AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಮಹಿಳೆಯ ದೇಹದಲ್ಲಿ ವಿಶ್ವದಲ್ಲೇ ಎಲ್ಲೂ ಕಾಣಸಿಗದ ವಿಭಿನ್ನ ರಕ್ತ! ಸಿಆರ್​ಐಬಿ ರಕ್ತ ಗುಂಪಿನ ಬಗ್ಗೆ ನಿಮಗೆ ಗೊತ್ತೇ…

ಕೋಲಾರದ 38 ವರ್ಷದ ಮಹಿಳೆಯೊಬ್ಬರಲ್ಲಿ ವಿಶ್ವದಲ್ಲೇ ಈವರೆಗೆ ಪತ್ತೆಯಾಗದ ಅಪರೂಪದ ರಕ್ತದ ಗುಂಪು ಪತ್ತೆಯಾಗಿದೆ. ಸದ್ಯ ಈ ಹೊಸ ರಕ್ತ ಗುಂಪಿಗೆ CRIB ಎಂದು ಹೆಸರಿಸಲಾಗಿದೆ. ಹಾಗಾದರೆ, ಈ ವಿಜ್ಞಾನ ವಿಸ್ಮಯ ಪತ್ತೆಯಾಗಿದ್ದು ಹೇಗೆ? ಹೊಸ ರಕ್ತ ಗುಂಪಿಗೆ ಆ ಹೆಸರಿಟ್ಟಿದ್ದು ಯಾಕೆ? ಎಲ್ಲ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಮುಂದೆ ಓದಿ.

ಕೋಲಾರ ಮಹಿಳೆಯ ದೇಹದಲ್ಲಿ ವಿಶ್ವದಲ್ಲೇ ಎಲ್ಲೂ ಕಾಣಸಿಗದ ವಿಭಿನ್ನ ರಕ್ತ! ಸಿಆರ್​ಐಬಿ ರಕ್ತ ಗುಂಪಿನ ಬಗ್ಗೆ ನಿಮಗೆ ಗೊತ್ತೇ...
ಸಾಂದರ್ಭಿಕ ಚಿತ್ರ
Ganapathi Sharma
|

Updated on: Jul 30, 2025 | 9:58 AM

Share

ಬೆಂಗಳೂರು, ಜುಲೈ 30: ವಿಜ್ಞಾನ ವಿಸ್ಮಯವೊಂದು ಕರ್ನಾಟಕದ ಕೋಲಾರದಲ್ಲಿ (Kolar) ಬೆಳಕಿಗೆ ಬಂದಿದೆ. ಜಿಲ್ಲೆಯ ಮಹಿಳೆಯೊಬ್ಬರು ವಿಶ್ವದಲ್ಲೇ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು (Blood Group) ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗಿದ್ದಾರೆ. ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ O Rh+ ಆಗಿತ್ತು. ಆದರೆ ವಿಶೇಷವೆಂದರೆ, ಲಭ್ಯವಿರುವ ಯಾವುದೇ O+ ರಕ್ತ ಅವರ ರಕ್ತಕ್ಕೆ ಹೊಂದಾಣಿಕೆಯಾಗುತ್ತಿರಲಿಲ್ಲ. ಹೀಗಾಗಿ ಹೆಚ್ಚಿನ ಪರೀಕ್ಷೆಗಾಗಿ ಅವರ ರಕ್ತದ ಮಾದರಿಯನ್ನು ರೋಟರಿ ಬೆಂಗಳೂರು ಟಿಟಿಕೆ ಬ್ಲಡ್ ಸೆಂಟರ್​​ನಲ್ಲಿರುವ ಅಡ್ವಾನ್ಸ್ಡ್ ಇಮ್ಯುನೊಹೆಮಟಾಲಜಿ ರೆಫರೆನ್ಸ್ ಲ್ಯಾಬೋರೇಟರಿಗೆ ಕಳುಹಿಸಿಕೊಡಲಾಗಿತ್ತು.

ಲ್ಯಾಬೊರೇಟರಿಯ ತಜ್ಞ ವೈದ್ಯರು ಹೇಳಿದ್ದೇನು?

ಅತ್ಯಾಧುನಿಕ ಸೆರೋಲಾಜಿಕಲ್ ತಂತ್ರಗಳನ್ನು ಬಳಸಿಕೊಂಡು, ನಮ್ಮ ತಂಡವು ಅವರ ರಕ್ತವನ್ನು ಪರೀಕ್ಷೆಗೆ ಒಳಪಡಿಸಿದೆ. ಮಹಿಳೆಯ ರಕ್ತವು ಪ್ಯಾನ್ರಿಯಾಕ್ಟಿವ್ (ಅಂದರೆ, ಸೀರಮ್ ಅಥವಾ ಪ್ಲಾಸ್ಮಾ, ಪ್ರಯೋಗಾಲಯದಲ್ಲಿ ಪರೀಕ್ಷಿಸಲಾದ ಎಲ್ಲಾ ಕೆಂಪು ರಕ್ತ ಕಣಗಳೊಂದಿಗೆ ಪ್ರತಿಕ್ರಿಯಿಸುವ ಪರಿಸ್ಥಿತಿ) ಆಗಿರುವುದು ಕಂಡುಬಂದಿದೆ. ಆ ರಕ್ತವು ಎಲ್ಲಾ ಪರೀಕ್ಷಾ ಮಾದರಿಗಳೊಂದಿಗೆ ಹೊಂದಿಕೆಯಾಗುವುದಿಲ್ಲ ಎಂಬುದು ಪತ್ತೆಯಾಯಿತು. ಇದು ಅಪರೂಪದ ಅಥವಾ ತಿಳಿದಿಲ್ಲದ ರಕ್ತದ ಪ್ರಕಾರದ ಸಂಭವನೀಯ ಪ್ರಕರಣವೆಂದು ಗುರುತಿಸಲಾಗಿದೆ ಎಂದು ರೋಟರಿ ಬೆಂಗಳೂರು ಟಿಟಿಕೆ ರಕ್ತ ಕೇಂದ್ರದ ವೈದ್ಯ ಡಾ. ಅಂಕಿತ್ ಮಾಥುರ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಕುಟುಂಬದವರ ರಕ್ತದೊಂದಿಗೂ ಇಲ್ಲ ಹೋಲಿಕೆ!

ಮಹಿಳೆಯ ಕುಟುಂಬದವರಲ್ಲಿ ಯಾರಲ್ಲಾದರೂ ಅಂಥದ್ದೇ ಮಾದರಿಯ ರಕ್ತ ಇದೆಯೇ ಎಂದು ತಿಳಿಯಲು ಪ್ರಯತ್ನಿಸಲಾಯಿತು. ಅವರ ಕುಟುಂಬದ 20 ಸದಸ್ಯರಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಯಿತು. ಆದರೆ ಅವುಗಳಲ್ಲಿ ಯಾವುದೂ ಮಹಿಳೆಯ ರಕ್ತದೊಂದಿಗೆ ಹೊಂದಿಕೆಯಾಗಲಿಲ್ಲ ಎಂದೂ ಅಂಕಿತ್ ಮಾಥುರ್ ತಿಳಿಸಿದ್ದಾರೆ.

ರಕ್ತ ನೀಡದೆ ಯಶಸ್ವಿ ಶಸ್ತ್ರಚಿಕಿತ್ಸೆ!

ಪ್ರಕರಣವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಲಾಯಿತು. ಅವರ ವೈದ್ಯರು ಮತ್ತು ಕುಟುಂಬದವರ ಪ್ರಯತ್ನದಿಂದ, ರಕ್ತ ವರ್ಗಾವಣೆಯ ಅಗತ್ಯವಿಲ್ಲದಂತೆಯೇ ಅವರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು ಎಂಬುದನ್ನೂ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಚರ್ಮದ ಮೇಲೆ ಈ ಸಮಸ್ಯೆಗಳು ಕಾಣಿಸಿಕೊಂಡರೆ ಅದು ಹೃದಯಾಘಾತದ ಲಕ್ಷಣವಾಗಿರಬಹುದು; ನಿರ್ಲಕ್ಷ್ಯ ಬೇಡ

ಮಹಿಳೆ ಮತ್ತು ಅವರ ಕುಟುಂಬದ ಎಲ್ಲರ ರಕ್ತದ ಮಾದರಿಗಳನ್ನು ಯುಕೆಯ ಬ್ರಿಸ್ಟಲ್‌ನಲ್ಲಿರುವ ಅಂತರರಾಷ್ಟ್ರೀಯ ರಕ್ತ ಗುಂಪು ಉಲ್ಲೇಖ ಪ್ರಯೋಗಾಲಯಕ್ಕೆ (ಐಬಿಜಿಆರ್‌ಎಲ್) ಕಳುಹಿಸಲಾಗಿತ್ತು. ಅಲ್ಲಿ ಹತ್ತು ತಿಂಗಳ ಕಾಲ ವ್ಯಾಪಕ ಸಂಶೋಧನೆ ಮತ್ತು ಪರೀಕ್ಷೆಗಳನ್ನು ನಡೆಸಲಾಗಿತ್ತು. ಆ ಪರೀಕ್ಷೆಗಳಲ್ಲಿಯೂ, ಈವರೆಗೆ ಕಂಡುಬರದ ಹೊಸ ರಕ್ತ ಗುಂಪು ಇದು ಎಂಬುದು ಕಂಡುಬಂದಿದೆ ಎಂದು ಡಾ. ಮಾಥುರ್ ಹೇಳಿದ್ದಾರೆ.

ಏನಿದು ಸಿಆರ್​ಐಬಿ ರಕ್ತ ಗುಂಪು?

ಇದು ಕ್ರೋಮರ್ (CR) ರಕ್ತ ಗುಂಪಿನ ಭಾಗವಾಗಿದ್ದು, ಇದರ ಮೂಲವನ್ನು ಗುರುತಿಸಿ ಇದೀಗ ಅಧಿಕೃತವಾಗಿ CRIB ಎಂದು ಹೆಸರಿಸಲಾಗಿದೆ. CR ಎಂಬುದು ‘ಕ್ರೋಮರ್’ ಎಂಬುದನ್ನು ಪ್ರತಿನಿಧಿಸಿರೆ, ‘IB’ ಇಂಡಿಯಾ ಮತ್ತು ಬೆಂಗಳೂರು ಅನ್ನು ಸೂಚಿಸುತ್ತದೆ. 2025 ರ ಜೂನ್​​ನಲ್ಲಿ ಇಟಲಿಯ ಮಿಲನ್‌ನಲ್ಲಿ ನಡೆದ ಅಂತರರಾಷ್ಟ್ರೀಯ ರಕ್ತ ವರ್ಗಾವಣೆ ಸೊಸೈಟಿ (ISBT) ಯ 35 ನೇ ಪ್ರಾದೇಶಿಕ ಕಾಂಗ್ರೆಸ್‌ನಲ್ಲಿ CRIB ಎಂಬ ಈ ಐತಿಹಾಸಿಕ ಘೋಷಣೆ ಮಾಡಲಾಗಿದೆ. ಇದರೊಂದಿಗೆ, CRIB ರಕ್ತ ಪ್ರತಿಜನಕದೊಂದಿಗೆ ಗುರುತಿಸಲ್ಪಟ್ಟ ವಿಶ್ವದ ಮೊದಲ ವ್ಯಕ್ತಿ ಎಂದು ಕೋಲಾರದ ಮಹಿಳೆಯನ್ನು ಗುರುತಿಸಲಾಗುತ್ತದೆ ಎಂದು ಡಾ. ಮಾಥುರ್ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ