AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡಿತರ ಚೀಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇ-ಕೆವೈಸಿ ಕೊನೆ ದಿನಾಂಕ ಮತ್ತೆ ವಿಸ್ತರಣೆ

ಕೇಂದ್ರದ ನಿಯಮದಂತೆ 5 ವರ್ಷಕ್ಕೊಮ್ಮೆ ರೇಷನ್‌ ಕಾರ್ಡ್‌ ಇ-ಕೆವೈಸಿ ಕಡ್ಡಾಯವಾಗಿದ್ದು, ಕರ್ನಾಟಕದಲ್ಲಿ ಅರ್ಧಕ್ಕಿಂತ ಹೆಚ್ಚು ಕುಟುಂಬಗಳ ಪ್ರಕ್ರಿಯೆ ಬಾಕಿಯಿದೆ. ಹೀಗಾಗಿ ಕರ್ನಾಟಕ ಆಹಾರ ಇಲಾಖೆಯು ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಕೊಳ್ಳಲು ‘ಅನ್ನಸೇವೆ’ ಆ್ಯಪ್‌ ಸೌಲಭ್ಯವನ್ನು ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೂ ವಿಸ್ತರಿಸಿದೆ. ಹೀಗಾಗಿ ಮನೆಯಲ್ಲೇ ಕುಳಿತು ಮೊಬೈಲ್​​ನಲ್ಲಿ ಇಕೆವೈಸಿ ಪೂರ್ಣಗೊಳಿಸಬಹುದು. ಇದರ ಜೊತೆಗೆ ಇದೀಗ ಕೊನೆ ದಿನಾಂಕವನ್ನೂ ಸಹ ಮತ್ತೆ ವಿಸ್ತರಣೆ ಮಾಡಲಾಗಿದೆ.

ಪಡಿತರ ಚೀಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇ-ಕೆವೈಸಿ ಕೊನೆ ದಿನಾಂಕ ಮತ್ತೆ ವಿಸ್ತರಣೆ
Ration Card E Kyc
ರಮೇಶ್ ಬಿ. ಜವಳಗೇರಾ
|

Updated on: Oct 18, 2026 | 4:39 PM

Share

ಮುಖ್ಯಾಂಶಗಳು

  • ಪಡಿತರ ಚೀಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಆಹಾರ ಇಲಾಖೆ
  • ರೇಷನ್ ಕಾರ್ಡ್​ ಇ-ಕೆವೈಸಿ ಕೊನೆ ದಿನಾಂಕ ಮತ್ತೆ ವಿಸ್ತರಣೆ
  • ಅ.20ರಂದು ಇದ್ದ ಕೊನೆ ದಿನಾಂಕ ನವೆಂಬರ್ 10ಕ್ಕೆ ವಿಸ್ತರಣೆ

ಬೆಂಗಳೂರು, (ಅಕ್ಟೋಬರ್ 18): ಪಡಿತರ ಚೀಟಿ ಫಲಾನುಭವಿಗಳು ಇ-ಕೆವೈಸಿ ದೃಢೀಕರಿಸುವ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ. ಈ ಮೊದಲು ಇ-ಕೆವೈಸಿ ದೃಢೀಕರಿಸಲು ಅಕ್ಟೋಬರ್ 20 ಕೊನೆಯ ದಿನಾಂಕವನ್ನು ಇದೀಗ ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಒಂದು ವರ್ಷಕ್ಕೂ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 1,15,87,298 ಫಲಾನುಭವಿಗಳು ಮತ್ತೊಮ್ಮೆ ಇ-ಕೆವೈಸಿ ಮಾಡಬೇಕೆಂದು ಆದೇಶಿಸಿರುವ ಹಿನ್ನೆಲೆಯಲ್ಲಿ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಯಾರ್ಯಾರು ಇ-ಕೆವೈಸಿ ಮಾಡಿಸಬೇಕು?

ರಾಜ್ಯದಲ್ಲಿ ಒಂದು ವರ್ಷದ ಹಿಂದೆ ಇ-ಕೆವೈಸಿ ಮಾಡಿಸಿದ ಫಲಾನುಭವಿಗಳ ಜೊತೆಗೆ, ಇದುವರೆಗೆ ಒಂದು ಬಾರಿಯೂ ಇ-ಕೆವೈಸಿ ಮಾಡಿಸದ 3,82,362 ಹಾಗೂ ಐದು ವರ್ಷ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 54,27,396 ಫಲಾನುಭವಿಗಳು ಇನ್ನೂ ಇ-ಕೆವೈಸಿ ದೃಢೀಕರಿಸಬೇಕಿದೆ. ಈ ಎಲ್ಲ ಫಲಾನುಭವಿಗಳು ‘ಅನ್ನ ಸೇವೆ’ ಮೊಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ‘AHARA’ ತಂತ್ರಾಂಶದ ಮೂಲಕ ನವೆಂಬರ್ 10 ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕುಳಿತಲ್ಲೇ 5 ನಿಮಿಷದಲ್ಲೇ ರೇಷನ್‌ ಕಾರ್ಡ್‌ e-KYC ಮಾಡಬಹುದು: ಇಲ್ಲಿದೆ ಸರಳ ವಿಧಾನ

‘ಅನ್ನ ಸೇವೆ’ ಆ್ಯಪ್ ಈಗ ದೇಶಾದ್ಯಂತ ಲಭ್ಯ

ಹೊರ ರಾಜ್ಯಗಳಿಗೆ ಕೆಲಸಕ್ಕೆಂದು ಹೋಗಿರುವ ರಾಜ್ಯದ ಪಡಿತರ ಚೀಟಿದಾರಿಗೆ ಅನುಕೂಲ ಕಲ್ಪಿಸಲು, ‘ಅನ್ನ ಸೇವೆ’ ಆ್ಯಪ್ ನ ಲಭ್ಯತೆಯನ್ನು ಇಂದಿನಿಂದ ದೇಶಾದ್ಯಂತ ವಿಸ್ತರಿಸಲಾಗಿದೆ. ಹೊರರಾಜ್ಯಗಳಲ್ಲಿರುವ ರಾಜ್ಯದ ಪಡಿತರ ಚೀಟಿದಾರರು ಅವರಿದ್ದಲಿಂದಲೇ ಆ್ಯಪ್ ಡೌನಲೋಡ್ ಮಾಡಿಕೊಂಡು ಇ-ಕೆವೈಸಿ ಪೂರ್ಣಗೊಳಿಸುವಂತೆ ಇಲಾಖೆ ಮನವಿ ಮಾಡಿಕೊಂಡಿದೆ.

ಅನ್ನ ಸೇವೆ ಆ್ಯಪ್ ನ ಅಪ್ಡೇಟ್ ಕೂಡ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದ್ದು ಈಗಾಗಲೇ ತಮ್ಮ ಮೊಬೈಲ್ ನಲ್ಲಿ ಆ್ಯಪ್ ಡೌನಲೋಡ್ ಮಾಡಿಕೊಂಡಿರುವವರು ಅಪ್ಡೇಟ್ ಮಾಡಿಕೊಳ್ಳಬಹುದು.

ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಮಾಡಿಸಿ

ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿ ನಿಗದಿಯಾಗಿತ್ತು. ಆದ್ರೆ, ಇನ್ನೂ ಹಲವು ಫಲಾನುಭವಿಗಳು ಇ-ಕೆವೈಸಿ ಮಾಡಿಸುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಅಕ್ಟೋಬರ್ 20ರವರೆಗೆ ಗಡುವನ್ನು ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ಹೀಗಾಗಿ ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಉಚಿತ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಕಾರ್ಡ್​ ಕೂಡ ರದ್ದಾಗುವ ಸಾಧ್ಯತೆ ಇದೆ.

ಕೇಳಬಹುದಾದ ಸಮಾನ್ಯ ಪ್ರಶ್ನೆಗಳು

  1. ಪ್ರಶ್ನೆ: ರೇಷನ್ ಕಾರ್ಡ್​ ಇ-ಕೆವೈಸಿ ಕೊನೆ ದಿನಾಂಕ ಯಾವಾಗ? ಉತ್ತರ: ಅಕ್ಟೋಬರ್ 20 ಕೊನೆಯ ದಿನಾಂಕವನ್ನು  ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ.
  2. ಪ್ರಶ್ನೆ: ಯಾರ್ಯಾರು ಇ-ಕೆವೈಸಿ ಮಾಡಿಸಬೇಕು? ಉತ್ತರ: ಇದುವರೆಗೆ ಒಂದು ಬಾರಿಯೂ ಹಾಗೂ ಐದು ವರ್ಷ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ ಫಲಾನುಭವಿಗಳು
  3. ಪ್ರಶ್ನೆ: ರೇಷನ್ ಕಾರ್ಡ್​ ಇ-ಕೆವೈಸಿ ಎಲ್ಲಿ ಮಾಡಿಸಬೇಕು? ಉತ್ತರ: ನ್ಯಾಯಬೆಲೆ ಅಂಗಡಿ, ಅಥವಾ ಮೊಬೈಲ್​​​ನಲ್ಲಿ ಅನ್ನ ಸೇವಾ ಆ್ಯಪ್ ಮೂಲಕ ಇಕೆವೈಸಿ ಮಾಡಿಕೊಳ್ಳಬಹುದು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು