AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್‌ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆ

ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ ನಡುವೆ ಹುಟ್ಟಿಕೊಂಡಿದ್ದ ವೈಷಮ್ಯ ಇದೀಗ ಓರ್ವನ ಕಿಡ್ನಾಪ್ ಆ್ಯಂಡ್​ ಮರ್ಡರ್ ನಲ್ಲಿ ಅಂತ್ಯವಾಗಿದೆ. ಆನೇಕಲ್​​ನಲ್ಲಿ ಅಪಹರಣವಾಗಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಶವ ತಮಿಳುನಾಡಿನಲ್ಲಿ ಪತ್ತೆಯಾಗಿದೆ.

ಆನೇಕಲ್‌ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆ
Gopal
ರಾಮು, ಆನೇಕಲ್​
| Edited By: |

Updated on: Mar 09, 2026 | 9:54 PM

Share

ಬೆಂಗಳೂರು, (ಮಾರ್ಚ್ 09): ಆನೇಕಲ್‌ನಲ್ಲಿ (Anekal)  ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೌದು..ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್‌ ಅವರು ನಿನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್‌ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ಕಾರಿಗೆ ದುರ್ಷ್ಕಮಿಗಳು ವಾಹನದಿಂದ ಅಪಘಾತವೆಂಬಂತೆ ಡಿಕ್ಕಿ ಹೊಡೆದಿದ್ದಾರೆ. ನಂತರ ಗೋಪಾಲ್‌ ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಬಳಿಕ ತಮಿಳುನಾಡಿಗೆ (Tamil Nadu) ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ನಿನ್ನೆ (ಮಾರ್ಚ್ 08) ಸ್ನೇಹಿತನಿಗೆ ಹೆಣ್ಣು ನೋಡುವ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸಾಗ್ತಿದ್ದ ಗೋಪಾಲ್​​ ಕಾರಿಗೆ ಇನ್ನೊಂದು ಕಾರು ಡಿಕ್ಕಿಯಾಗಿತ್ತು. ಈ ವೇಳೆ ಕಾರಿನಿಂದ ಇಳಿಯುತ್ತಿದ್ದಂತೆ ಗೋಪಿ ಹಾಗೂ ಸ್ನೇಹಿತ ಅತೀಶ್​ಗೆ ಪೆಪ್ಪರ್​ಸ್ಪ್ರೇ ಹೊಡೆದ ಕಿರಾತಕರ ಗ್ಯಾಂಗ್​ ಗೋಪಿಯನ್ನು ಕಿಡ್ನ್ಯಾಪ್​ ಮಾಡಿ ಎಸ್ಕೇಪ್​ ಆಗಿತ್ತು.

ಇದನ್ನೂ ಓದಿ: ಸ್ಕೂಟರ್ ನೀಡಲು ನಿರಾಕರಿಸಿದ್ದಕ್ಕೆ ಗೆಳತಿ ಮತ್ತು ಆಕೆಯ ಪೋಷಕರ ಮೇಲೆ ಬೆಂಕಿ ಹಚ್ಚಿದ ಬೆಂಗಳೂರಿನ ವ್ಯಕ್ತಿ

ಇನ್ನು ಘಟನೇ ನಡೀತಿದ್ದಂತೆ ಗೋಪಾಲ್​ ಜೊತೆಗಿದ್ದ ಸ್ನೇಹಿತ ಸತೀಶ್​ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಕುಟುಂಬಸ್ಥರೂ ಕೂಡಾ ಹೊನ್ನಕಳಶಾಪುರದ ಮೋಹನ್ ಬಾಬು ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದರು. ಆದ್ರೆ ಇಂದು (ಮಾರ್ಚ್ 09) ತಮಿಳುನಾಡಿನ ಡೆಂಕಣೀಕೋಟೆ ಬಳಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಗೋಪಿ ಶವ ಪತ್ತೆಯಾಗಿದೆ. ರೊಚ್ಚಿಗೆದ್ದ ಕುಟುಂಬಸ್ಥರು ಆನೇಕಲ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಮಾತ್ರವಲ್ಲದೆ ,ಆರೋಪಿ ಮೋಹನ್ ಬಾಬು ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಅಂದಹಾಗೆ ಮೃತ ಗೋಪಾಲ್​ ಹಾಗೂ ಆರೋಪಿ ಮೋಹನ್​ ಬಾಬು ಮೊದಲು ಜೊತೆಯಾಗಿ ರಿಯಲ್​ ಎಸ್ಟೇಟ್​ ವ್ಯವಹಾರ ಮಾಡುತ್ತಿದ್ದರು. 10 ವರ್ಷದ ಹಿಂದೆ ಗೋಪಾಲ್​ ಸ್ವಾತಿ ಎಂಬ ಯುವತಿಯನ್ನ ಮದುವೆಯಾಗಿದ್ದ. ಆದ್ರೆ ಮೋಹನ್​ಗೂ ಆಕೆ ಮೇಲೆ ಮೋಹವಿತ್ತಂತೆ. ಇದು ಇಬ್ಬರ ಮಧ್ಯೆ ದ್ವೇಷಕ್ಕೆ ಕಾರಣವಾಗಿದೆ. ಜೊತೆಗೆ ವ್ಯವಹಾರದಲ್ಲೂ ಏಳಿಗೆ ಸಹಿಸದ ಮೋಹನ್​, 2 ವರ್ಷದ ಹಿಂದೆಯೂ ಗೋಪಿಯನ್ನ ಕಿಡ್ನ್ಯಾಪ್​ ​ ಮಾಡಿ ಹಲ್ಲೆ ಮಾಡಿದ್ನಂತೆ. ಆದ್ರೆ , ಮಾರ್ಚ್ 08 ಮಾತ್ರ 25 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಮೋಹನ್​ ಬಾಬು ಆತನ ಜೀವವನ್ನೇ ತೆಗೆದಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ