Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಪ್ರೋಟೋಕಾಲ್ ದುರ್ಬಳಕೆ ವರದಿ ಸಿದ್ದ

ನಟಿ ರನ್ಯಾ ರಾವ್ ಹೇಗೆ ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನವನ್ನು ವಿಮಾನ ನಿಲ್ದಾಣದಿಂದ ಹೊರಗೆ ತರುತ್ತಿದ್ದರು ಮತ್ತು ಹೇಗೆ ಪ್ರೋಟೋಕಾಲ್ ದುರ್ಬಳಕೆ ಮಾಡುತ್ತಿದ್ದರು ಎಂಬ ವರದಿ ಸರಕಾರಕ್ಕೆ ಸಲ್ಲಿಕೆಯಾಗಲು ಸಿದ್ಧವಾಗಿದೆ. ಇತ್ತ ಕೋರ್ಟ್​ನಲ್ಲಿ ರನ್ಯಾ ರಾವ್​ಗೆ ಜಾಮೀನು ಕೊಡಿ ಎಂದು ವಕೀಲರು ವಾದ ಮಾಡಿದ್ದಾರೆ.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಪ್ರೋಟೋಕಾಲ್  ದುರ್ಬಳಕೆ ವರದಿ ಸಿದ್ದ
ರನ್ಯಾ ರಾವ್ (ಸಂಗ್ರಹ ಚಿತ್ರ)
Follow us
Prajwal Kumar NY
| Updated By: Ganapathi Sharma

Updated on: Mar 25, 2025 | 6:57 AM

ಬೆಂಗಳೂರು, ಮಾರ್ಚ್ 25: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟಮಾಡುವಾಗ (Gold Smuggling)  ಡಿಆರ್​ಐ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ರನ್ಯಾ ರಾವ್ (Ranya Rao) ಅವರನ್ನು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಪೊಲೀಸ್ ಪ್ರೋಟೋಕಾಲ್ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕಾರಣಕ್ಕೆ ಸರ್ಕಾರ, ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತಗೆ ಆದೇಶಿಸಿತ್ತು. ಈಗ ವರದಿ ಸಿದ್ದವಾಗಿದ್ದು ಇಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

ತನಿಖಾ ವರದಿಯಲ್ಲೇನಿದೆ?

ಗೋಲ್ಡ್ ಸ್ಮಗ್ಲಿಂಗ್ ಕೇಸ್​ ಬಗ್ಗೆ ಮಾತನಾಡಿರುವ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ, ತನಿಖಾ ವರದಿ ಸಿದ್ಧವಿದೆ. ಇದುವರೆಗೆ ಹಲವರ ವಿಚಾರಣೆ ಮಾಡಿದ್ದೇವೆ. ಕೊನೆ ಹಂತದ ಮಾಹಿತಿ ಸಂಗ್ರಹ ಆಗಿದೆ. ಸರ್ಕಾರಕ್ಕೆ ಇಂದೇ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಇದುವರೆಗೆ, 10-15 ಜನರ ವಿಚಾರಣೆ ಮಾಡಿದ್ದೇವೆ, ಸರ್ಕಾರಕ್ಕೆ ವರದಿ ಕೊಡುತ್ತೇವೆ. ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳ ವಿಚಾರಣೆ ಮಾಡಿದ್ದೇವೆ. ಆದರೆ ಈಗ ತನಿಖಾ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು ಆಗದು ಎಂದಿದ್ದಾರೆ.

ರನ್ಯಾ ರಾವ್ ಗೆ ಜಾಮೀನು ನೀಡಿ: ರನ್ಯಾ ಪರ ವಕೀಲ ವಾದ

ಮತ್ತೊಂದೆಡೆ, 64 ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ರನ್ಯಾ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದೆ. ರನ್ಯಾ ರಾವ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಿರಣ್ ಜವಳಿ, ಆಕೆ ಒರ್ವ ಮಹಿಳೆ. ಬೆಂಗಳೂರು ನಿವಾಸಿ. ಆಕೆಯ ಪಾಸ್ ಪೋರ್ಟ್ ಡಿ ಆರ್​ಐ ವಶದಲ್ಲಿ ಇದೆ. ಹೀಗಿರುವಾಗ ಆಕೆ ಹೇಗೆ ದೇಶ ಬಿಟ್ಟು ಹೋಗುತ್ತಾಳೆ? ಅದು ಸಾದ್ಯವಾಗದ ಕೆಲಸ ಎಂದು ವಾದ ಮಂಡಿಸಿದ್ದಾರೆ. ಅಲ್ಲದೆ, ಕಸ್ಟಮ್ಸ್ ಕಾಯ್ದೆ 102 ಹಾಗೂ ಎನ್​ಡಿಪಿಎಸ್ ಕಾಯ್ದೆ 50 ರನ್ನ ಉಲ್ಲೇಖಿಸಿದ್ದಾರೆ. ಮಹಜರು ಪ್ರಕ್ರಿಯೆಯಲ್ಲಿ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸಿಲ್ಲ ಎಂದೂ ವಾದಿಸಿದ್ದಾರೆ.

ಇದನ್ನೂ ಓದಿ
Image
ಅಧಿಕಾರಿಗಳ ಮುಂದೆ ಗೋಲ್ಡ್ ಸ್ಮಗ್ಲಿಂಗ್ ಬಗ್ಗೆ ಒಪ್ಪಿಕೊಂಡ ನಟಿ ರನ್ಯಾ ರಾವ್
Image
ಅಪ್ಪ ಪೋಲಿಸ್.. ಮಗಳು ಕಳ್ಳಿ.. ನಟಿ ರನ್ಯಾ ಚಿನ್ನದ ರಹಸ್ಯ!
Image
ರನ್ಯಾ ರಾವ್ ಪ್ರಕರಣ, ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ
Image
ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ

ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಬಗ್ಗೆ ಒಪ್ಪಿಕೊಂಡ ನಟಿ ರನ್ಯಾ ರಾವ್; ಅಧಿಕಾರಿಗಳ ಮುಂದೆ ನೀಡಿದ ಹೇಳಿಕೆ ಇಲ್ಲಿದೆ..

ಈ ಪ್ರಕರಣಕ್ಕೆ ಕಸ್ಟಮ್ಸ್ ಕಾಯ್ದೆಯ 102 ಸೆಕ್ಷನ್ ಅನ್ವಯ ಆಗಲ್ಲ.  ವಶಕ್ಕೆ ಪಡೆದ ಕೂಡಲೆ ಮ್ಯಾಜಿಸ್ಟ್ರೇಟ್ ಅಥವಾ ಗೆಜೆಟೆಡ್ ಆಫೀಸರ್ ಮುಂದೆ ಹಾಜರುಪಡಿಸಬೇಕಿತ್ತು, ಅದನ್ನು ಮಾಡಿಲ್ಲ. ಆಕೆ ಯಾವ ಸಾಕ್ಷಿಯನ್ನು ನಾಶಮಾಡಲು ಸಾದ್ಯವಿಲ್ಲ. ಇದೊಂದು ಆರ್ಥಿಕ ಅಪರಾಧ, ಆಕೆ ಒರ್ವ ಮಹಿಳೆ ಆಗಿರುವ ಕಾರಣಕ್ಕೆ ಷರತ್ತುಗಳನ್ನು ವಿಧಿಸಿಯಾದರೂ ಜಾಮೀನು ಕೊಡಲೇಬೇಕು ಎಂದು ವಕೀಲರು ವಾದ ಮಂಡಿಸಿದ್ದಾರೆ. ಇಂದು ಡಿಆರ್​ಐ ಪರ ವಕೀಲರ ವಾದ ಮಂಡನೆ ನಡೆಯಲಿದ್ದು, ಏನಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ