AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ವಿರುದ್ಧ RCBಗೆ ಗೆಲವು: ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರಿಂದ ಅಭಿನಂದನೆಯ ಸುರಿಮಳೆ

ಆರ್​ಸಿಬಿ ತಂಡವು ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ಚೊಚ್ಚಲ ಐಪಿಎಲ್ ಕಪ್ ಗೆದ್ದಿದೆ. ಈ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಾಗೂ ಹೆಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. 18 ವರ್ಷಗಳ ಕಾಲದ ಕನಸು ಈಡೇರಿದೆ ಎಂದು ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ.

ಪಂಜಾಬ್ ವಿರುದ್ಧ RCBಗೆ ಗೆಲವು: ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರಿಂದ ಅಭಿನಂದನೆಯ ಸುರಿಮಳೆ
ಆರ್​ಸಿಬಿ, ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on: Jun 04, 2025 | 12:38 AM

Share

ಬೆಂಗಳೂರು, ಜೂನ್​ 04: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​​ಗಳಿಂದ ಮಣಿಸಿದ ಆರ್​ಸಿಬಿ (RCB) ಚೊಚ್ಚಲ ಐಪಿಎಲ್ (IPL) ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಆರ್​ಸಿಬಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆದಿಯಾಗಿ ವಿವಿಧ ರಾಜಕೀಯ ನಾಯಕರು ಅಭಿನಂದನೆಗಳನ್ನು ತಿಳಿಸಿದ್ದಾರೆ. “ Rrrrrrrrr…. Cccccccc…. Bbbbbbbbb….ಇದು ಇತಿಹಾಸ ಸೃಷ್ಟಿಸಿದ ದಿನ.. ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದಾರೆ.

“ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
RCB ಗೆಲುವು ಖಚಿತವಾಗುತ್ತಿದ್ದಂತೆ ಮೈದಾನದಲ್ಲೇ ಕಣ್ಣೀರಿಟ್ಟ ವಿರಾಟ್ ಕೊಹ್ಲಿ
Image
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
Image
ಚೊಚ್ಚಲ ಐಪಿಎಲ್​​ ಚಾಂಪಿಯನ್‌ ಕಿರೀಟ ತೊಟ್ಟ ಆರ್​ಸಿಬಿ
Image
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...

“ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ” ಎಂದಿದ್ದಾರೆ.

ಮರೆಯಲಾಗದ, ಐತಿಹಾಸಿಕ ಗೆಲುವು: ಡಿಕೆ ಶಿವಕುಮಾರ್

ಈ ಸಲಾ ಕಪ್ ನಮ್ದೇ!❤️ ಐಪಿಎಲ್​ನಲ್ಲಿ ಇಂದು ಮರೆಯಲಾಗದ, ಐತಿಹಾಸಿಕ ಗೆಲುವಿಗಾಗಿ ಆರ್​ಸಿಬಿಗೆ ಅಭಿನಂದನೆಗಳು. 18 ವರ್ಷಗಳ ಉತ್ಸಾಹ, ನಿಷ್ಠೆ ಈ ರಾತ್ರಿ ಹೊರಹೊಮ್ಮಿದೆ. ನೀವು ಪ್ರತಿಯೊಬ್ಬ ಕನ್ನಡಿಗನ ಕನಸನ್ನು ನನಸಾಗಿಸಿದ್ದೀರಿ. ಇದು ಗೆಲುವಿಗಿಂತ ಹೆಚ್ಚಿನದು. ಇಡೀ RCB ಸೈನ್ಯಕ್ಕೆ ಭಾವನಾತ್ಮಕ ಕ್ಷಣವಾಗಿದೆ. ಈ ಗೆಲುವನ್ನು ಕರ್ನಾಟಕ ಹೆಮ್ಮೆಯಿಂದ ಹೇಳುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಟ್ವೀ ಎಂದಿದ್ದಾರೆ.

ಇದನ್ನೂ ಓದಿ: ಗರ್ವದಿಂದ ಹೇಳಿ ‘ಈ ಸಲ ಕಪ್ ನಮ್ದೆ’: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್​ಸಿಬಿ

ಈ ಸಲ ಕಪ್ ನಮ್ದು : ಕುಮಾರಸ್ವಾಮಿ

“ಐಪಿಎಲ್​ ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಆರ್​ಸಿಬಿ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ” ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

“ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ವಿರಾಟ್​ ಕೋಹ್ಲಿ ಅವರನ್ನು ಅಭಿನಂದಿಸುತ್ತೇನೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದಾರೆ.

ಕನಸು ಕೊನೆಗೂ ನನಸಾಗಿದೆ: ಆರ್​ ಅಶೋಕ್​

18 ವರ್ಷಗಳ ಭರವಸೆ, ದುಃಖ ಮತ್ತು ಉತ್ಸಾಹ, ಕನಸು ಕೊನೆಗೂ ನನಸಾಗಿದೆ. ಆರ್​ಸಿಬಿಗೆ ಅಭಿನಂದನೆಗಳು. ಕೊನೆಗೂ ಚಾಂಪಿಯನ್ಸ್ ಎಂದು ಆರ್​ ಅಶೋಕ್​ ಟ್ವೀಟ್​ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು