
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ KS ಈಶ್ವರಪ್ಪಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಮಾಹಿತಿಯನ್ನು ಖುದ್ದು ಸಚಿವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ನನಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಕೊರೊನಾ ಸೋಂಕು ದೃಢವಾಗಿರುವ ಬಗ್ಗೆ ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
— K S Eshwarappa (@ikseshwarappa) September 1, 2020