AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಹೊಸ್​ ಪ್ಲಾನ್​​: ಸ್ಕ್ರ್ಯಾಪ್​ ಹಂತಕ್ಕೆ ತಲುಪಿದ್ದ ಬಸ್​ಗಳಿಗೆ ಹೊಸ ಟಚ್​ ​ ​

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲ ವಿಭಾಗೀಯ ಡಿಪೋ ಮತ್ತು ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಹಳೆಯ ಬಸ್‌ಗಳನ್ನು ನವೀಕರಿಸಲು ಪ್ರಾರಂಭಿಸಿದೆ.

KSRTC ಹೊಸ್​ ಪ್ಲಾನ್​​: ಸ್ಕ್ರ್ಯಾಪ್​ ಹಂತಕ್ಕೆ ತಲುಪಿದ್ದ ಬಸ್​ಗಳಿಗೆ ಹೊಸ ಟಚ್​ ​ ​
ಕೆಎಸ್​ಆರ್​​ಟಿಸಿ ಬಸ್​
Follow us
ವಿವೇಕ ಬಿರಾದಾರ
|

Updated on:Jul 15, 2023 | 8:14 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ರಾಜ್ಯದ ಎಲ್ಲ ವಿಭಾಗೀಯ ಡಿಪೋ (Depot) ಮತ್ತು ಪ್ರಾದೇಶಿಕ ಕಾರ್ಯಾಗಾರಗಳಲ್ಲಿ (Workshops) ಹಳೆಯ ಬಸ್‌ಗಳನ್ನು ನವೀಕರಿಸಲು ಪ್ರಾರಂಭಿಸಿದೆ. ಹೌದು ಹೊಸ ಬಸ್​​ಗಳನ್ನು ಕೊಂಡುಕೊಳ್ಳಲು ಹೆಚ್ಚು ಹಣ ಬೇಕಾಗುತ್ತದೆ. ಆದರೆ ಕೊರೊನಾದಿಂದ ಕೆಎಸ್​ಆರ್​ಟಿಸಿಗೆ ಸಾಕಷ್ಟು ನಷ್ಟದಲ್ಲಿದ್ದು ಇದನ್ನು ಸರಿದೂಗಿಸಲು ಹಳೇ ಬಸ್​​ಗಳನ್ನೇ ರಿಪೇರಿ ಮಾಡಿ, ರಸ್ತೆಗೆ ಇಳಿಸಲು ಕೆಎಸ್​ಆರ್​ಟಿಸಿ ಮುಂದಾಗಿದೆ.

ಈ ಬಗ್ಗೆ ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ವಿ ಅನ್ಬುಕುಮಾರ್ ಮಾತನಾಡಿ ಹೊಸ ಬಸ್‌ಗಳನ್ನು ಖರೀದಿಸುವ ಬದಲು ಹಳೆಯ ಬಸ್‌ಗಳನ್ನು ನವೀಕರಿಸುವ ಕೆಲಸವನ್ನು ಪ್ರಾರಂಭಿಸಿದ್ದೇವೆ. ಹೊಸ ಬಸ್‌ಗೆ ಸುಮಾರು 40 ಲಕ್ಷ ರೂಪಾಯಿ ವೆಚ್ಚವಾಗಲಿದೆ. ಆದರೆ ಇದೀಗ ಬಹುತೇಕ ಸ್ಕ್ರ್ಯಾಪ್ ಆಗಿರುವ ಹಳೇ ಬಸ್‌ಗಳನ್ನೇ ನವೀಕರಿಸಿ ರಸ್ತೆಗೆ ಇಳಿಸಲು ನಿರ್ಧರಿಸಿದ್ದು, ಇದಕ್ಕೆ ಸುಮಾರು 3 ಲಕ್ಷ ರೂಪಾಯಿ ವೆಚ್ಚವಾಗಲಿದೆ ಎಂದು ತಿಳಿಸಿದರು.

ಕೆಎಸ್‌ಆರ್‌ಟಿಸಿಯ 8,100 ಬಸ್‌ಗಳು ತಲಾ 10 ಲಕ್ಷ ಕಿಮೀಕ್ಕಿಂತ ಹೆಚ್ಚು ಸಂಚರಿಸಿದ ನಂತರ ನಿಂತಿವೆ. ಹೀಗೆ ನಿಂತ ನಿಗಮದ ಸುಮಾರು 1,000 ಬಸ್‌ಗಳನ್ನು ನವಿಕರಿಸಲಾಗುತ್ತಿದ್ದು, ಕಳೆದ ಜುಲೈ-ಆಗಸ್ಟ್‌ನಲ್ಲಿ ಕೆಲಸವನ್ನು ಪ್ರಾರಂಭಿಸಲಾಗಿದೆ. ಅಂದಿನಿಂದ ಇಲ್ಲಿಯವರೆಗೆ 494 ಬಸ್‌ಗಳನ್ನು ಯಶಸ್ವಿಯಾಗಿ ನವೀಕರಿಸಲಾಗಿದೆ ಎಂದರು.

ಇದನ್ನೂ ಓದಿ: 5 ಲಕ್ಷ ರೂ. ಕದ್ದು ಓಡುತ್ತಿದ್ದ ಕಳ್ಳನನ್ನ ಚೇಸ್ ಮಾಡಿ ಹಿಡಿದ KSRTC ಬಸ್ ಚಾಲಕ, ಕಂಡಕ್ಟರ್​ ಕಾರ್ಯಕ್ಕೆ ಬೆಂಗಳೂರು ಕಮಿಷನರ್ ಶಹಬ್ಬಾಸ್‌

ನಾವು ತುಕ್ಕು ಹಿಡಿದ ಮತ್ತು ಹಾನಿಗೊಳಗಾದ ಎಲ್ಲಾ ಭಾಗಗಳನ್ನು ಹೊರ ತೆಗೆಯುತ್ತೇವೆ. ನಂತರ ಬಸ್​ ಬಾಡಿಯನ್ನು ಹೊಸದಾಗಿ ತಯಾರಿಸಿ ಅಳವಡಿಸುತ್ತೇವೆ. ಪ್ಯಾನೆಲಿಂಗ್ ಕೆಲಸ ಮುಗಿದಿದೆ, ಬಸ್‌ನ ಹೊರಭಾಗಕ್ಕೆ ಹೊಸ ಲೋಹದ ಹಾಳೆಗಳನ್ನು ಬಳಸಲಾಗುತ್ತದೆ. ಕಿಟಕಿಗಳು ಮತ್ತು ವಿಂಡ್‌ಶೀಲ್ಡ್‌ಗಳ ಮೇಲಿನ ಗ್ಲಾಸ್‌ಗಳನ್ನು ಬದಲಾಯಿಸಲಾಗುತ್ತದೆ. ಹೊಸ ಸೀಟ್ ಕುಶನ್‌ಗಳು ಮತ್ತು ಕವರ್​ಗಳನ್ನು ಹಾಕುತ್ತೇವೆ. ಎಂಜಿನ್ ಹದಗೆಟ್ಟಿದ್ದರೇ ನಮ್ಮ ಕಾರ್ಯಾಗಾರಗಳಲ್ಲಿಯೇ ನಮ್ಮ ಎಂಜಿನಿಯರ್‌ಗಳೇ ರಿಪೇರಿ ಮಾಡುತ್ತಾರೆ ಎಂದು ಕೆಎಸ್‌ಆರ್‌ಟಿಸಿಯ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರು ವಿವರಿಸಿದರು.

ಸುಮಾರು 15 ಡಿಪೋಗಳು ಮತ್ತು ಎರಡು ಪ್ರಾದೇಶಿಕ ಕಾರ್ಯಾಗಾರಗಳು ಈ ಕೆಲಸದಲ್ಲಿ ತೊಡಗಿವೆ. ನವೀಕರಣ ಕಾರ್ಯಕ್ರಮವು ಪ್ರಾರಂಭವಾದಾಗಿನಿಂದ ತಿಂಗಳಿಗೆ ಸುಮಾರು 50 ಬಸ್‌ಗಳು ನವೀಕರಣಗೊಂಡಿವೆ. 494 ಬಸ್‌ಗಳು ಪೂರ್ಣಗೊಂಡಿದ್ದು, ಇನ್ನೂ 500 ನವೀಕರಣಗೊಳ್ಳಬೇಕಾಗಿದೆ.

ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ, ಎಲ್ಲಾ ಸರ್ಕಾರಿ ವಾಹನಗಳು 15 ವರ್ಷಗಳವರೆಗೆ ಚಾಲನೆಯಲ್ಲಿರಬಹುದು. ನವೀಕರಣಕ್ಕಾಗಿ ನಾವು ಆಯ್ಕೆ ಮಾಡಿದ ಬಸ್‌ಗಳು ಸುಮಾರು 11-12 ವರ್ಷಗಳಷ್ಟು ಹಳೆಯವು, ಆದರೆ ಹೆಚ್ಚಿನ ಬಳಕೆಯಿಂದಾಗಿ ಸ್ಕ್ರ್ಯಾಪ್ ಆಗುವ ಅಂಚಿನಲ್ಲಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:13 pm, Sat, 15 July 23

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್