ರಿಜಿಸ್ಟರ್ ಮದುವೆ ಮತ್ತಷ್ಟು ಸಲೀಸು: ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ಸಂಪುಟ ಅಸ್ತು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದೆ. ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಎಚ್​ಕೆ ಪಾಟೀಲ್​, 35 ವಿಷಯಗಳನ್ನು ಕ್ಯಾಬಿನೆಟ್​ನಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು. 104 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 26 ಕೋಟಿ ರೂ. ಅನುಮೋದನೆ ನೀಡಲಾಗಿದೆ.

ರಿಜಿಸ್ಟರ್ ಮದುವೆ ಮತ್ತಷ್ಟು ಸಲೀಸು: ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ಸಂಪುಟ ಅಸ್ತು
ಸಚಿವ ಹೆಚ್.ಕೆ.ಪಾಟೀಲ್
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Feb 01, 2024 | 3:52 PM

ಬೆಂಗಳೂರು, ಫೆಬ್ರುವರಿ 1: ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದೆ. 35 ವಿಷಯಗಳನ್ನು ಕ್ಯಾಬಿನೆಟ್​ನಲ್ಲಿ ಚರ್ಚಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಎಚ್​ಕೆ ಪಾಟೀಲ್​, ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದಿಸಿದೆ. ನೋಂದಣಿ ವಿವಾಹ ಸರಳೀಕರಣಕ್ಕೆ ರಾಜ್ಯ ಸರ್ಕಾರದ ಸಮ್ಮತಿ ನೀಡಿದ್ದು, ಹಿಂದೂ ವಿವಾಹ ನೊಂದಣಿ ಕಾಯ್ದೆ 2024ಕ್ಕೆ ಒಪ್ಪಿಗೆ ಸೂಚಿಸಿದೆ. ಕಚೇರಿಗಳಲ್ಲಿ ಮೊದಲು ವಿವಾಹ ನೊಂದಣಿ ಆಗುತ್ತಿದ್ದವು. ಈಗ ಆನ್ಲೈನ್ ಮೂಲಕ ನೊಂದಣಿಗೆ ಅವಕಾಶವಿದೆ. ಗ್ರಾಮ 1, ಕಾವೇರಿ 2, ಬಾಪೂಜಿ ಸೇವಾಕೇಂದ್ರಗಳಲ್ಲಿ ನೊಂದಣಿ ಮಾಡಬಹುದು. ಇನ್ಮೇಲೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯುವಂತಿಲ್ಲ ಎಂದು ಹೇಳಿದ್ದಾರೆ.

ರಾಯಚೂರು ವಿವಿ ಆವರಣದಲ್ಲಿ ಮಾನವ ಜಿನೋಮ್ ಸಂಸ್ಥೆ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 104 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 26 ಕೋಟಿ ರೂ. ಅನುಮೋದನೆ ಮತ್ತು ಅಸ್ತಿತ್ವದಲ್ಲಿರುವ 82 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೂ ಸಂಪುಟ ಒಪ್ಪಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

34 ಆಧುನಿಕ ಅನಿಲ ವಿದ್ಯುತ್ ಚಿತಾಗಾರ

10 ಮಹಾನಗರ ಪಾಲಿಕೆಗಳಲ್ಲಿ, 24 ನಗರಸಭೆ ವ್ಯಾಪ್ತಿಯಲ್ಲಿ 34 ಆಧುನಿಕ ಅನಿಲ ವಿದ್ಯುತ್ ಚಿತಾಗಾರ ಸ್ಥಾಪನೆಗೆ 36 ಕೋಟಿ ರೂ.ಗೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಮೊತ್ತ 142 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ.

ಇದನ್ನೂ ಓದಿ: ಹಾವೇರಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ, ನಾನು ಗ್ಯಾರಂಟಿ ಕೊಡ್ತೇನೆ-ಬಸವರಾಜ್​ ಬೊಮ್ಮಾಯಿ

ಜಲ ಸಂಪನ್ಮೂಲ ಇಲಾಖೆಯ ಅಡಿ ಬೆಳಗಾವಿಯ ಹುಚ್ಚಗಾಂವ್, ಬಸ್ತವಾಡಿಯ 20 ಕೆರೆಗಳ ತುಂಬಿಸುವ 250 ಕೋಟಿ ರೂ. ವೆಚ್ಚದ ಯೋಜನೆ ಮತ್ತು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ 61 ಕೆರೆ ತುಂಬಿಸುವ ಯೋಜನೆ 519 ಕೋಟಿ ರೂ. ಅಂದಾಜಿಗೆ ಅನುಮೋದಿಸಲಾಗಿದೆ. ಘಟಪ್ರಭಾ ನದಿಯಿಂದ ನೀರು ಪೂರೈಕೆ ಮಾಡಲಾಗುವುದು.

ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 158 ಕೋಟಿ ರೂ.

ರಾಯಚೂರು ತಾಲೂಕಿನ ಚಿಕ್ಕ ಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರ ನದಿಗೆ ಅಡ್ಡಲಾಗಿ ಮಂತ್ರಾಲಯದ ಬಳಿ ಆಂಧ್ರದ ಅನುಮತಿ ಪಡೆದು ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 158 ಕೋಟಿ ರೂ. ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: ಆದಿಲ್ ಶಾಹಿಗಳ ಕಾಲದ ಹತ್ತಾರು ಬಾವಿಗಳು ಹೂಳು ತುಂಬಿ ಹಾಳಾಗಿ ಹೋಗಿವೆ, ಪುನ:ಶ್ಚೇತನಕ್ಕೆ ಸಚಿವ ಎಂ ಬಿ ಪಾಟೀಲ್ ಸೂಚನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣೆಗೆ ಶೈತ್ಯಾಗಾರ ನಿರ್ಮಾಣಕ್ಕೆ, ಮಾಜಿ ಎಂಎಲ್ಸಿ ಸಿಎಂ ನಿಂಗಪ್ಪಗೆ ಹಂಚಿಕೆಯಾದ ಜಿ ಕ್ಯಾಟಗರಿ ನಿವೇಶನ ಮಾರಾಟಕ್ಕೆ, ಪೊಲೀಸ್ ಇಲಾಖೆಯ ಪ್ರಧಾನ ಕಚೇರಿ ಸೇರಿದಂತೆ ಇತರ ಘಟಕಗಳಲ್ಲಿ ವಾಹನಗಳಿಗೆ ಪೆಟ್ರೋ ಕಾರ್ಡ್ ಮೂಲಕ ಇಂಧನ ಮತ್ತು ತೈಲವನ್ನು ಮೂರು ವರ್ಷಗಳ ಅವಧಿಗೆ 120 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಖರೀದಿಸಲು ಅನುಮತಿ ನೀಡಿದೆ.

ಚಿಕ್ಕಮಗಳೂರು ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಹೊಸ ವೈದ್ಯಕೀಯ ಕಾಲೇಜು ಹಾಸ್ಟೆಲ್ ಬೋಧಕ ಬೋಧಕೇತರ ಸಿಬ್ಬಂದಿ ವಸತಿ ನಿಲಯ, ಎಲ್ಲ ಕಟ್ಟಡ ಕಾಮಗಾರಿಗಳ ನಿರ್ಮಾಣಕ್ಕೆ 455 ಕೋಟಿ ರೂ. ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:49 pm, Thu, 1 February 24

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್