AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB IPL Victory Stampede: KSCA ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದುರಂತ ಸಂಭವಿಸಿದೆ: ಸಿಎಂ ಪರೋಕ್ಷ ಹೇಳಿಕೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 47 ಜನರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಗಳು ದುರಂತಕ್ಕೆ ಸಂತಾಪ ವ್ಯಕ್ತಪಡಿಸಿ, 10 ಲಕ್ಷ ರೂಪಾಯಿ ಪರಿಹಾರ ಮತ್ತು ಉಚಿತ ಚಿಕಿತ್ಸೆಯನ್ನು ಘೋಷಿಸಿದ್ದಾರೆ. ಮ್ಯಾಜಿಸ್ಟ್ರೇಟ್ ತನಿಖೆಯನ್ನು ಆದೇಶಿಸಲಾಗಿದೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

RCB IPL Victory Stampede: KSCA ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದುರಂತ ಸಂಭವಿಸಿದೆ: ಸಿಎಂ ಪರೋಕ್ಷ ಹೇಳಿಕೆ
ಸಿಎಂ ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on:Jun 04, 2025 | 10:30 PM

Share

ಬೆಂಗಳೂರು, ಜೂನ್​ 04: ಟಾಟಾ ಐಪಿಎಲ್​ ಚಾಂಪಿಯನ್ಸ್​ ಟ್ರೋಫಿ ಗೆದ್ದು, ಆರ್​ಸಿಬಿ (RCB) ತಂಡ ಬೆಂಗಳೂರಿಗೆ ಹಿಂದಿರುಗಿದೆ. ಈ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮ ಯಶಸ್ವಿಯಾಗಿದೆ. ಆದರೆ, ಕೆಎಸ್​ಸಿಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy stadium) ಆಯೋಜಿಸಿದ ಕಾರ್ಯಕ್ರಮದಿಂದ ಕಾಲ್ತುಳಿತ ಸಂಭವಿಸಿ ಜನ ಮೃತಪಟ್ಟಿದ್ದಾರೆ ಎಂದು ಹೇಳುವ ಮೂಲಕ ಈ ಘಟನೆಯಲ್ಲಿ ಸರ್ಕಾರದ ತಪ್ಪಿಲ್ಲ ಎಂದು ಹೇಳಿದರು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಕೆಎಸ್​​ಸಿಎಯನ್ನು ದೂರಿಲ್ಲ. ಇಷ್ಟು ಜನ ಏಕಾಏಕಿ ಸೇರಿದಾಗ ಎಲ್ಲ ಕಡೆ ಕಾಲ್ತುಳಿತ (Stampede) ಸಂಭವಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. 47 ಜನ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುವುದು. ಮತ್ತು ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಮ್ಯಾಜಿಸ್ಟೀರಿಯಲ್ ಮೂಲಕ ಪ್ರಕರಣದ ತನಿಖೆ ಮಾಡಿಸುತ್ತೇವೆ. 15 ದಿನದ ಒಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕಾಲ್ತುಳಿತ ದುರಂತ ಸಂಭವಿಸಬಾರದಿತ್ತು, ಆದರೆ ಆಗೋಗಿದೆ ದುರಂತಕ್ಕೆ ನಾವು ಮರುಗುತ್ತೇವೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾವು ಕಾರ್ಯಕ್ರಮ ಆಯೋಜಿಸಿರಲಿಲ್ಲ. ನಾವು ಪೊಲೀಸ್ ಭದ್ರತೆ ಒದಗಿಸುವುದು ಸರ್ಕಾರ ಕೆಲಸವಾಗಿರುತ್ತೆ. ಕ್ರೀಡಾಂಗಣದಲ್ಲಿ ಎಷ್ಟು ಆಸನಗಳಿರುತ್ತವೋ, , ಅಷ್ಟೇ ಟಿಕೆಟ್ ಕೊಡುತ್ತಾರೆ. ಕಾಲ್ತುಳಿತ ದುರಂತದ ಬಗ್ಗೆ ಮಾಜಿಸ್ಟೀರಿಯಲ್ ತನಿಖೆ ಮಾಡಿಸುತ್ತೇವೆ. ಪೊಲೀಸರ ತಪ್ಪಾ ಅಥವಾ ಕೆಎಸ್​ಸಿಎ ಅವರ ತಪ್ಪಾ ಗೊತ್ತಾಗುತ್ತೆ. ವರದಿ ಬಂದ ನಂತರ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ
Image
ಬೆಂಗಳೂರಲ್ಲಿ ಕಾಲ್ತುಳಿತ; ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣವೆಂದ ಬಿಜೆಪಿ
Image
ಐಪಿಎಲ್ ಸಂಭ್ರಮದಲ್ಲಿ ಸೂತಕ; ಯಡವಟ್ಟಾಗಿದ್ದೆಲ್ಲಿ, ಹೊಣೆ ಯಾರು?
Image
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Image
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ

ಇದನ್ನೂ ಓದಿ: ಆರ್​ಸಿಬಿ ವಿಜಯ ಸಂಭ್ರಮಾಚರಣೆ ವೇಳೆ ಸಂಭವಿಸಿದ ಘೋರ ದುರಂತಕ್ಕೆ ಕಾರಣವೇನು? ಇಲ್ಲಿದೆ ಟೈಮ್​ ಲೈನ್

ಮಂಗಳವಾರ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ವಿಧಾನಸೌಧದ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು.  ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಆದರೂ ಸರ್ಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ ಎಂದರು.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು. ಕ್ರಿಕೆಟ್ ಅಸೋಸಿಯೇಷನ್ ನಡೆಸುವ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸುವ ಕೆಲಸ ಸರ್ಕಾರ ಮಾಡುತ್ತದೆಯಷ್ಟೇ ಎಂದು ಹೇಳಿದ್ದಾರೆ.

ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು, ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ. ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Wed, 4 June 25