ಬಿಜೆಪಿಯತ್ತ ದಾಪುಗಾಲು, ನಾಳೆಯೇ ಕಮಲ ಕೈಹಿಡಿಯಲು ಸಿದ್ಧತೆ ಜೋರು

|

Updated on: Nov 13, 2019 | 2:54 PM

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರ ತೀರ್ಪು ಇಂದು ಪ್ರಕಟವಾಗಿದೆ. 17 ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ನಾಳೆ 17 ಅನರ್ಹರು ಶಾಸಕರು ಬಿಜೆಪಿಗೆ: ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಅನರ್ಹ ಶಾಸಕರು ಬಿಜೆಪಿಗೆ ಸೇರಲು ಮುಂದಾಗಿದ್ದಾರೆ. ನಾಳೆ ಸಂಜೆಯೊಳಗೆ ಸದಸ್ಯತ್ವ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ನಾಳೆ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಅಥವಾ ಸಿಎಂ ನಿವಾಸದಲ್ಲಿ ಬೆಂಬಲಿಗರ ಜೊತೆ ಸೇರಿ ಅನರ್ಹ ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂದು ಮೂಲಗಳು […]

ಬಿಜೆಪಿಯತ್ತ ದಾಪುಗಾಲು, ನಾಳೆಯೇ ಕಮಲ ಕೈಹಿಡಿಯಲು ಸಿದ್ಧತೆ ಜೋರು
Follow us on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರ ತೀರ್ಪು ಇಂದು ಪ್ರಕಟವಾಗಿದೆ. 17 ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.

ನಾಳೆ 17 ಅನರ್ಹರು ಶಾಸಕರು ಬಿಜೆಪಿಗೆ:
ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಅನರ್ಹ ಶಾಸಕರು ಬಿಜೆಪಿಗೆ ಸೇರಲು ಮುಂದಾಗಿದ್ದಾರೆ. ನಾಳೆ ಸಂಜೆಯೊಳಗೆ ಸದಸ್ಯತ್ವ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ನಾಳೆ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಅಥವಾ ಸಿಎಂ ನಿವಾಸದಲ್ಲಿ ಬೆಂಬಲಿಗರ ಜೊತೆ ಸೇರಿ ಅನರ್ಹ ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿ.ಎಲ್. ಸಂತೋಷ್ ಕರ್ನಾಟಕದ ಏಕೈಕ ಸದಸ್ಯರಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಅನರ್ಹ ಶಾಸಕರು ಸಂತೋಷ್ ಅವರನ್ನ ಭೇಟಿ ಮಾಡಿದ್ದಾರೆ.

Published On - 2:47 pm, Wed, 13 November 19