ಎಸ್​ಪಿಪಿ ಬದಲಾವಣೆ ಇಲ್ಲ: ದರ್ಶನ್​ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಸ್ಯಾಂಡಲ್​​ವುಡ್​ ನಟ ದರ್ಶನ್​ ಪ್ರಕರಣದಲ್ಲಿ ಎಸ್​ಪಿಪಿ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಮೂಲಕ ದರ್ಶನ ಬಿಡುಗಡೆಗೊಳಿಸಲು ಕೆಲ ರಾಜಕಾರಣಿಗಳು ಕಸರತ್ತು ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ದರ್ಶನ ಪ್ರಕರಣದ ಬಗ್ಗೆ ಖಡಕ್ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಎಸ್​ಪಿಪಿ ಬದಲಾವಣೆ ಇಲ್ಲ: ದರ್ಶನ್​ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು
ಸಿದ್ದರಾಮಯ್ಯ
Follow us
|

Updated on:Jun 19, 2024 | 4:25 PM

ಬೆಂಗಳೂರು, (ಜೂನ್ 19): ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಖಡಕ್‌ ತನಿಖೆಯಿಂದ ಸಚಿವರೊಬ್ಬರು, ರಾಜಕಾರಣಿಗಳು ದರ್ಶನ್‌ ರಕ್ಷಣೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಈಗ ದರ್ಶನ್‌ ರಕ್ಷಣೆಗೆ ಮತ್ತೆ ತೆರೆಮರೆಯ ಕಸರತ್ತು ನಡೆಯುತ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಹೌದು…ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್‌ (SPP prasanna kumar) ಅವರು ಖಡಕ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಅವರನ್ನು ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಬೆನ್ನಲ್ಲೇ ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ( Siddaramaiah) ಪ್ರತಿಕ್ರಿಯಿಸಿದ್ದು, SPP ಪ್ರಸನ್ನಕುಮಾರ್‌ ಬದಲಾವಣೆಯ ಪ್ರಸ್ತಾಪವೇ ಆಗಿಲ್ಲ. ಈ ಬಗ್ಗೆ ನನಗೇನು ಗೊತ್ತಿಲ್ಲ. ದರ್ಶನ್​ ಪ್ರಕರಣದಲ್ಲಿ ಯಾವುದೇ ಸಚಿವರು ಒತ್ತಡ ಹಾಕಿಲ್ಲ. ಯಾರೇ ಒತ್ತಡ ಹಾಕಿದರೂ ನಾನು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಅಂತೆ-ಕಂತೆ ಸುದ್ದಿಗಳಿಗೆ ತೆರೆ ಎಳೆದರು.

ಬೆಂಗಳೂರಿನಲ್ಲಿ ಇಂದು (ಜೂನ್ 19) ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, SPP ಬದಲಾವಣೆ ಮಾಡಿ ಎಂದು ಯಾರೂ ಒತ್ತಡ ಹಾಕಿಲ್ಲ. ದರ್ಶನ್​ ಪ್ರಕರಣದಲ್ಲಿ ಯಾವುದೇ ಸಚಿವರು ಒತ್ತಡ ಹಾಕಿಲ್ಲ.ಯಾರೇ ಒತ್ತಡ ಹಾಕಿದರೂ ನಾನು ಕೇಳುವುದಿಲ್ಲ. ಸಚಿವರು ಒತ್ತಡ ಹಾಕ್ತಿದ್ದಾರೆ ಅನ್ನೋದೆಲ್ಲ‌ ಸತ್ಯ ಅಲ್ಲ. ವಿಪಕ್ಷದವರು ಹೇಳುವುದೆಲ್ಲಾ ಸತ್ಯನಾ? ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ದರ್ಶನ್‌ ರಕ್ಷಣೆಗೆ ನಡೆಯುತ್ತಿದೆಯಾ ತೆರೆಮರೆ ಕಸರತ್ತು, ಎಸ್​​ಪಿಪಿ ಪ್ರಸನ್ನಕುಮಾರ್​ ಬದಲಾವಣೆಗೆ ಚಿಂತನೆ!

ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಬದಲಾವಣೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆದರೂ ಸಹ ಸಾಮಾಜಿಕ ಜಾಲತಾಣಗಳ ಮೂಲಕ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಸ್.‌ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈ ವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಸನ್ನ ಕುಮಾರ್ ಮುಂದುವರೆಸಲು ಆಗ್ರಹ

ಇನ್ನು ದರ್ಶನ್​ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್​ಪಿಪಿ ಪ್ರಸನ್ನ ಕುಮಾರ್ ಅವರನ್ನು ಇದೀಗ ಬದಲಾವಣೆ ಮಾಡುವ ಸುದ್ದಿ ಹಬ್ಬಿದ ಬೆನ್ನಲ್ಲೇ ಜನಾಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಕಾರಣಕ್ಕೂ ಎಸ್​ಪಿಪಿ ಪ್ರಸನ್ನ ಕುಮಾರ್ ಅವರನ್ನು ಬದಲಾವಣೆ ಮಾಡಬಾರದು ಎಂದು ಆಗ್ರಹಗಳ ವ್ಯಕ್ತವಾಗಿತ್ತಿವೆ. ಇನ್ನು ಈ ಬಗ್ಗೆ ಚಲವಾದಿ ಮಠದ ಬಸವನಾಗಿದೇವ ಶ್ರೀ ಸಹ ಎಸ್​ಪಿಪಿ ಪ್ರಸನ್ನ ಕುಮಾರ್ ಅವರನ್ನೇ ಮುಂದುವರೆಸುವಂತೆ ಆಗ್ರಹಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿರುವ ಬಸವನಾಗಿದೇವ ಶ್ರೀ, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸರ್ಕಾರದಿಂದ ಉತ್ತಮ ನಿರ್ವಹಣೆಯಾಗುತ್ತಿದೆ. ಕೆಲವರಿಂದ ನ್ಯಾಯ ನೀತಿ ಧರ್ಮ‌ ಮುಗ್ಗರಿಸಿ ಬೀಳಿಸುವ ಕೆಲಸವಾಗುತ್ತಿದೆ. ಸರ್ಕಾರ ಪ್ರಸನ್ನಕುಮಾರ್ ರನ್ನು SPPಯಾಗಿ ನೇಮಿಸಿದೆ. ಎಸ್​ಪಿಪಿ ಪ್ರಸನ್ನಕುಮಾರ್ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡವಿದೆ. ಪ್ರಸನ್ನಕುಮಾರ ಕೈಬಿಡುವ ಪ್ರಸ್ತಾಪ ಉಗ್ರವಾಗಿ ಖಂಡಿಸುತ್ತೇವೆ. SPP ಪ್ರಸನ್ನ ಕುಮಾರ್ ಅವರನ್ನೇ ಮುಂದುವರೆಸಲು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:24 pm, Wed, 19 June 24

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್