AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಲಿ ಜ್ವರದ ಟೆನ್ಷನ್: ಡೆಂಘಿ, ಚಿಕುನ್ ಗುನ್ಯಾ ನಡುವೆ ಮತ್ತೊಂದು ಆತಂಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆಯ ಜೊತೆಗೆ ಸಾಂಕ್ರಾಮಿಕ ಖಾಯಿಲೆಗಳೂ ಲಗ್ಗೆ ಇಟ್ಟಿವೆ. ರಾಜಧಾನಿಯಲ್ಲಿ ಈಗಾಲೇ ‌ ಡೆಂಘಿ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬರಲು ಆರಂಭವಾಗಿದೆ. ಈ ನಡುವೆ ಇಲಿ ಜ್ವರದ ಮತ್ತೊಂದು ಭೀತಿ ಶುರುವಾಗಿದೆ. ಜತೆಗೆ, ಕರ್ನಾಟಕದ ವಿವಿಧೆಡೆಗಳಲ್ಲಿಯೂ ಇಲಿ ಜ್ವರದ ಪ್ರಕರಣಗಳು ಕಂಡುಬರುತ್ತಿವೆ.

ಬೆಂಗಳೂರಿನಲ್ಲಿ ಇಲಿ ಜ್ವರದ ಟೆನ್ಷನ್: ಡೆಂಘಿ, ಚಿಕುನ್ ಗುನ್ಯಾ ನಡುವೆ ಮತ್ತೊಂದು ಆತಂಕ
ಸಾಂದರ್ಭಿಕ ಚಿತ್ರ
Vinay Kashappanavar
| Updated By: Ganapathi Sharma|

Updated on: May 02, 2025 | 6:57 AM

Share

ಬೆಂಗಳೂರು, ಮೇ 2: ಬೆಂಗಳೂರಿಗೆ (Bengaluru) ಈಗ ಇಲಿ ಜ್ವರದ ಆತಂಕ ಎದುರಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಲೆಪ್ಟೊಸ್ಪೈರೋಸಿಸ್ (Leptospirosis) ಎಂದು ಕರೆಯಲ್ಪಡುವ ಇಲಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿವೆ . ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 169 ಜನರನ್ನು ಇಲಿ ಜ್ವರ ಪತ್ತೆ ಪರೀಕ್ಷೆಗೆ ಒಳಪಡಿಸಿದ್ದು 24 ಜನರಲ್ಲಿ ಇಲಿ ಜ್ವರ ಪತ್ತೆಯಾಗಿದೆ. ಜನವರಿಯಿಂದ ಇಲ್ಲಿವರೆಗೆ 3044 ಮಂದಿಯಲ್ಲಿ ಲಕ್ಷಣಗಳು ಕಂಡುಬಂದಿದ್ದು, ಜನರ ರಕ್ತ ಮಾದರಿ ಪಡೆದು ಪರೀಕ್ಷೆ ಮಾಡಿಸಿದಾಗ 365 ಜನರಲ್ಲಿ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಆರೋಗ್ಯ ಇಲಾಖೆ ಇಲಿ ಜ್ವರದ ಬಗ್ಗೆ ಎಚ್ಚರಿಕೆ ನೀಡಿದೆ.

ಲೆಪ್ಟೊಸ್ಪೈರೋಸಿಸ್ ಅಥವಾ ಇಲಿ ಜ್ವರ ಇಲಿಗಳಿಂದ ಹರಡುತ್ತದೆ. ಬೆಂಗಳೂರು ವೈದ್ಯರು ಇಲಿ ಜ್ವರದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಇಲಿಯ ಎಂಜಲು, ಮೂತ್ರ, ಮಲ ಅಥವಾ ಅದರ ದೇಹದ ಯಾವುದೇ ದ್ರವ ಮಾನವರ ಚರ್ಮಕ್ಕೆ ತಾಗುವುದರಿಂದ ಈ ಸೋಂಕು ಹರಡುತ್ತದೆ. ಹೀಗಾಗಿ ತೀವ್ರ ಜ್ವರ , ತಲೆನೋವು, ಕಣ್ಣು ಕೆಂಪಾಗುವುದು, ವಾಕರಿಕೆ ಅಥವಾ ವಾಂತಿ, ಮೈಕೈ ನೋವು, ಮೈಮೇಲೆ ಗುಳ್ಳೆಗಳು ಹಾಗೂ ಸೋಂಕು ಉಂಟಾದ ಎರಡು ದಿನಗಳ ನಂತರ ಮತ್ತು ಕೀಲುನೋವು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಸಾಮಾನ್ಯವಾಗಿ ಮಳೆಗಾಲದಲ್ಲಿ ಇಲಿ ಜ್ವರ ಪ್ರಕರಣಗಳು ಹೆಚ್ಚು ಕಂಡುಬರುತ್ತವೆ. ಆದರೆ ಈ ವರ್ಷ ಮಳೆಗಾಲ ಆರಂಭಕ್ಕೂ ಇಲಿಜ್ವರ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಆರೋಗ್ಯ ಇಲಾಖೆ ನಿರ್ದೇಶಕ ಅನ್ಸಾರ್ ಅಹ್ಮದ್ ತಿಳಿಸಿದ್ದಾರೆ.

ಇದನ್ನೂ ಓದಿ
Image
ಕರ್ನಾಟಕ ಕರವಾಳಿಯಲ್ಲಿ ಭಾರಿ ಕಟ್ಟೆಚ್ಚರ: ಪ್ರವಾಸಿ ತಾಣಗಳ ಮೇಲೆ ನಿಗಾ
Image
ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಮೂರು ಹೆಚ್ಚುವರಿ ಹೊಸ ಬೋಗಿಗಳ ರವಾನೆ
Image
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ ಖಚಿತ, ಮೇ 13ಕ್ಕೆ ಆದೇಶ ಸಾಧ್ಯತೆ
Image
ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇಂದು ಮಳೆ

ಇಲಿ ಜ್ವರದ ಲಕ್ಷಣಗಳು ಏನು?

  • ತಲೆನೋವು
  • ಕಣ್ಣು ಕೆಂಪಾಗುವುದು
  • ವಾಕರಿಕೆ ಅಥವಾ ವಾಂತಿ
  • ಮೈಕೈ ನೋವು
  • ಮೈಮೇಲೆ ಗುಳ್ಳೆಗಳು
  • ತೀವ್ರ ಜ್ವರ
  • ಸೋಂಕು ಉಂಟಾದ ಎರಡು ದಿನಗಳ ನಂತರ ಕೀಲುನೋವು

ಇಲಿ ಜ್ವರ ಹರಡುವಿಕೆ ತಡೆಯಲು ಏನು ಮುನ್ನೆಚ್ಚರಿಕೆ ಕೈಗೊಳ್ಳಬೇಕು?

ಬೆಂಗಳೂರಿನಲ್ಲಿ ಡೆಂಘಿ, ಚಿಕುನ್ ಗುನ್ಯಾ ಹಾಗೂ ಇತರ ಅನೇಕ ವೈರಲ್ ಸೋಂಕುಗಳ ನಡುವೆ ಈಗ ಇಲಿ ಜ್ವರದ ಆತಂಕ ಹೆಚ್ಚಾಗಿರುವುದರಿಂದ ಮನೆಯ ಸಂಪ್​ಗಳ, ಬಳಸುವ ನೀರಿನ ಬಗ್ಗೆ ಎಚ್ಚರ ವಹಿಸಿ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಮನೆಯಲ್ಲಿ ಅಥವಾ ಉಗ್ರಾಣಗಳಲ್ಲಿ ಆಹಾರ ಪದಾರ್ಥಗಳು, ದವಸ ಧಾನ್ಯಗಳನ್ನು ಎಲ್ಲೆಂದರಲ್ಲಿ ಎಸೆಯದೆ ಸ್ವಚ್ಛತೆ ಕಾಪಾಡಿಕೊಳ್ಳುವುದರ ಮೂಲಕ ಹಾಗೂ ಸಾಧ್ಯವಾದಷ್ಟು ಬಿಸಿ ನೀರು ಸೇವನೆ ಮಾಡುವ ಮೂಲಕ ಇಲಿ ಜ್ವರ ಹರಡುವುದನ್ನು ನಿಯಂತ್ರಿಸಬಹುದು ಎಂದು ಕೆಸಿ ಜನರಲ್ ಆಸ್ಪತ್ರೆ ವೈದ್ಯ ಡಾ ಜಗದೀಶ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಗಾಳಿ-ಮಳೆಗೆ ಓರ್ವ ಬಲಿ: ಹಲವೆಡೆ ಟ್ರಾಫಿಕ್​ ಜಾಮ್​

ಒಟ್ಟಿನಲ್ಲಿ ಬೆಂಗಳೂರಿನಲ್ಲಿ ಬಿಸಿಲ ಬೇಗೆ, ಹಾಗೂ ಅಕಾಲಿಕ ಮಳೆಯಿಂದ ಸಾಂಕ್ರಾಮಿಕ ಖಾಯಿಲೆಗಳು ಹೆಚ್ಚುತ್ತಿವೆ. ಹೀಗಾಗಿ ಜನರು ಮುನ್ನೆಚ್ಚರಿಕೆ ವಹಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ