AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಮಾರ್ಕೆಟಿಂಗ್ ಮುಖ್ಯಸ್ಥ ಬಂಧನ: ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಡಿಕೆಶಿ ವಿರುದ್ಧ ಗಂಭೀರ ಆರೋಪ

ಐಪಿಎಲ್ 18ನೇ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (ಆರ್‌ಸಿಬಿ) ಚಾಂಪಿಯನ್ ಆಗಿ ಹೊರ ಹೊಮ್ಮಿಸಿದ್ದು, ಇದೇ ಖುಷಿಯಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಆರ್‌ಸಿಬಿಯ ಮಾರ್ಕೆಟಿಂಗ್ ಮತ್ತು ಕಂದಾಯ ಮುಖ್ಯಸ್ಥರಾದ ನಿಖಿಲ್ ಸೋಸಲೆನ ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಅವರ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

RCB ಮಾರ್ಕೆಟಿಂಗ್ ಮುಖ್ಯಸ್ಥ ಬಂಧನ: ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಡಿಕೆಶಿ ವಿರುದ್ಧ ಗಂಭೀರ ಆರೋಪ
Nikhil Sosale
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on: Jun 06, 2025 | 2:41 PM

Share

ಬೆಂಗಳೂರು, (ಜೂನ್ 06): ರಾಯಲ್​ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆದೇಶದ ಮೇರೆಗೆ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಆರ್‌ಸಿಬಿ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿಯ ಮಾರ್ಕೆಟಿಂಗ್  ಮುಖ್ಯಸ್ಥರಾದ ನಿಖಿಲ್ ಸೋಸಲೆ (Nikhil Sosale) ಅವರನ್ನ ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ನಿಖಿಲ್ ಸೋಸಲೆ ಅವರ ಪತ್ನಿ ಮಾಳವಿಕಾ ನಾಯ್ಕ್ ಹೈಕೋರ್ಟ್​ ಗೆ ರಿಟ್​ ಅರ್ಜಿ ಸಲ್ಲಿಸಿದ್ದು, ಬಂಧನಕ್ಕೆ ತಡೆ ನೀಡುವಂತೆ ಅರ್ಜಿ ಮೂಲಕ ಹೈಕೋರ್ಟ್​ ಗೆ ಮನವಿ ಮಾಡಿದ್ದಾರೆ.

ಸಿಎಂ ಆದೇಶಾನುಸಾರ ತಮ್ಮ ಪತಿಯನ್ನ ಕಾನೂನುಬಾಹಿರವಾಗಿ ಬಂಧನ ಮಾಡಲಾಗಿದೆ ಎಂದು ನಿನ್ನೆಯ (ಜೂನ್ 05) ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಆಧಾರವಾಗಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ತನಿಖೆಯನ್ನೇ ನಡೆಸದೇ ಸಿಎಂ ಆದೇಶಾನುಸಾರ ಬಂಧಿಸಲಾಗಿದೆ. ಕಾನೂನು, ಸಂವಿಧಾನ ಕಡೆಗಣಿಸಿ ಬಂಧಿಸಲಾಗಿದ್ದು, ಈ ಮೂಲಕ ನಿಖಿಲ್ ಸೋಸಲೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಸಂಭ್ರಮಾಚರಣೆಗೆ ಕರೆ ಕೊಟ್ಟಿದ್ದೇ ಸರ್ಕಾರ, ಹೈಕೋರ್ಟ್​ಗೆ ಕೆಎಸ್​ಸಿಎ ರಿಟ್ ಅರ್ಜಿ

ಡಿಸಿಎಂ ವಿರುದ್ಧ ಗಂಭೀರ ಆರೋಪ

ಆನ್‌ಲೈನ್ ಮೂಲಕ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿತ್ತು. ಪಾಸ್ ಇದ್ದವರಿಗಷ್ಟೇ ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರವೇಶವಿತ್ತು. ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಖುದ್ದು ಡಿಸಿಎಂ ಸ್ವಾಗತಿಸಿದ್ದರು. ವಿಧಾನಸೌಧದಲ್ಲಿ ಸರ್ಕಾರ, ಸಿಎಂ, ಡಿಸಿಎಂ ಸನ್ಮಾನಿಸಿದ್ದರು. ನಂತರ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು. ಅವಘಡ ಮಾಹಿತಿ ತಿಳಿದ ತಕ್ಷಣ ಆರ್‌ಸಿಬಿಯಿಂದ ಕಾರ್ಯಕ್ರಮ ಸ್ಥಗಿತ ಮಾಡಲಾಗಿತ್ತು. ಹೀಗಾಗಿ ಯಾವುದೇ ಲೋಪವೆಸಗಿಲ್ಲ. ಹೀಗಾಗಿ ನಿಖಿಲ್ ಸೋಸಲೆ ಬಂಧನಕ್ಕೆ ತಡೆ ನೀಡುವಂತೆ ಪತ್ನಿ ಮಾಳವಿಕಾ ನಾಯ್ಕ್ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಕಾಲ್ತುಳಿತ: ಎಫ್ಐಆರ್​ನಲ್ಲಿ ಏನಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ
Image
ಬೆಂಗಳೂರು ಕಾಲ್ತುಳಿತ: ವಿಪಕ್ಷಗಳು ಎತ್ತಿದ ಸಾಲು ಪ್ರಶ್ನೆಗಳು ಇಲ್ಲಿವೆ
Image
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು

ವಿಮಾನ ನಿಲ್ದಾಣದಲ್ಲಿ ಬಂಧನ

ಸಿಎಂ ಸೂಚನೆ ಮೇರೆಗೆ ಕಬ್ಬನ್ ಪಾರ್ಕ್ ಪೊಲಿಸರು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾರ್ಕೆಟಿಂಗ್‌ ಹೆಡ್‌ ನಿಖಿಲ್‌ ಸೋಸಲೆ ಅವರನ್ನು ಇಂದು(ಜೂನ್ 06) ಬಂಧಿಸಿದ್ದರು.ಬೆಂಗಳೂರಿನ ವಿಮಾನ ನಿಲ್ದಾಣದಿಂದ, ಮುಂಬೈಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ನಿಖಿಲ್‌ ಸೋಸಲೆ ಅವರನ್ನು ಬಂಧಿಸಲಾಗಿತ್ತು.

ಯಾರು ಈ ನಿಖಿಲ್ ಸೋಸಲೆ?

ನಿಖಿಲ್ ಸೋಸಲೆ ಆರ್‌ಸಿಬಿಯ ಮಾರ್ಕೆಟಿಂಗ್ ಮತ್ತು ಕಂದಾಯ ಮುಖ್ಯಸ್ಥರಾಗಿದ್ದಾರೆ. ನಿಖಿಲ್ ಸೋಸಲೆ ಮೂಲತಃ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (ಯುಎಸ್‌ಎಲ್‌) ನಡೆಸುತ್ತಿರುವ ಡಯಾಜಿಯೊ ಇಂಡಿಯಾದ ಉದ್ಯೋಗಿಯಾಗಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುವ ಸೋಸಲೆ ಕಳೆದ 13 ವರ್ಷಗಳಿಂದ ಡಯಾಜಿಯೊದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆರ್‌ಸಿಬಿ ಫ್ರಾಂಚೈಸಿಯೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದಾರೆ.

ಹೈಕೋರ್ಟ್​ ಗೆ ಕೆಎಸ್​ ​ಸಿಎ ರಿಟ್ ಅರ್ಜಿ

ಇನ್ನೊಂದೆಡೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಸಹ ಹೈಕೋರ್ಟ್​ ಗೆ ರಿಟ್ ಅರ್ಜಿ ಸಲ್ಲಿಸಿದ್ದು,ಆರ್​ಸಿಬಿ (RCB) ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ರಿಟ್​ ಅರ್ಜಿಯಲ್ಲಿ ಸ್ಫೋಟಕ ಆರೋಪ ಮಾಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್​ಐಆರ್ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಕೆಎಸ್​​ಸಿಎ ಉಲ್ಲೇಖಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!