ಅತ್ಯಾಚಾರ ಆರೋಪ, ಕಿಡ್ನ್ಯಾಪ್ ಕೇಸ್​: ಎಸ್‌ಐಟಿ ಪ್ರಶ್ನೆಗಳಿಗೆ ರೇವಣ್ಣ ಕೊಟ್ಟ ಉತ್ತರವೇನು?

ಎಸ್​​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು, ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್​ನಲ್ಲಿ ಇರಿಸದೇ ಎಸ್​ಐಟಿ ತನ್ನ ಕಛೇರಿಯಲ್ಲಿ ವ್ಯವಸ್ಥೆ ಮಾಡಿದ್ದು, ಹೀಗಾಗಿ ರಾತ್ರಿ ರೇವಣ್ಣರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲ್ಲ.

ಅತ್ಯಾಚಾರ ಆರೋಪ, ಕಿಡ್ನ್ಯಾಪ್ ಕೇಸ್​: ಎಸ್‌ಐಟಿ ಪ್ರಶ್ನೆಗಳಿಗೆ ರೇವಣ್ಣ ಕೊಟ್ಟ ಉತ್ತರವೇನು?
ಅತ್ಯಾಚಾರ ಆರೋಪ, ಕಿಡ್ನ್ಯಾಪ್ ಕೇಸ್​: SIT ವಿಚಾರಣೆಗೆ ಸಹಕರಿಸಿದ ರೇವಣ್ಣ
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on:May 05, 2024 | 9:24 AM

ಬೆಂಗಳೂರು, ಮೇ 05: ಅತ್ಯಾಚಾರ ಆರೋಪ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಹಾಲಿ ಶಾಸಕ ಹೆಚ್​ಡಿ ರೇವಣ್ಣರನ್ನು (HD Revanna) ನಿನ್ನೆ ಎಸ್​ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನಿರೀಕ್ಷಣಾ ಜಾಮೀನಿ ಅರ್ಜಿ ವಜಾ ಬೆನ್ನಲ್ಲೇ ಬಂಧಿಸಲಾಗಿದೆ. ಇಂದು ಸಂಜೆಯೊಳಗೆ ನ್ಯಾಯಾಧೀಶರ ಮುಂದೆ ರೇವಣ್ಣರನ್ನು SIT ಹಾಜರುಪಡಿಸಲಿದೆ. ಮಧ್ಯೆ ರಾತ್ರಿ ಎಸ್​​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣ ಬಳಿ ಮಾಹಿತಿ ಪಡೆದುಕೊಂಡಿದ್ದು, ಆದರೆ ಎಸ್​ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಿಲ್ಲ ಎನ್ನಲಾಗುತ್ತಿದೆ.

ಎಸ್​​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು,ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್​ನಲ್ಲಿ ಇರಿಸದೇ ಎಸ್​ಐಟಿ ತನ್ನ ಕಛೇರಿಯಲ್ಲಿ ವ್ಯವಸ್ಥೆ ಮಾಡಿದ್ದು, ಹೀಗಾಗಿ ರಾತ್ರಿ ರೇವಣ್ಣರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲ್ಲ. ಇಂದು ಕೆಲ ಪ್ರಶ್ನೆಗಳನ್ನು ಮಾಡಲಿರುವ ಎಸ್​ಐಟಿ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಕೇಸ್​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಅತ್ಯಾಚಾರಕ್ಕೆ ಒಳಗಾದ ಮಹಿಳೆ ದೂರು ನೀಡಬಾರದು ಎಂದು ಆಕೆಯನ್ನು ಅಪಹರಣ ಮಾಡಿದ ಗಂಭೀರ ಆರೋಪ ಈಗ ಹೆಚ್​​ಡಿ ರೇವಣ್ಣ ಮೇಲಿದೆ. ಅತ್ಯಾಚಾರ ವಿಚಾರ ರೇವಣ್ಣರಿಗೆ ಗೊತ್ತಿತ್ತಾ? ವಿಚಾರ ಗೊತ್ತಿದ್ದು ಅತ್ಯಾಚಾರ ಮಾಡಿದ್ದ ಆರೋಪಿ ಪ್ರಜ್ವಲ್ ರೇವಣ್ಣರಿಗೆ ಸಹಾಯ ಮಾಡುವ ಉದ್ದೇಶದಿಂದ ಕಿಡ್ನ್ಯಾಪ್ ಮಾಡಿಸಿದರಾ? ದೂರು ಕೊಟ್ಟಲ್ಲಿ ನಿನಗೆ ಏನಾದರೂ ಮಾಡುತ್ತೇವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದಾರೆಯೇ? ಹೀಗೆ ಹಲವಾರು ಆಯಾಮದಲ್ಲಿ ಎಸ್​ಐಟಿ ವಿಚಾರಣೆ ನಡೆಸಲಿದೆ.

ಇತ್ತ ಕಿಡ್ನ್ಯಾಪ್ ಆಗಿರುವ ಮಹಿಳೆ ನಿನ್ನೆ ಎಸ್​ಐಟಿಗೆ ಸಿಕ್ಕಿದ್ದಾರೆ. ಹೀಗಾಗಿ ಮಹಿಳೆಯ ಹೇಳಿಕೆ ಬಹುಮುಖ್ಯವಾಗಿದೆ. ಇಂದು ರೇವಣ್ಣ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಮೊದಲೇ ಎಸ್​ಐಟಿ ಮಹಿಳೆಯಿಂದ ಮಾಹಿತಿ ಮತ್ತು ಹೇಳಿಕೆಯ ಮಾಡಿಕೊಳ್ಳಲಿದೆ.

ಇದನ್ನೂ ಓದಿ: ಹೆಚ್​ಡಿ ರೇವಣ್ಣ ಬಂಧನ: ಬೆಳಿಗ್ಗೆಯಿಂದ ಇದುವರೆಗೂ ಏನೆಲ್ಲಾ ನಡೀತು, ಇಲ್ಲಿದೆ ಮಾಹಿತಿ

ಕಿಡ್ನ್ಯಾಪ್​ ಮಾಡಿ ತನಗೆ ಬೆದರಿಕೆ ಇಟ್ಟಿದ್ದರು. ತನ್ನ ಮೇಲೆ ಅತ್ಯಾಚಾರ ಆಗಿದೆ ಈ ವಿಚಾರ ಹೊರ ಬಾರದಂತೆ ತಡೆದರು ಎಂದು ಹೇಳಿಕೆ ನೀಡಿ ಸಾಕ್ಷ್ಯ ನೀಡಿದರೆ ರೇವಣ್ಣ ಕುಟುಂಬಕ್ಕೆ ಸಂಕಷ್ಟ ಎದುರಾಗಲಿದೆ. ಇಲ್ಲಾ ತಾನಾಗಿಯೇ ಹೋಗಿದ್ದೆ ಯಾವ ಒತ್ತಡ ಇರಲಿಲ್ಲ ಎಂದು ಹೇಳಿಕೆ ನೀಡಿದರೆ ಮಾತ್ರ ರೇವಣ್ಣ ಮತ್ತು ಕುಟುಂಬಕ್ಕೆ ರಿಲೀಫ್ ಸಿಗಲಿದೆ. ಸದ್ಯ ಕಿಡ್ನ್ಯಾಪ್ ಆಗಿದ್ದ ಮಹಿಳೆ ಹೇಳಿಕೆ ಹಾಗೂ ಇತರೆ ಸಾಕ್ಷಿಗಳ ಮೇಲೆ ಮುಂದಿನ ತನಿಖೆ ನಿರ್ಧಾರವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:45 am, Sun, 5 May 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ