AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಬೆಂಬಲಿಗರು

ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರು ಸಿಟಿ ರವಿ ಮುತ್ತಿಗೆ ಹಾಕಿ ಕಾರಿನಿಂದ ಹೊರಗೆ ಎಳೆಯಲು ಯತ್ನಿಸಿದ್ದಾರೆ. ಅಲ್ಲದೇ ಸುವರ್ಣಸೌಧದ ಮೊಗಸಾಲೆಯಲ್ಲಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ ನಡೆದಿದ್ದು, ಕೂಡಲೇ ಪೊಲೀಸರು, ಮಾರ್ಷಲ್​ಗಳು ರಕ್ಷಣೆ ಮಾಡಿದ್ದಾರೆ.

ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಬೆಂಬಲಿಗರು
ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ
ರಮೇಶ್ ಬಿ. ಜವಳಗೇರಾ
|

Updated on:Dec 19, 2024 | 5:43 PM

Share

ಬೆಳಗಾವಿ, (ಡಿಸೆಂಬರ್ 19): ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ವಿಧಾನಪರಿಷತ್​ನ ಕಾರಿಡಾರ್​ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ ಅಡ್ಡ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ನೂರಾರು ಬೆಂಬಲಿಗರು ಘೋಷಣೆ ಕೂಗಿ ಸಿಟಿ ರವಿ ಮೇಲೆ ಮುಗಿಬಿದ್ದಿದ್ದು, ಹಲ್ಲೆಗೆ ಯತ್ನ ನಡೆದಿದೆ ಎಂದು ತಿಳಿದುಬಂದಿದೆ. ಕೂಡಲೇ ಮಾರ್ಷಲ್​ಗಳು, ಕಾರಿಡಾರ್ ಗೇಟ್ ಬಂದ್ ಮಾಡಿದರು. ಹೀಗಾಗಿ ಸಿಟಿ ರವಿ ಅಪಾಯದಿಂದ ಪಾರಾಗಿದ್ದಾರೆ.

ಏಕವಚನದಲ್ಲೇ ಏನೋ ಸೂ….ಮಗನೇ…. ನಮ್ಮಕ್ಕನಿಗೆ ಹೀಗಂದ್ಯಾ ಎಂದು ಓರ್ವ ವ್ಯಕ್ತಿ ಒದೆಯುವ ರೀತಿಯಲ್ಲಿ ಕಾಲೆತ್ತಿದ್ದಾನೆ. ಆಗ ಏನೋ ಎಂದ ರವಿ ಪ್ರಶ್ನಿಸಿದ್ದಾರೆ. ಆಗ ಸಿಟಿ ರವಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.   ಏಯ್‌, ಆಚೆ ಬಾರೋ, ಧೈರ್ಯವಿದ್ದರೆ ಹೊರಗೆ ಬಾ ಎಂದು ಏಕವಚನದಲ್ಲೇ ಆವಾಜ್‌ ಹಾಕಿದ್ದಾರೆ. ಈ ವೇಳೆ ಒಂದಿಬ್ಬರು ಹಲ್ಲೆಗೂ ಯತ್ನಿಸಿದ ಪ್ರಸಂಗ ನಡೆಯಿತು. ಇದರಿಂದ ಹೆಬ್ಬಾಳ್ಕರ್‌ ಬೆಂಬಲಿಗರ ವಿರುದ್ಧ ಕೆಂಡಾಮಂಡಲರಾದ ಸಿ.ಟಿ ರವಿ ʻಬಾ.. ಬಾ.. ಹೊಡಿ ಬಾ.., ಅದೇನ್‌ ಮಾಡ್ತಾರೆ ಮಾಡ್ಲಿ ಬಿಡ್ರಿ ಎಂದಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಪದದಿಂದ ನಿಂದಿಸಿದ್ರಾ ಸಿಟಿ ರವಿ? ಅಷ್ಟಕ್ಕೂ ಆಗಿದ್ದೇನು?

ಇದರಿಂದ ದೊಡ್ಡ ಗಲಾಟೆ ಉಂಟಾಗಿದ್ದು, ಕೂಡಲೇ ಪೊಲೀಸರು ದೌಡಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರನ್ನು ಚದುರಿಸಿದರು. ಅಲ್ಲದೇ ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಗಲಾಟೆ ನಡೆಯುವ ಸ್ಥಳದಲ್ಲೇ ಹೆಬ್ಬಾಳ್ಕರ್​ ಸಹೋದರ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಕಾಣಿಸಿಕೊಂಡಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬೆಂಬಲಿಗರ ನಡೆಯಿಂದ ಆಕ್ರೋಶಗೊಂಡಿರುವ ಸಿಟಿ ರವಿ, ನನ್ನ ಮೇಲೆ ಅಟ್ಯಾಕ್​ ಮಾಡಲು ಯತ್ನಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರು ಕೊಲೆ ಬೆದರಿಕೆ ಹಾಕಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕೆಂದು ಧರಣಿ ಕುಳಿತುಕೊಂಡಿದ್ದಾರೆ.

ಸಿಟಿ ರವಿ ಆಕ್ರೋಶ

ನಾನು ಇದಕ್ಕೆಲ್ಲ ಹೆದರಿಕೊಂಡು ರಾಜಕಾರಣ ಮಾಡುವವನಲ್ಲ. ನಾನು ಏಕಾಂಗಿಯಾಗಿಯೇ ಎಲ್ಲವನ್ನೂ ಎದುರಿಸುತ್ತೇನೆ. ನನ್ನ ಕೊಲೆ ಮಾಡುವುದಕ್ಕೆ ಸಂಚು ರೂಪಿಸಿಕೊಂಡು ಬಂದಿದ್ದಾರೆ. ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ ಸಿಟಿ ರವಿ, ನಾನು ಆ ರೀತಿ ಪದಬಳಕೆ ಮಾಡಿದ್ದನ್ನ ತೋರಿಸಿ ಎಂದು ಸವಾಲು ಹಾಕಿದರು.

ಸುವರ್ಣಸೌಧದಲ್ಲೇ ಇಂತಹ ಸ್ಥಿತಿ ಇದೆ ಎಂದರೆ ಅರ್ಥಮಾಡಿಕೊಳ್ಳಿ. ಶಾಸಕನಿಗೆ ರಕ್ಷಣೆ ಇಲ್ಲ ಅಂದರೆ, ಜನಸಾಮಾನ್ಯರ ಸ್ಥಿತಿ ಹೇಗಿದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಬಾಣಂತಿಯರ ಸಾವು, ವಕ್ಫ್ ವಿಚಾರ ಡೈವರ್ಟ್ ಮಾಡಲು ಯತ್ನ. ಸರ್ಕಾರದ ಕುಮ್ಮಕ್ಕಿನಿಂದಲೇ ನಮ್ಮ ಮೇಲೆ ದಾಳಿ ನಡೆದಿದೆ ಎಂದು ಕಿಡಿಕಾರಿದರು.

 ಎಡಿಜಿಪಿ ಹಿತೇಂದ್ರಗೆ ಬಿಜೆಪಿ ನಾಯಕರ ತರಾಟೆ

ಇನ್ನು ಸಿಟಿ ರವಿ ಮೇಲಿನ ಹಲ್ಲೆ ಯತ್ನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಎಡಿಜಿಪಿ ಹಿತೇಂದ್ರಗೆ ತರಾಟೆಗೆ ತೆಗೆದುಕೊಂಡಿದ್ದು, ಭಾರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿಗರನ್ನ ಹೇಗೆ ಒಳ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರ ಆಕ್ರೋಶ ಕಂಡು DGP ಹಿತೇಂದ್ರ ಅವರು ತಲೆ ಅಲ್ಲಾಡಿಸುತ್ತಾ ಸುಮ್ಮನೆ ನಿಂತುಕೊಂಡರು.

ಹೆಚ್ಚುವರಿ ಪೊಲೀಸರ ನಿಯೋಜನೆ

ಈ ಗಲಾಟೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ, ಸುವರ್ಣ ಸೌಧದ ಮುಂಭಾಗದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮುಖ್ಯಧ್ವಾರದ ಬಳಿ ನೂರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರು ಬಂದೋಬಸ್ತ್ ವೀಕ್ಷಣೆ ಮಾಡಿದರು. ಈ ವೇಳೆ ಟಿವಿ9ಗೆ ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆಗೆ ಬಂದಿದ್ದರಿಂದ ಪೊಲೀಸ್ ಸಿಬ್ಬಂದಿಯನ್ನ ಸ್ಥಳಕ್ಕೆ ಕರೆಯಿಸಿಕೊಂಡಿದ್ದೇವೆ. ಸೌಧದ ಒಳಗೆ ಹೋರಾಟ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸುವರ್ಣಸೌಧಕ್ಕೆ ದಿಗ್ಬಂಧನ

ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ಬೆಂಬಲಿಗರು ಸುವರ್ಣಸೌಧದ ಕಾರಿಡಾರ್​ನಲ್ಲಿ ಸಿ.ವಿ.ರವಿ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಇದರಿಂದ ಭಾರೀ ಹೈಡ್ರಾಮಾಕ್ಕೆ ಸುವರ್ಣಸೌಧದಲ್ಲಿ ಸಾಕ್ಷಿಯಾಗಿದ್ದು , ಗಲಭೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಬಿಗಿ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಸುವರ್ಣಸೌಧದ ಎಲ್ಲ ಗೇಟ್​ಗಳನ್ನ ಬಂದ್ ಮಾಡಲಾಗಿದ್ದು ,ಎಲ್ಲಾ ಫ್ಲೋರ್​ಗೂ ಪೊಲೀಸ್​ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Thu, 19 December 24

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು