ಕರ್ನಾಟಕದಲ್ಲಿ ಬಂಡಾಯದ ಬೇಗುದಿ; ಬಿಜೆಪಿಗೆ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೂ ತಟ್ಟಿದ ಬಂಡಾಯದ ಬಿಸಿ ತುಪ್ಪ

ಲೋಕಸಭೆ ಚುನಾವಣೆ ಏಪ್ರಿಲ್ 19 ರಿಂದ ಆರಂಭಗೊಳ್ಳಲಿದ್ದು, ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಆರಂಭದಲ್ಲಿ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿತ್ತು. ಇದೀಗ, ಕಾಂಗ್ರೆಸ್ ಪಕ್ಷಕ್ಕೂ ಬಂಡಾಯದ ಬಿಸಿ ತುಪ್ಪ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ ಕಸರತ್ತು ಮುಂದುವರಿದಿದೆ.

ಕರ್ನಾಟಕದಲ್ಲಿ ಬಂಡಾಯದ ಬೇಗುದಿ; ಬಿಜೆಪಿಗೆ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೂ ತಟ್ಟಿದ ಬಂಡಾಯದ ಬಿಸಿ ತುಪ್ಪ
ಕರ್ನಾಟಕದಲ್ಲಿ ಬಂಡಾಯದ ಬೇಗುದಿ; ಬಿಜೆಪಿಗೆ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೂ ತಟ್ಟಿದ ಬಂಡಾಯದ ಬಿಸಿ ತುಪ್ಪ
Follow us
Rakesh Nayak Manchi
|

Updated on: Mar 21, 2024 | 7:38 AM

ಬೆಂಗಳೂರು, ಮಾ.21: ಲೋಕಸಭೆ ಚುನಾವಣೆ (Lok Sabha Election 2024) ಘೋಷಣೆ ಆಗುತ್ತಿದ್ದಂತೆ ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಯಾವಾಗ ಎರಡನೇ ಪಟ್ಟಿ ಬಿಡುಗಡೆಯಾಯ್ತೋ ಅಂದಿನಿಂದ ಬಿಜೆಪಿಯಲ್ಲಿ (BJP) ಬಂಡಾಯ ಸ್ಫೋಟಗೊಂಡಿತು. ಇದೀಗ, ಕಾಂಗ್ರೆಸ್ (Congress) ಪಕ್ಷಕ್ಕೂ ಬಂಡಾಯದ ಬಿಸಿ ತುಪ್ಪ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ ಕಸರತ್ತು ಮುಂದುವರಿದಿದೆ.

ಬಂಡಾಯ ಸರ್ಧೆಗೆ ಸಜ್ಜಾದ ಸಂಗಣ್ಣ ಕರಡಿ

ಮೂರನೇ ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕೊಪ್ಪಳದ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಬಿಜೆಪಿ ಟಿಕೆಟ್ ಮಿಸ್ ಆಗಿದ್ದು, ತೀವ್ರ ಅಸಮಾಧಾನಗೊಂಡಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುವಂತೆ ಬೆಂಬಲಿಗರ ಆಗ್ರಹಿಸುತ್ತಿದ್ದು, ಇಂದು ಮಹತ್ವದ ಸಭೆಯನ್ನು ಕರೆದಿದ್ದಾರೆ. ಸಭೆ ಬಳಿಕ ತಮ್ಮ ಮುಂದಿನ ನಡೆಯನ್ನು ಘೋಷಿಸಲಿದ್ದಾರೆ. ಅದಾಗ್ಯೂ, ಸಂಗಣ್ಣ ಅವರನ್ನು ಮನವೊಲಿಸುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸೋಮಣ್ಣ ಪರ ಪ್ರಚಾರ ಮಾಡಲ್ಲ ಎಂದ ಮಾಧುಸ್ವಾಮಿ

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗದೇ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ, ಬಿಎಸ್ ಯಡಿಯೂರಪ್ಪ ಮತ್ತು ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿರುವ ಮಾಧುಸ್ವಾಮಿ, ಪಕ್ಷದಲ್ಲಿನ ನನ್ನ ಅಸಮಾಧಾನ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಮೇಲೂ ಪರಿಣಾಮ ಬೀರುವ​ ಸಾಧ್ಯತೆ ಇದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸಲಾರೆ. ಬಿಜೆಪಿಯವರು ಕರೆದರೂ ಚುನಾವಣೆಗೆ ನಿಲ್ಲುವುದಿಲ್ಲ. ಯಾರೋ ನೋಡಿ ಬಂದ ಹೆಣ್ಣನ್ನು ನಾನು ಮದುವೆ ಆಗಲ್ಲ ಎಂದು ಖಡಕ್ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಕುಟುಂಬಕ್ಕೆ ಸೆಡ್ಡು ಹೊಡೆದಿರುವಂತಿದೆ ಹಿರಿಯ ನಾಯಕ ಈಶ್ವರಪ್ಪ ಧೋರಣೆ!

ತುಮಕೂರಿನಲ್ಲಿ ಬೆಳೆದವನಾಗಿ ಹೊರಗಿನವರಿಗೆ ಟಿಕೆಟ್ ಕೊಡುವುದಕ್ಕೆ ನನ್ನ ಒಪ್ಪಿಗೆ ಇಲ್ಲ. ನನಗೆ ಕೊಡಬೇಕು ಅಂತಲ್ಲ, ಜಿಲ್ಲೆಯ ಯಾರಿಗೆ ಕೊಟ್ಟರೂ ತೊಂದರೆ ಇರಲಿಲ್ಲ. ಬಿಜೆಪಿ ಅಭ್ಯರ್ಥಿ ಸೋಮಣ್ಣ ಮೇಲೆ ನನಗೆ ಯಾವುದೇ ಬೇಜಾರಿಲ್ಲ. ಅವರು ರಾಜ್ಯಸಭೆಗೆ ಹೋಗುತ್ತಾರೆ ಎಂದಾಗ ನಾನು ಸಂತೋಷಪಟ್ಟಿದ್ದೆ. ಆದರೆ, ಅವರು ಜಾತಿ ಇದೆ ಎಂಬ ಕಾರಣಕ್ಕೆ ಎಲ್ಲಾ ಕಡೆ ಹೋಗುತ್ತಿದ್ದರೆ ಸ್ಥಳೀಯರ ಸ್ಥಿತಿ ಏನು? ಹೊರಗಿನವರಿಗೆ ಪ್ರೋತ್ಸಾಹ ನೀಡುವ ಮನಸ್ಥಿತಿ ನನ್ನಲ್ಲಿಲ್ಲ ಎಂದರು.

ನನಗೆ ಅಸಮಾಧಾನ ಇರುವುದು ಯಡಿಯೂರಪ್ಪನವರ ಮೇಲೆ. ನೀವೆಲ್ಲ ಅದಕ್ಕೆ ಉತ್ತರ ಕೊಡಬೇಕಿಲ್ಲ. ಯಡಿಯೂರಪ್ಪನವರೇ ಉತ್ತರ ಕೊಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಗ್​ಗೆ ಹೇಳಿದ್ದಾಗಿ ತಿಳಿಸಿದ್ದಾರೆ. ಅದಾಗ್ಯೂ, ಮಾಧುಸ್ವಾಮಿ ಜೊತೆ ಮಾತಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ಕುಟುಂಬಕ್ಕೆ ಈಶ್ವರಪ್ಪ ಬಂಡಾಯದ ಬಿಸಿ

ವಿಧಾನಸಭೆ ಚುನಾವಣೆ ವೇಳೆಯಲ್ಲಿ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಟಿಕೆಟ್ ತ್ಯಾಗ ಮಾಡಿದ್ದ ಬಿಜೆಪಿಯ ಕಟ್ಟಾಳು ಕೆಎಸ್ ಈಶ್ವರಪ್ಪ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಮೂಲಕ ಯಡಿಯೂರಪ್ಪ ಅವರು ಅನ್ಯಾಯ ಎಸಗಿದ್ದಾರೆ ಎಂದು ಸ್ವತಃ ಈಶ್ವರಪ್ಪ ಅವರೇ ಆರೋಪಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ತಾನು ಪಕ್ಷವನ್ನು ಯಡಿಯೂರಪ್ಪ ಕುಟುಂಬದಿಂದ ಮುಕ್ತಿಗೊಳಿಸುಲು ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

ಜಾಲತಾಣದಲ್ಲಿ ಗೋ ಬ್ಯಾಕ್ ಶೆಟ್ಟರ್​ ಅಭಿಯಾನ

ವಿಧಾನಸಭೆ ಚುಣಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿಯ ಕಟ್ಟಾಳು ಜಗದೀಶ್ ಶೆಟ್ಟರ್ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು ಮಾತ್ರವಲ್ಲದೆ, ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಂಡರು. ಬಳಿಕ ಎಂಎಲ್​ಸಿ ಆದರು. ಇದೀಗ ಲೋಕಸಭೆ ಚುಣಾವಣೆ ಸಮೀಪಿಸುತ್ತಿದ್ದಂತೆ ಶೆಟ್ಟರ್ ಅವರನ್ನು ಪಕ್ಷಕ್ಕೆ ವಾಪಸ್ ಕರೆತರಲಾಗಿದೆಯಾದರೂ ಶೆಟ್ಟರ್ ಮಾತ್ರ ಅತಂತ್ರರಾಗಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ರಾಜ್ಯಾಧ್ಯಕ್ಷ ಪಟ್ಟ ಕಳೆದುಕೊತ್ತಾರೆ ಎಂಬ ಈಶ್ವರಪ್ಪ ಹೇಳಿಕೆಗೆ ವಿಜಯೇಂದ್ರ ಟಾಂಗ್​

ಧಾರವಾಡ, ಹಾವೇರಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಶೆಟ್ಟರ್​ಗೆ ಆರಂಭದಲ್ಲೇ ನಿರಾಸೆಯಾಗಿತ್ತು. ಬಳಿಕ ಹೈಕಮಾಂಡ್ ಬೆಳಗಾವಿ ಟಿಕೆಟ್ ನೀಡುವ ಭರವಸೆ ನೀಡಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಶೆಟ್ಟರ್ ಬದಲಿಗೆ ಸ್ಥಳೀಯರಿಗೆ ಟಿಕೆಟ್ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಈ ವಿಚಾರವಾಗಿ ರಾಜನಾಯಕರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಒಂದು ವೇಳೆ ಇದು ಫಲ ಕೊಡದಿದ್ದರೆ, ದೆಹಲಿಗೆ ತೆರಳಿ ಹೈಕಮಾಂಡ್ ಅನ್ನು ಕೂಡ ಭೇಟಿಯಾಗುವ ಬಗ್ಗೆ ಸ್ಥಳೀಯ ನಾಯಕರು ಚಿಂತನೆ ನಡೆಸಿದ್ದಾರೆ. ಈ ನಡುವೆ ಶೆಟ್ಟರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಶೆಟ್ಟರ್ ಅಭಿಯಾನ ನಡೆಸುತ್ತಿದ್ದಾರೆ.

ಬಂಡಾಯದ ಬೇಗುದಿ ಮಧ್ಯೆ ಇನ್ನೈದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲು ಬಿಜೆಪಿ ನಾಯಕರು ಹರಸಾಹಸಪಡ್ತಿದೆ. ರಾಜ್ಯ ನಾಯಕರೊಂದಿಗೆ ಅಮಿತ್ ಶಾ, ನಡ್ಡಾ ಅಭ್ಯರ್ಥಿ ಆಯ್ಕೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ದೆಹಲಿಯಲ್ಲಿ ಸಭೆ ಬಗ್ಗೆ ಮಾಹಿತಿ ನೀಡಿದ ಬಿಎಸ್​ವೈ ಮಾ.22 ರಂದು ಅಧಿಕೃತವಾಗಿ ಅಭ್ಯರ್ಥಿಗಳ ಘೋಷಣೆಯಾಗುತ್ತೆ ಎನ್ನಲಾಗುತ್ತಿದೆ.

ಕಾಂಗ್ರೆಸ್​ಗೂ ತಟ್ಟಿದ ಬಂಡಾಯದ ಬಿಸಿ ತುಪ್ಪ

ಕಾಂಗ್ರೆಸ್​ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ರಿಲೀಸ್​ಗೆ ಕ್ಷಣಗಣನೆ ಶುರುವಾಗಿದೆ. ಈ ನಡುವೆ, ಪಕ್ಷಕ್ಕೆ ಬಂಡಾಯದ ಬಿಸಿ ತುಪ್ಪ ತಟ್ಟಿದೆ. ಬಾಗಲಕೋಟೆಯಿಂದ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್​ಗೆ ಕಾಂಗ್ರೆಸ್ ಟಿಕೆಟ್​ ಪಕ್ಕಾ ಎನ್ನುವ ವದಂತಿ ಬಯಲಾಗುತ್ತಿದ್ದಂತೆ ವೀಣಾ ಕಾಶಪ್ಪನವರ್ ಮತ್ತು ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ.

ಬಾಗಲಕೋಟೆಯ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಹಾಕಿದ ವೀಣಾ ಕಾಶಪ್ಪನವರ್ ಬೆಂಬಲಿಗರು, ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಗೋ ಬ್ಯಾಕ್ ಸಂಯುಕ್ತಾ ಪಾಟೀಲ್​ ಘೋಷಣೆ ಕೂಗಿದ್ದರು. ಪ್ರತಿಭಟನಕಾರರನ್ನ ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಅದಾಗ್ಯೂ, ದೆಹಲಿಯಲ್ಲಿ ವೀಣಾ ಕಾಶಪ್ಪನವರ್ ಟಿಕೆಟ್​ಗಾಗಿ ಕಸರತ್ತು ಮಾಡುತ್ತಿದ್ದಾರೆ. ಇದೇ ವೇಳೆ ಟಿಕೆಟ್ ಮಿಸ್​ ಆಗಿದೆ ಎನ್ನುವ ವಿಚಾರಕ್ಕೆ ಮಾತನಾಡುವ ವೇಳೆ ವೀಣಾ ಅವರು ಕಣ್ಣೀರು ಹಾಕಿದ ಘಟನೆಯೂ ನಡೆದಿದೆ. ಪತ್ನಿ ಪರ ಮಾತಾಡುತ್ತಾ ತಮ್ಮದೇ ನಾಯಕರ ವಿರುದ್ಧ ಕಿಡಿಕಾರಿದ ವಿಜಯಾನಂದ ಕಾಶಪ್ಪನವರ್, ‘ಏನೇನು ಅನಾಹುತ ಆಗುತ್ತೋ ಆಗಲಿದೆ ಎಂದು ಗರಂ ಆಗಿ ಹೇಳಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಆಯ್ತು ಇದೀಗ ಜಗದೀಶ್​ ಶೆಟ್ಟರ್​ಗೆ ಗೋಬ್ಯಾಕ್ ಬಿಸಿ

ಅತ್ತ ಬಾಗಲಕೋಟೆಯಲ್ಲಿ ಬೆಂಬಲಿಗರ ಆರ್ಭಟವಿದ್ರೆ, ಇತ್ತ ದೆಹಲಿ ಅಂಗಳದಲ್ಲಿ ಟಿಕೆಟ್‌ ಖಾತ್ರಿಯಾಗದೆ ವೀಣಾ ಕಾಶಪ್ಪನವರ್‌ ಕಣ್ಣೀರು ಹಾಕಿದರು. Flow ಪತಿ, ಹುನಗುಂದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್‌ ಸಹ ಕಿಡಿಕಾರಿದರು.

ಕೋಲಾರ ಲೋಕಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಟಿಕೆಟ್​ಗಾಗಿ ಹಗ್ಗಜಗ್ಗಾಟ ನಡೆಯುತ್ತಿದೆ. ಅಳಿಯನಿಗೆ ಟಿಕೆಟ್ ಕೊಡಿಸಲು ಕೆ.ಹೆಚ್​. ಮುನಿಯಪ್ಪ ಅವರು ಯತ್ನಿಸುತ್ತಿದ್ದಾರೆ. ಮಾಜಿ ಸಚಿವ ರಮೇಶ್ ಕುಮಾರ್, ಸಚಿವ ಸುಧಾಕರ್, ಕೋಲಾರ ಶಾಸಕ ಕೊತ್ತನೂರು ಮಂಜುನಾಥ್ ಸೇರಿ ಹಲವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ಕೋಲಾರ ಟಿಕೆಟ್ ಬಗ್ಗೆ ಸಮಾಲೋಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ