಚ್ 6 ರಂದು ಫೋನ್ ಕರೆ ಮೂಲಕ ಕರೆಸಿಕೊಂಡು ತನಿಖೆ ನಡೆಸಿದರು. ಮಾರ್ಚ್ 9 ರಂದು ಪೋಷಕರ ಕೋರಮಂಗಲದ ನಿವಾಸದಿಂದ ನನ್ನನ್ನು (ಜತಿನ್ ಹುಕ್ಕೇರಿ) ಕರೆತಂದು ಬೆಳಗಿನ ಜಾವದವರೆಗೂ ವಿಚಾರಣೆ ನಡೆಸಿ ಕಿರುಕುಳ ನೀಡಿದ್ದಾರೆಂದು ಜತಿನ್ ಹುಕ್ಕೇರಿ ಅರ್ಜಿ ಸಲ್ಲಿಸಿದ್ದರು.

ರನ್ಯಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ: ಪತ್ನಿ ರನ್ಯಾ ರಾವ್ ಮೇಲಿನ ಆರೋಪಕ್ಕೂ ಜತಿನ್​ಗೂ ಸಂಬಂಧವಿಲ್ಲ. ಡಿಆರ್​ಐ ಅಧಿಕಾರಿಗಳು ಸಮನ್ಸ್ ನೀಡಿದಾಗ ತನಿಖೆಗೆ ಸಹಕರಿಸಿದ್ದಾರೆ. ಎರಡನೇ ಬಾರಿ ಯಾವುದೇ ಸಮನ್ಸ್ ನೀಡದೇ ಕರೆದೊಯ್ದು ವಿಚಾರಣೆಗೊಳಪಡಿಸಿದ್ದಲ್ಲದೇ ಅವರಿಗೆ ಬೇಕಾದಂತೆ ಹೇಳಿಕೆ ನೀಡುವಂತೆ ಕಿರುಕುಳ ನೀಡಿದ್ದಾರೆ. ಸಮನ್ಸ್​ಗೆ ಹಾಜರಾದಾಗ ತನಿಖೆ ಹೇಗೆ ನಡೆಸಬೇಕೆಂಬ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳಿವೆ. ಇದನ್ನು ಪಾಲಿಸದೇ ಜತಿನ್​ರನ್ನು ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ ಡಿಆರ್‌ಐ ಅಧಿಕಾರಿಗಳು ಜತಿನ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ರಕ್ಷಣೆ ನೀಡಬೇಕು ಎಂದು ವಾದಿಸಿದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಹೈಕೋರ್ಟ್ ಪೀಠ ಕಾನೂನಿನ ಪ್ರಕ್ರಿಯೆ ಪಾಲಿಸದೇ ಬಂಧಿಸದಂತೆ ಆದೇಶ ನೀಡಿದೆ. ಈ ಮೂಲಕ ರನ್ಯಾ ರಾವ್ ಪತಿಗೆ ಜತಿನ್​ಗೆ ರಿಲೀಫ್ ನೀಡಿದೆ.

ಇದನ್ನೂ ಓದಿ: ರನ್ಯಾ ರಾವ್ ಪ್ರಕರಣ: ಏರ್​ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಶಂಕೆ

ದಾಂಪತ್ಯದಲ್ಲಿ ಬಿರುಕು

ಇನ್ನು, ರನ್ಯಾ ರಾವ್ ಮತ್ತು ಪತಿ ಜತಿನ್ ಹುಕ್ಕೇರಿ ದಾಂಪತ್ಯ ಸರಿಯಾಗಿಲ್ಲ. 2024ರ ಅಕ್ಟೋಬರ್ 6 ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ಇಬ್ಬರೂ ಮದುವೆ ಬ್ರೋಕರ್ ಮೂಲಕ ಭೇಟಿಯಾಗಿದ್ದಾರೆ. ಅಕ್ಟೋಬರ್ 23, ರನ್ಯಾ, ಜತಿನ್ ನಿಶ್ಚಿತಾರ್ಥವಾಗಿದೆ. ನವೆಂಬರ್ 27 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಮದುವೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 am, Wed, 12 March 25

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್