AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರನ್ಯಾ ರಾವ್​ಗೆ ಬಿಗ್ ಶಾಕ್: ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಪತಿ ಜತಿನ್ ಸಿದ್ಧತೆ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲುಪಾಲಾಗಿರುವ ನಟಿ ರನ್ಯಾಗೆ ಇದೀಗ ಮತ್ತೊಂದು ಬಿಗ್​ ಶಾಕ್​ ಎದುರಾಗಿದೆ. ಪತಿ ಜತಿನ್ ಹುಕ್ಕೇರಿ ರನ್ಯಾಳಿಂದ ವಿಚ್ಛೇದನ ಪಡೆಯಲು ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಮದುವೆ ಬಳಿಕ ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿರುವ ಜತಿನ್, ರನ್ಯಾಳಿಂದ ಅಂತರ ಕಾಯ್ದುಕೊಂಡಿದ್ದಾರೆ.

ನಟಿ ರನ್ಯಾ ರಾವ್​ಗೆ ಬಿಗ್ ಶಾಕ್: ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಪತಿ ಜತಿನ್ ಸಿದ್ಧತೆ
Ranya Rao Husband Jatin Hukkeri
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 02, 2025 | 12:20 PM

Share

ಬೆಂಗಳೂರು, ಏಪ್ರಿಲ್​ 02: ಗೋಲ್ಡ್ ಸ್ಮಗ್ಲಿಂಗ್​ ಕೇಸ್​ನಲ್ಲಿ (Gold Smugling) ಜೈಲು ಪಾಲಾಗಿರುವ ನಟಿ ರನ್ಯಾ ರಾವ್ (Ranya Rao) ಜಾಮೀನು ಅರ್ಜಿ ವಜಾ ಆದ ಟೆನ್ಷನ್​ನಲ್ಲಿರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ. ರನ್ಯಾಳಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಆ ಮೂಲಕ ರನ್ಯಾ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಜತಿನ್ ಮುಂದಾಗಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸದ್ಯ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ.

2024 ಅಕ್ಟೋಬರ್ 6 ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ, ಜತಿನ್​ ಇಬ್ಬರೂ ಮದುವೆ ಬ್ರೋಕರ್ ಮೂಲಕ ಭೇಟಿಯಾಗಿದ್ದರು. 2024 ಅಕ್ಟೋಬರ್ 23ರಂದು ರನ್ಯಾ, ಜತಿನ್ ಎಂಗೇಜ್ ಮೆಂಟ್ ಆಗಿತ್ತು. 2024 ನವೆಂಬರ್ 27 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಮದುವೆ ಕೂಡ ಆಗಿತ್ತು. ಬಳಿಕ ಲ್ಯಾವೆಲ್ಲೆ ರಸ್ತೆಯ ಅಪಾರ್ಟ್ ಮೆಂಟ್​ನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.

ಇದನ್ನೂ ಓದಿ: ಚಿನ್ನ ಕಳ್ಳಸಾಗಾಣಿಕೆ: ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ ನಟಿ ರನ್ಯಾ ರಾವ್

ಇದನ್ನೂ ಓದಿ
Image
ರನ್ಯಾ​​ ಗೋಲ್ಡ್ ಸ್ಮಂಗ್ಲಿಂಗ್​ ಕೇಸ್​: 2ನೇ ಆರೋಪಿ ತರುಣ್​ಗೆ ಬಿಗ್ ಶಾಕ್​!
Image
ಚಿನ್ನ ಕಳ್ಳಸಾಗಾಣಿಕೆ ಕೇಸ್​: ದುಬೈನಲ್ಲಿ ಕಂಪನಿ ತೆರದಿದ್ರು ನಟಿ ರನ್ಯಾ
Image
ರನ್ಯಾ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ
Image
ನಟಿ ರನ್ಯಾ ರಾವ್​ ಕೇಸ್‌: ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ!

ಮದುವೆಯಾದ ಒಂದೇ ತಿಂಗಳಿಗೆ ರನ್ಯಾ, ಜತಿನ್ ನಡುವೆ ಮನಸ್ತಾಪ ಶುರುವಾಗಿದ್ದು, ಸಂಬಂಧದಲ್ಲಿ ಪಾರದರ್ಶಕತೆ ಇಲ್ಲ, ಮಾತುಕತೆಯೂ ಇರಲಿಲ್ಲವೆಂದು ಪತಿ ಜತಿನ್ ಹುಕ್ಕೇರಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಸಂಬಂಧಿಕರು ಸಂಧಾನಕ್ಕೆ ಪದೇ ಪದೇ ಯತ್ನಿಸಿದರೂ ಸಂಬಂಧ ಸರಿಹೋಗಿರಲಿಲ್ಲ.

ಗಂಡನ ಮಾತಿಗೆ ಕ್ಯಾರೆ ಎನ್ನದ ರನ್ಯಾ

ಮದುವೆಯಾದ ಎರಡೇ ತಿಂಗಳಿಗೆ ರನ್ಯಾ ದುಬೈಗೆ ಓಡಾಟ ನಡೆಸಿದ್ದರು. ಪದೇ ಪದೆ ರನ್ಯಾ ದುಬೈ ಟ್ರಿಪ್‌ಗೆ ಹೋಗುತ್ತಿದ್ದು, ಪತಿಗೆ ಅನುಮಾನ ಬಂದು ಜಗಳವಾಗಿದೆ. ಈ ಜಗಳ ಡಿವೋರ್ಸ್ ಹಂತಕ್ಕೂ ತಲುಪಿತ್ತು. ಗಂಡನ ಜೊತೆ ಜಗಳವಾಡಿದರೂ ಕ್ಯಾರೆ ಎನ್ನದ ರನ್ಯಾ, ತನ್ನ ಫ್ರೆಂಡ್ ಆಗಿದ್ದ ತರುಣ್ ಜೊತೆ ಸೇರಿ ಚಿನ್ನಾ ಸಾಗಾಟಕ್ಕೆ ಇಳಿದಿದ್ದರು. ದುಬೈನಿಂದ ಬೆಂಗಳೂರಿಗೆ ಗೋಲ್ಡ್​ ತರಿಸುತ್ತಿದ್ದೇ ತರುಣ್ ಅನ್ನೋ ಡಿಆರ್​ಐ ತನಿಖೆಯಲ್ಲಿ ಗೊತ್ತಾಗಿತ್ತು.

ಇನ್ನು ರನ್ಯಾರಾವ್ ಅರೆಸ್ಟ್ ಆದ ಮೇಲೆ ಪತಿ ಜತೀನ್ ಹುಕ್ಕೇರಿಯನ್ನೂ ಡಿಆರ್​ಐ ಅಧಿಕಾರಿಗಳು ವಿಚಾರಣೆ ಮಾಡಿದ್ದರು. ಇದರಿಂದ ಬಂಧನ ಭೀತಿಗೆ ಒಳಗಾಗಿದ್ದ ಜತೀನ್ ಹೈಕೋರ್ಟ್ ಮೆಟ್ಟಲೇರಿದ್ದರು.

ಇದನ್ನೂ ಓದಿ: ರನ್ಯಾ ರಾವ್ ಚಿನ್ನ ಕಳ್ಳ ಸಾಗಣೆ ಪ್ರಕರಣ: ಡಿಆರ್​​​ಐಗೆ ಸಿಕ್ಕ ಡಿಜಿಟಲ್ ಸಾಕ್ಷಿಯಲ್ಲಿ ಸ್ಮಗ್ಲಿಂಗ್ ರಹಸ್ಯ ಬಯಲು

ಜತಿನ್ ಹುಕ್ಕೇರಿ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಪತ್ನಿಯ ಮೇಲಿನ ಆರೋಪಕ್ಕೂ ಜತಿನ್​ಗೂ ಸಂಬಂಧವಿಲ್ಲ. ಮದುವೆಯಾದ ಒಂದೇ ತಿಂಗಳಿಗೆ ಇಬ್ಬರ ನಡುವೆ ಮನಸ್ತಾಪ ಇತ್ತು ಅಂತಾ ವಾದ ಮಾಡಿದ್ದರು. ಬಳಿಕ ಕೋರ್ಟ್ ಕಾನೂನು ಪ್ರಕ್ರಿಯೆಯಿಲ್ಲದೇ ಬಂಧಿಸುವಂತಿಲ್ಲವೆಂದು ಆದೇಶ ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:53 am, Wed, 2 April 25

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು