ಬೆಂಗಳೂರಿನಲ್ಲಿ ರೆಮ್​ಡಿಸಿವಿರ್ ಮತ್ತು ಆಕ್ಸಿಜನ್ ಕೊರತೆ: ಹೈಕೋರ್ಟ್​ಗೆ ‘ಫನಾ’ ಮಾಹಿತಿ

100 ರೆಮ್​ಡಿಸಿವಿರ್ ಕೇಳಿದರೆ 25 ಮಾತ್ರ ಪೂರೈಸ್ತಿದ್ದಾರೆ. ಸರ್ಕಾರದ ಬಳಿ ಸ್ಟಾಕ್ ಇದ್ದರೂ ರೆಮ್​ಡಿಸಿವಿರ್ ಒದಗಿಸುತ್ತಿಲ್ಲ. ಬೇಡಿಕೆಯ ಶೇಕಡಾ 50ರಷ್ಟು ಮಾತ್ರ ಆಕ್ಸಿಜನ್ ಲಭ್ಯವಿದೆ. ಬೆಲೆಯೂ ಮೂರ್ನಾಲ್ಕು ಪಟ್ಟು ಹೆಚ್ಚಳವಾಗಿದೆ ಎಂದು ಖಾಸಗಿ ಆಸ್ಪತ್ರೆಗಳು ಹೈಕೋರ್ಟ್​ಗೆ ತಿಳಿಸಿವೆ.

ಬೆಂಗಳೂರಿನಲ್ಲಿ ರೆಮ್​ಡಿಸಿವಿರ್ ಮತ್ತು ಆಕ್ಸಿಜನ್ ಕೊರತೆ: ಹೈಕೋರ್ಟ್​ಗೆ ‘ಫನಾ’ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 27, 2021 | 4:57 PM

ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಮತ್ತು ಆಕ್ಸಿಜನ್ ಕೊರತೆ ನಗರದಲ್ಲಿ ತೀವ್ರವಾಗಿದೆ ಎಂದು ಹೈಕೋರ್ಟ್​ಗೆ ಕರ್ನಾಟಕ ಖಾಸಗಿ ಆಸ್ಪತ್ರೆಗಳ ಸಂಘಟನೆ ‘ಫನಾ’ದ ಅಧ್ಯಕ್ಷ ಡಾ.ಎಚ್​.ಎಂ.ಪ್ರಸನ್ನ ಮಾಹಿತಿ ನೀಡಿದರು. 100 ರೆಮ್​ಡಿಸಿವಿರ್ ಕೇಳಿದರೆ 25 ಮಾತ್ರ ಪೂರೈಸ್ತಿದ್ದಾರೆ. ಹೀಗಾಗಿ ಗಂಭೀರ ಸಮಸ್ಯೆ ಇದ್ದವರಿಗೆ ಮಾತ್ರ ನೀಡಲಾಗುತ್ತಿದೆ. ಸರ್ಕಾರದ ಬಳಿ ಸ್ಟಾಕ್ ಇದ್ದರೂ ರೆಮ್​ಡಿಸಿವಿರ್ ಒದಗಿಸುತ್ತಿಲ್ಲ. ಬೇಡಿಕೆಯ ಶೇಕಡಾ 50ರಷ್ಟು ಮಾತ್ರ ಆಕ್ಸಿಜನ್ ಲಭ್ಯವಿದೆ. ಖಾಸಗಿ ಪೂರೈಕೆದಾರರಿಂದ ಆಕ್ಸಿಜನ್ ಖರೀದಿಸಲಾಗುತ್ತಿದೆ. ಹೀಗಾಗಿ ಬೆಲೆಯೂ ಮೂರ್ನಾಲ್ಕು ಪಟ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.

ಆಕ್ಸಿಜನ್ ಮತ್ತು ರೆಮ್‌ಡಿಸಿವಿರ್ ಕೊರತೆಯಿಂದ ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಆಕ್ಸಿಜನ್, ರೆಮ್‌ಡಿಸಿವಿರ್ ಲಭ್ಯತೆ ಬಗ್ಗೆ ನಿತ್ಯ ಪ್ರಕಟಿಸಬೇಕು. ಕೇಂದ್ರದಿಂದ ಹಂಚಿಕೆಯಾದ 802 ಮೆಟ್ರಿಕ್​ ಟನ್ ಆಕ್ಸಿಜನ್ ಒದಗಿಸಿ. ಇಲ್ಲವಾದರೆ ಏ.30ರ ವೇಳೆಗೆ 600 ಮೆಟ್ರಿಕ್​ ಟನ್ ಕೊರತೆ ಕಾಣಿಸಿಕೊಳ್ಳುತ್ತದೆ. ರಾಜ್ಯ ಸರ್ಕಾರ ರೆಮ್​ಡಿಸಿವರ್ ಪೂರೈಕೆ ಹೆಚ್ಚಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಮತ್ತು‌ ನ್ಯಾಯಮೂರ್ತಿ ಅರವಿಂದ್ ಕುಮಾರ್​ ಅವರಿದ್ದ ಪೀಠ ಸೂಚನೆ ನೀಡಿತು.

ಬೆಡ್​ ಸಂಖ್ಯೆ ಹೆಚ್ಚಿಸಲು ಹೈಕೋರ್ಟ್ ಸೂಚನೆ ಕರ್ನಾಟಕದಲ್ಲಿ ರಾಜ್ಯದಲ್ಲಿ ಕೊವಿಡ್ ಸೋಂಕಿತರಿಗೆ ಬೆಡ್ ಕೊರತೆ ವಿಚಾರದ ಬಗ್ಗೆ ಹೈಕೋರ್ಟ್​ ಮಂಗಳವಾರ ವಿಚಾರಣೆ ನಡೆಸಿತು. ಹೈಕೋರ್ಟ್ ಸೂಚನೆ ನಂತರ ಮೀಸಲಿಡುವ ಬೆಡ್​ಗಳ ಸಂಖ್ಯೆ ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತು. ಎಚ್​ಡಿಯು ಬೆಡ್‌ಗಳ ಸಂಖ್ಯೆ 3,490ಕ್ಕೆ, ವೆಂಟಿಲೇಟರ್ ಸಹಿತ ಐಸಿಯು 418ಕ್ಕೆ, ಐಸಿಯು ಸಂಖ್ಯೆ 497ಕ್ಕೆ ಏರಿಕೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿತು.

ಬೆಡ್‌ಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಬೇಕಿದೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ. ಇದು ಜೀವಿಸುವ ಹಕ್ಕಿಗೆ ಸಂಬಂಧಿಸಿದ ವಿಚಾರ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು. ಕಮಾಂಡ್ ಆಸ್ಪತ್ರೆಗಳಲ್ಲಿ ಬೆಡ್‌ಗಳು ಲಭ್ಯವಿದೆ. ಸಂಬಂಧಪಟ್ಟವರ ಜತೆ ಕೇಂದ್ರ, ರಾಜ್ಯ ಸರ್ಕಾರ ಚರ್ಚಿಸಿ, ನಾಗರಿಕರಿಗೆ ಬೆಡ್ ಒದಗಿಸಲು ಕ್ರಮಕೈಗೊಳ್ಳಬೇಕು. ರೆಮ್‌ಡಿಸಿವಿರ್, ಆಕ್ಸಿಜನ್ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕು. ಮಾಧ್ಯಮಗಳ‌‌ ಮೂಲಕ ಸಹಾಯವಾಣಿ ಪ್ರಚಾರಕ್ಕೆ ಕ್ರಮಕೈಗೊಳ್ಳಬೇಕು. ಏ.29ಕ್ಕೆ ಕೈಗೊಂಡ ಕ್ರಮಗಳ‌ ಮಾಹಿತಿ ನೀಡಲು ಹೈಕೋರ್ಟ್ ಸೂಚನೆ ನೀಡಿತು.

(Remdesivir Drug and Oxygen Scarcity in Bengaluru Karnataka High Court Informed)

ಇದನ್ನೂ ಓದಿ: ಕೊವಿಡ್ ಲಸಿಕೆ ನೀಡುವಾಗ ಅಂಗವಿಕಲರಿಗೆ ಆದ್ಯತೆ ನೀಡಿ: ಹೈಕೋರ್ಟ್​ ಸೂಚನೆ

ಇದನ್ನೂ ಓದಿ: ಕೊರೊನಾ ಲಾಕ್​ಡೌನ್ ವೇಳೆ ಓಡಾಡುವವರು ಆಧಾರ್​ ತೋರಿಸಬೇಕು, ಮಾಸ್ಕ್​ ಧರಿಸದವರು ಸೂಪರ್​ ಸ್ಪ್ರೆಡರ್ಸ್​: ಬಾಂಬೆ ಹೈಕೋರ್ಟ್​

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ