ಪ್ರತಾಪಗೌಡ ಪಾಟೀಲ್ ಮಾರಾಟವಾಗಿಲ್ಲ, ಸ್ವಾಭಿಮಾನಕ್ಕೆ ಧಕ್ಕೆಯಾಗಿ ಕಾಂಗ್ರೆಸ್ ತೊರೆದಿದ್ದಾರೆ: ರೇಣುಕಾಚಾರ್ಯ

ಸಿದ್ದರಾಮಯ್ಯನವರೆ ನಿಮ್ಮ ಆಪ್ತರೆ ಹೊರ ಬಂದಿದ್ದಾರೆ. ವಿಜಯೇಂದ್ರ ಸರ್ಕಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಅವರು ನಮ್ಮ ಪಕ್ಷದ ಉಪಾಧ್ಯಕ್ಷರು. ಅವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಮಸ್ಕಿಯಲ್ಲಿ ಹೇಳಿದರು.

ಪ್ರತಾಪಗೌಡ ಪಾಟೀಲ್ ಮಾರಾಟವಾಗಿಲ್ಲ, ಸ್ವಾಭಿಮಾನಕ್ಕೆ ಧಕ್ಕೆಯಾಗಿ ಕಾಂಗ್ರೆಸ್ ತೊರೆದಿದ್ದಾರೆ: ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ
Follow us
sandhya thejappa
|

Updated on:Apr 07, 2021 | 1:59 PM

ರಾಯಚೂರು: ಪ್ರತಾಪಗೌಡ ಪಾಟೀಲ್ ಮಾರಾಟವಾಗಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾಗಿ ಕಾಂಗ್ರೆಸ್ ತೊರೆದಿದ್ದಾರೆ ಎಂದು ಮಸ್ಕಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೆ ನಿಮ್ಮ ಆಪ್ತರೆ ಹೊರ ಬಂದಿದ್ದಾರೆ. ವಿಜಯೇಂದ್ರ ಸರ್ಕಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಅವರು ನಮ್ಮ ಪಕ್ಷದ ಉಪಾಧ್ಯಕ್ಷರು. ಅವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್​ನವರ ಭಾಷಣ ಜನರು ಒಪ್ಪುವುದಿಲ್ಲ ಎಂದು ಮಾತನಾಡಿದ ರೇಣುಕಾಚಾರ್ಯ ಮಸ್ಕಿ ಬಸವಕಲ್ಯಾಣದಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತವಾಗಿದೆ ಎಂದರು.

ಸಿದ್ದರಾಮಯ್ಯನವರು ಏನೇ ಅಪಪ್ರಚಾರ ಮಾಡಿದರೂ ಬಿಜೆಪಿ ಗೆಲ್ಲುತ್ತದೆ. ನೀರಾವರಿ ವಿಚಾರದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಮಾಡುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಅಕ್ರಮ ನೀರಾವರಿ ಮಾಡಿಕೊಂಡಿದ್ದಾರೆ. ರೈತರ ಮೇಲೆ ಕಾಂಗ್ರೆಸ್ ಅಭ್ಯರ್ಥಿ ದಬ್ಬಾಳಿಕೆ ಮಾಡುತ್ತಿದ್ದಾರೆ. ಬಡ್ಡಿ ವ್ಯವಹಾರ ಮಾಡುವುದು ಬಿಜೆಪಿಗೆ ಗೊತ್ತಿಲ್ಲ. ಉಗ್ರಪ್ಪನವರಿಗೆ ಬಿಜೆಪಿಗೆ ಬೈಯೊದೊಂದೆ ಕೆಲಸ. ಕಾಂಗ್ರೆಸ್ ರಾಜ್ಯ ಮತ್ತು ದೇಶದಲ್ಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದರು.

5A ಉಪ ಕಾಲುವೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು ಸಿದ್ದರಾಮಯ್ಯ ನೀಡುವುದೆಲ್ಲಾ ಸುಳ್ಳು ಭರವಸೆ. ಸಂಘ ಪರಿವಾರ ಕತ್ತರಿಸುವ ಕೆಲಸ ಮಾಡಲ್ಲ. ಜೋಡಣೆ ಮಾಡುತ್ತದೆ. ಸಿದ್ದರಾಮಯ್ಯಗೆ ಆರ್​ಎಸ್​ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಸಿದ್ದರಾಮಯ್ಯ ಆರ್​ಎಸ್​ಎಸ್​ ವಿರೋಧಿ. ಯತ್ನಾಳ್ ಬಗ್ಗೆ ಮಾತನಾಡಿದರೆ ನಾನು ಹುಚ್ಚ ಆಗುತ್ತೀನಿ ಎಂದು ರೇಣುಕಾಚಾರ್ಯ ಗರಂ ಆದರು. ಜೊತೆಗೆ ಕಾಂಗ್ರೆಸ್​ನಲ್ಲಿ ನಾಯಕತ್ವದ ಕೊರತೆ ಇದೆ ಎಂದು ಹೇಳಿದರು.

ಇದನ್ನೂ ಓದಿ

ಮುಷ್ಕರಕ್ಕೆ ಬೆಂಬಲ ನೀಡದೆ ಬಸ್ ಚಲಾಯಿಸಿದ ಚಾಲಕನ ವಿರುದ್ಧ ಸಹೋದ್ಯೋಗಿಗಳಿಂದ ಗಂಭೀರ ಆರೋಪ

ಮಂಗಳೂರು ಪೊಲೀಸರ ರಹಸ್ಯ ಕಾರ್ಯಚಾರಣೆ; ಬಯಲಾಯ್ತು ಕಾಮುಕರ ಕರ್ಮಕಾಂಡ

(Renukacharya says Pratap Gowda Patil quits Congress as a threat to self respect in Raichur)

Published On - 1:21 pm, Wed, 7 April 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್