AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜುಕೊಳ ನಿರ್ಮಾಣದಲ್ಲಿ ಅಕ್ರಮ ಎಸಗಿಲ್ಲ ಎಂದ ಸಿಂಧೂರಿ; ಒಂದೇ ದಿನದಲ್ಲಿ 2 ವರದಿ ಮಂಡಿಸಿದ ಪ್ರಾದೇಶಿಕ ಆಯುಕ್ತ ಪ್ರಕಾಶ್

Swimming Pool: ಪ್ರಾದೇಶಿಕ ಆಯುಕ್ತ ಪ್ರಕಾಶ್​ ಅವರು ಅಧಿಕೃತವಾಗಿ ಒಂದು ವರದಿ ಸಲ್ಲಿಸಲು ಮುಂದಾದರು.  ಆದರೆ ಅವರು ಒಂದು ವರದಿ ಸಲ್ಲಿಸುವ ಬದಲು ಒಂದೇ ದಿನದಲ್ಲಿ ಎರಡು ವರದಿಗಳನ್ನು ಸಲ್ಲಿಸಿದ್ದಾರೆ ಎಂಬ ಮಾತು ಕೇಳಿಬಂದಿದೆ. ಮತ್ತು ಅದೇ ಈಗ ವಿವಾದಕ್ಕೆ ಕಾರಣವೂ ಆಗಿದೆ.  

ಈಜುಕೊಳ ನಿರ್ಮಾಣದಲ್ಲಿ ಅಕ್ರಮ ಎಸಗಿಲ್ಲ ಎಂದ ಸಿಂಧೂರಿ; ಒಂದೇ ದಿನದಲ್ಲಿ 2 ವರದಿ ಮಂಡಿಸಿದ ಪ್ರಾದೇಶಿಕ ಆಯುಕ್ತ ಪ್ರಕಾಶ್
ಈಜುಕೊಳ ನಿರ್ಮಾಣದಲ್ಲಿ ಅಕ್ರಮ ಎಸಗಿಲ್ಲ ಎಂದ ಸಿಂಧೂರಿ; ಒಂದೇ ದಿನದಲ್ಲಿ 2 ವರದಿ ಮಂಡಿಸಿದ ಪ್ರಾದೇಶಿಕ ಆಯುಕ್ತ? ಈಜುಕೊಳದ ಒಳಸುಳಿ ಏನು?
TV9 Web
| Updated By: ಸಾಧು ಶ್ರೀನಾಥ್​|

Updated on:Jun 23, 2021 | 10:43 AM

Share

ಮೈಸೂರು: ಜಿಲ್ಲಾಧಿಕಾರಿಯಾಗಿ ಮೈಸೂರನ್ನು ತೊರೆಯುವ ಮುನ್ನ ತಮ್ಮಮಮೇಲೆ ಬಂದಿದ್ದ ಈಜುಕೊಳ ನಿರ್ಮಾಣ ವಿಚಾರವಾಗಿ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಾನೇನೂ ಅಕ್ರಮ ಎಸಗಿಲ್ಲ. ಎಲ್ಲಾ ಕಾನೂನುಬದ್ಧವಾಗಿದೆ. ಪಾರಂಪರಿಕವಾಗಿಯೂ ಯಾವುದೇ ಧಕ್ಕೆಯೊದಗಿಲ್ಲ ಎಂದು ಪ್ರಮಾಣೀಕರಿಸಿ, ತೆರಳಿದ್ದರು.  ಅದಾದ ಮೇಲೆ ಪ್ರಾದೇಶಿಕ ಆಯುಕ್ತ ಪ್ರಕಾಶ್​ ಅವರು ಅಧಿಕೃತವಾಗಿ ಒಂದು ವರದಿ ಸಲ್ಲಿಸಲು ಮುಂದಾದರು.  ಆದರೆ ಅವರು ಒಂದು ವರದಿ ಸಲ್ಲಿಸುವ ಬದಲು ಒಂದೇ ದಿನದಲ್ಲಿ ಎರಡು ವರದಿಗಳನ್ನು ಸಲ್ಲಿಸಿದ್ದಾರೆ ಎಂಬ ಮಾತು ಕೇಳಿಬಂದಿದೆ. ಮತ್ತು ಅದೇ ಈಗ ವಿವಾದಕ್ಕೆ ಕಾರಣವೂ ಆಗಿದೆ.  

ಈಜುಕೊಳ ನಿರ್ಮಾಣದಲ್ಲಿ ಅಕ್ರಮ ಎಸಗಿಲ್ಲ ಎಂದ ಸಿಂಧೂರಿ; ಒಂದೇ ದಿನದಲ್ಲಿ 2 ವರದಿ ಮಂಡಿಸಿದ ಪ್ರಾದೇಶಿಕ ಆಯುಕ್ತ? ಈಜುಕೊಳದ ಒಳಸುಳಿ ಏನು ಎಂಬುದರ ಬೆನ್ನು ಹತ್ತಿದಾಗ…

ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಸರಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣದ ತನಿಖೆ ವಿಚಾರದಲ್ಲಿ ಒಂದೇ ದಿನದಲ್ಲಿ ಎರಡು ತನಿಖಾ ವರದಿ ಸಲ್ಲಿಸಲಾಗಿದೆ. ಮೊದಲ ವರದಿಯಲ್ಲಿ ಒಟ್ಟು ಆರು ನ್ಯೂನತೆಗಳನ್ನು ನಮೂದಿಸಲಾಗಿದೆ. ಪ್ರಮುಖವಾಗಿ ಈಜು ಕೊಳದ ನಿರ್ಮಾಣಕ್ಕೆ ತಯಾರಾಗಿದ್ದ 32 ಲಕ್ಷ ರೂ ಅಂದಾಜುಪಟ್ಟಿಗೆ ಲೋಕೋಪಯೋಗಿ ಇಲಾಖೆ ಅನುಮೋದನೆ ಪಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ. ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳಿಲ್ಲ ಎಂದೂ ನಮೂದಾಗಿದೆ.

ಇನ್ನು, ಎರಡನೆಯ ತನಿಖಾ ವರದಿಯಲ್ಲಿ ಪ್ರಾದೇಶಿಕ ಆಯುಕ್ತರು ಪ್ರಮುಖವಾದ ಈ ಎರಡು ಅಂಶ ದಿಢೀರ್ ಕೈ ಬಿಟ್ಟಿದ್ದಾರೆ.  ಪ್ರಾದೇಶಿಕ ಆಯುಕ್ತರು ಕೊಟ್ಟ ಮೊದಲ ವರದಿಯಲ್ಲಿ ಈಜುಕೊಳ ನಿರ್ಮಾಣದಲ್ಲಿ ಆಗಿರೋ ಆರ್ಥಿಕ ವಿಚಾರ ಗೌಪ್ಯವಾಗಿರೋದೆ ಪ್ರಮುಖ ಲೋಪ ಎಂದು ನಮೂದು ಆದರೆ, ಇದೇ ಅಂಶವನ್ನೇ ಕೈಬಿಟ್ಟು ದಿಢೀರ್ ಎರಡನೇ ಎಡಿಟೆಡ್ ವರದಿಯನ್ನು ಪ್ರಾದೇಶಿಕ ಆಯುಕ್ತರು ಮಂಡಿಸಿದ್ದಾರೆ. ಹಾಗಾಗಿ ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಬಗ್ಗೆಯೆ ಈಗ  ಅನುಮಾನ ಸೃಷ್ಟಿಯಾಗಿದೆ.

regional commissioner gc prakash submits 2 reports on mysuru dc rohini sindhuri swimming pool construction

ಈಜುಕೊಳ ನಿರ್ಮಾಣದಲ್ಲಿ ಅಕ್ರಮ ಎಸಗಿಲ್ಲ ಎಂದ ಸಿಂಧೂರಿ; ಒಂದೇ ದಿನದಲ್ಲಿ 2 ವರದಿ ಮಂಡಿಸಿದ ಪ್ರಾದೇಶಿಕ ಆಯುಕ್ತ ಪ್ರಕಾಶ್

regional commissioner gc prakash submits 2 reports on mysuru dc rohini sindhuri swimming pool construction 1

ಈಜುಕೊಳ ನಿರ್ಮಾಣದಲ್ಲಿ ಅಕ್ರಮ ಎಸಗಿಲ್ಲ ಎಂದ ಸಿಂಧೂರಿ; ಒಂದೇ ದಿನದಲ್ಲಿ 2 ವರದಿ ಮಂಡಿಸಿದ ಪ್ರಾದೇಶಿಕ ಆಯುಕ್ತ ಪ್ರಕಾಶ್

(regional commissioner gc prakash submits 2 reports on mysuru dc rohini sindhuri swimming pool construction )

Rohini Sindhuri: ಮೈಸೂರು ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ವಿಚಾರ, ಸಂಪೂರ್ಣ ವಿವರಣೆ ನೀಡಿದ ರೋಹಿಣಿ ಸಿಂಧೂರಿ

Published On - 10:13 am, Wed, 23 June 21

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ