Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ಸಿದ್ದರಾಮಯ್ಯ

ಸಂವಿಧಾನ ಬದಲಾವಣೆ ಆಗಬಾರದೆಂದು ಹೋರಾಟ ಮಾಡುತ್ತಿದ್ದೇವೆ. ಸಂವಿಧಾನದಲ್ಲಿ 106 ತಿದ್ದುಪಡಿಗಳಾಗಿವೆ. ಸಂವಿಧಾನ ಜಾರಿಗೆ ಬಂದು ಮುಂದಿನ ವರ್ಷ ಜನವರಿಗೆ 75 ವರ್ಷ ತುಂಬಲಿದೆ. ದೀರ್ಘಕಾಲದ ಶಾಂತಿಯಲ್ಲಿರುವ ಸಂವಿಧಾನ ಎಂದರೆ ಅದು ಭಾರತದ ಸಂವಿಧಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
Anil Kalkere
| Updated By: ವಿವೇಕ ಬಿರಾದಾರ

Updated on: Nov 26, 2024 | 1:28 PM

ಬೆಂಗಳೂರು, ನವೆಂಬರ್​ 26: ಸಂವಿಧಾನ (Indian Constitution) ಅಂಗೀಕಾರವಾಗಿ ಇಂದಿಗೆ 50 ವರ್ಷ ಆಯ್ತು. ಈ ದಿನವನ್ನು ನಾವು ಸಂವಿಧಾನ ದಿನ ಎಂದು ಆಚರಣೆ ಮಾಡುತ್ತಿದ್ದೇವೆ. ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ಸಂವಿಧಾನದಡಿಯಲ್ಲೇ ನಡೆಯಬೇಕು. ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Sidaramaiah) ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ ಅರ್ಥವಾಗಬೇಕು. ಶಾಲೆಗಳಲ್ಲೇ ಸಂವಿಧಾನ ಪೀಠಿಕೆ ಓದಿಸುತ್ತಿದ್ದೇವೆ ಎಂದರು.

ಸಂವಿಧಾನ ಬದಲಾವಣೆ ಆಗಬಾರದೆಂದು ಹೋರಾಟ ಮಾಡುತ್ತಿದ್ದೇವೆ. ಸಂವಿಧಾನದಲ್ಲಿ 106 ತಿದ್ದುಪಡಿಗಳಾಗಿವೆ. ಸಂವಿಧಾನ ಜಾರಿಗೆ ಬಂದು ಮುಂದಿನ ವರ್ಷ ಜನವರಿಗೆ 75 ವರ್ಷ ತುಂಬಲಿದೆ. ದೀರ್ಘಕಾಲದ ಶಾಂತಿಯಲ್ಲಿರುವ ಸಂವಿಧಾನ ಎಂದರೆ ಅದು ಭಾರತದ ಸಂವಿಧಾನ. ಸಂವಿಧಾನ ಎಷ್ಟೇ ಚೆನ್ನಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇದ್ದರೆ ಒಳ್ಳೆಯದಾಗುತ್ತದೆ. ಕೆಟ್ಟವರ ಕೈಯಲ್ಲಿ ‌ಇದ್ದರೆ ಕೆಟ್ಟದಾಗುತ್ತೆ ಅಂತ ಬಿಆರ್​ ಅಂಬೇಡ್ಕರ್​ ಅವರು ಹೇಳಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Constitution Day of India 2024 : ಇಂದು ಭಾರತದ ಸಂವಿಧಾನ ದಿನ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ನುಡಿಮುತ್ತುಗಳಿವು

ಅಸಮಾನತೆ ಹೋಗಲಾಡಿಸದೆ ಹೋದರೆ ಸ್ವಾತಂತ್ರ್ಯ ಸಿಕ್ಕಿದ್ದು ಸಾರ್ಥಕವಾಗಲ್ಲ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ‌ ಸಾಮಾಜಿಕ ಸ್ವಾತಂತ್ರ್ಯ ಕೊಡುವ ಕೆಲಸ ಆಗಬೇಕು. ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಬ್ರಾತೃತ್ವ ಬಗ್ಗೆ ಅಂಬೇಡ್ಕರ್ ಸ್ಪಷ್ಟವಾಗಿ ಹೇಳಿದ್ದಾರೆ. ಪ್ರತಿಯೊಬ್ಬರಿಗೂ ನ್ಯಾಯ ಸಿಗಬೇಕು, ಸಮಾನತೆ ಸಿಗಬೇಕು. ಸಾಮಾಜಿಕ ವ್ಯವಸ್ಥೆಯ ಸಮಾಜ ಕಟ್ಟಬೇಕು ಎಂದರು ಆಶಯ ವ್ಯಕ್ತಪಡಿಸಿದರು.

ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳಿದ್ದರು. ವೀರ್​ ಸಾವರ್ಕರ್, ಆರ್​ಎಸ್​ಎಸ್​ನ ಸರ ಸಂಘಚಾಲಕರಾಗಿದ್ದ ಎಂ ಎಸ್​ ಗೋಲ್ವಾಲ್ಕರ್ ವಿರೋಧ ಮಾಡಿದ್ದರು. ಜಗತ್ತಿನ ಅನೇಕ ರಾಷ್ಟ್ರಗಳ ಸಂವಿಧಾನದ ಅಭ್ಯಾಸ, ಅನುಭವದ ಆಧಾರದ ಮೇಲೆ ಸಂವಿಧಾನ ರಚನೆ ಮಾಡಲಾಗಿದೆ. ಇದು ಲಿಖಿತ ಸಂವಿಧಾನ. ಇದಕ್ಕಿಂತ ಮೊದಲು ಅಲಿಖಿತ ಸಂವಿಧಾನ ಇತ್ತು. ಒಬ್ಬರನ್ನು ಇಬ್ಬರು ದ್ವೇಷಿಸುವ ರೀತಿ ಇತ್ತು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ