AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಬಂದ ಭೂ ಉದ್ಯಮಿಗಳು ಇಬ್ಬರ ಮೇಲೆ ಗುಂಡು ಹಾರಿಸಿ ಪರಾರಿ!

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ವ್ಯವಹಾರದ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡು ಹಾರಿಸಿರೋ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಬಿಜೆಪಿ ಮುಖಂಡ ಸಂಬಂಧಿ ಕಲ್ಯಾಣ್ ಕುಮಾರ್ ಹಾಗೂ ಖಾಸಗಿ ಶಾಲೆಯ ಉಪನ್ಯಾಸಕ ಸುಮಂತ್ ಎಂಬುವರಿಗೆ ಗುಂಡೇಟು ಬಿದ್ದಿದೆ. ಬೆಂಗಳೂರಿನಿಂದ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ವ್ಯವಹಾರದ ವೇಳೆ ಮಾತಿನ ಚಕಮಕಿ ನಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ. ಗುಂಡೇಟು ಬಿದ್ದ ಇಬ್ಬರನ್ನೂ ಚಿಕ್ಕಮಗಳೂರಿನ […]

ಬೆಂಗಳೂರಿಂದ ಬಂದ ಭೂ ಉದ್ಯಮಿಗಳು ಇಬ್ಬರ ಮೇಲೆ ಗುಂಡು ಹಾರಿಸಿ ಪರಾರಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:May 28, 2020 | 2:49 PM

Share

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ವ್ಯವಹಾರದ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡು ಹಾರಿಸಿರೋ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಬಿಜೆಪಿ ಮುಖಂಡ ಸಂಬಂಧಿ ಕಲ್ಯಾಣ್ ಕುಮಾರ್ ಹಾಗೂ ಖಾಸಗಿ ಶಾಲೆಯ ಉಪನ್ಯಾಸಕ ಸುಮಂತ್ ಎಂಬುವರಿಗೆ ಗುಂಡೇಟು ಬಿದ್ದಿದೆ. ಬೆಂಗಳೂರಿನಿಂದ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ವ್ಯವಹಾರದ ವೇಳೆ ಮಾತಿನ ಚಕಮಕಿ ನಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ.

ಗುಂಡೇಟು ಬಿದ್ದ ಇಬ್ಬರನ್ನೂ ಚಿಕ್ಕಮಗಳೂರಿನ ಕೆ.ಆರ್.ಎಸ್. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಬೆಂಗಳೂರಿಗೆ ರವಾನಿಸಲಾಗಿದೆ. ಇಬ್ಬರ ಮೇಲೆ ಫೈರಿಂಗ್ ಮಾಡಿದ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿಗಳು ನಾಪತ್ತೆಯಾಗಿದ್ದಾರೆ.

ಗುಂಡೇಟು ತಿಂದ ಕಲ್ಯಾಣ್ ಕುಮಾರ್ ಹಾಗೂ ಸುಮಂತ್ ಎಂಬುವರ ದೇಹದಲ್ಲಿ ಗುಂಡುಗಳು ಹಾಗೇ ಇದ್ದು ಅವುಗಳನ್ನ ತೆಗೆಯಲು ಇಬ್ಬರನ್ನೂ ಬೆಂಗಳೂರಿಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಖರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿರೋ ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ರಿಯಲ್ ಎಸ್ಟೇಟ್ ವಿಷಯವಾಗಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪೊಲೀಸರ ತನಿಖೆಯ ಬಳಿಕ ಘಟನೆ ಸ್ಪಷ್ಟವಾದ ಕಾರಣ ತಿಳಿಯಲಿದೆ.

Published On - 10:55 am, Thu, 28 May 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ