ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಎರಡು ತಿಂಗಳ ಒಳಗಾಗಿ 702 ಸಿಬ್ಬಂದಿಗಳ ನೇಮಕ: ಹಾಲಪ್ಪ ಆಚಾರ್
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಮುಂದಿನ ಎರಡು ತಿಂಗಳೊಳಗೆ 702 ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ಭರವಸೆ ನೀಡಿದರು.
ಧಾರವಾಡ: ಹುಬ್ಬಳ್ಳಿ ಕಿಮ್ಸ್ (Hubli Kim’s) ಆಸ್ಪತ್ರೆಗೆ ಮುಂದಿನ ಎರಡು ತಿಂಗಳೊಳಗೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ (Halappa Achar) ಅವರು ಭರವಸೆ ನೀಡಿದರು. ವಿವಿಧ ಇಲಾಖೆಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಲು ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಿಮ್ಸ್‌ಗೆ 702 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆ ಮೂಲಕ ಎರಡು ತಿಂಗಳಲ್ಲಿ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳ ಕೊರತೆ ನೀಗಿಸಲಾಗುವುದು ಎಂದರು.
ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ; ಕೂದಲೆಳೆ ಅಂತರದಲ್ಲಿ ಸವಾರ ಬಚಾವ್, ಅಧಿಕಾರಿಗಳ ವಿರುದ್ಧ ಆಕ್ರೋಶ
ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ಮಾತನಾಡಿದ ಉಸ್ತುವಾರಿ ಸಚಿವರು, ಸ್ಮಾರ್ಟ್ಸಿಟಿ ಯೋಜನೆಯ ಒಟ್ಟು 63 ಕಾಮಗಾರಿಗಳ ಪೈಕಿ 19 ಕಾಮಗಾರಿಗಳು ಮಾತ್ರ ಬಾಕಿ ಉಳಿದಿವೆ. ಈ ಕಾಮಗಾರಿಗಳನ್ನು ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು. ಮಳೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲೆಯಲ್ಲಿ ಮೇ, ಏಪ್ರಿಲ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿದೆ. ಆದರೆ ಜೂನ್ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಈ ನಡುವೆ ಶೇ.80ರಷ್ಟು ಬಿತ್ತನೆಯಾಗಿದೆ ಎಂದು ತಿಳಿಸಿದರು.
ನೂತನ ಕಚೇರಿಗೆ ನಡೆದುಕೊಂಡೇ ಬಂದ ಹಾಲಪ್ಪ ಆಚಾರ್
ವಾರ್ತಾ ಇಲಾಖೆ ಆವರಣದಲ್ಲಿ ನಿರ್ಮಿಸಿದ ನೂತನ ಕಚೇರಿಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ನಡೆದುಕೊಂಡೇ ಹೋದರು. ಮೊದಲು ಜಿಲ್ಲಾಧಿಕಾರಿಗಳ ಕಚೇರಿಗೆ ಕಾರಿನಲ್ಲಿ ಹೋಗಿದ್ದ ಹಾಲಪ್ಪ ಆಚಾರ್, ಕಾರು ಇದ್ದರೂ ಡಿಸಿ ಕಚೇರಿಯಿಂದ ನಡೆದುಕೊಂಡೇ ನೂತನ ಕಚೇರಿಗೆ ಹೋದರು.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ