UPI ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ವಾಣಿಜ್ಯ ಇಲಾಖೆ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ
ಯುಪಿಐ ವ್ಯವಹಾರಗಳಲ್ಲಿ ಲಂಚಕ್ಕೆ ಬೇಡಿಕೆ ಇಟ್ಟರೆ ತಕ್ಷಣ ಇಲಾಖೆಯ ಸಹಾಯವಾಣಿಗೆ ಸಂಪರ್ಕಿಸುವಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ವ್ಯಾಪಾರಸ್ಥರಿಗೆ ಮನವಿ ಮಾಡಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಇಲಾಖೆ ತಿಳಿಸಿದೆ. ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಇಲಾಖೆ ಮನವಿ ಮಾಡಿದೆ.

ಬೆಂಗಳೂರು, ಜುಲೈ19: ವಾಣಿಜ್ಯ ತೆರಿಗೆ ಅಧಿಕಾರಿ ಅಥವಾ ಸಿಬ್ಬಂದಿ ಯುಪಿಐಗೆ (UPI) ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಲ್ಲಿ ತಕ್ಷಣ ಇಲಾಖೆಯ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಎಂದು ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ (Karnataka Commercial Tax Department) ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ದೃಶ್ಯ ಮಾಧ್ಯಮಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ /ಸಿಬ್ಬಂದಿಯವರು ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆಂದು ಪ್ರಸಾರವಾಗಿದೆ. ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಕೂಡ ಇಲಾಖೆಯ ಗಮನಕ್ಕೆ ಬಂದಿದೆ.
ಇದನ್ನೂ ಓದಿ: ತಳ್ಳುವ ಗಾಡಿ ವ್ಯಾಪಾರಿಗೂ ವಾಣಿಜ್ಯ ಇಲಾಖೆ ನೋಟಿಸ್: ಮತ್ತೆ ನಗದು ವ್ಯವಹಾರದತ್ತ ಮುಖಮಾಡಿದ ವರ್ತಕರು
ಇಲಾಖೆಯು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ತ ಅಧಿಕಾರಿ ಅಥವಾ ಸಿಬ್ಬಂದಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳವುದಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಬದ್ಧವಾಗಿರುತ್ತದೆ. ವ್ಯಾಪಾರಸ್ಥರು ಇಂತಹ ಪ್ರಕರಣಗಳನ್ನು ತಕ್ಷಣ ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ತರಲು ಸಹಾಯವಾಣಿ ದೂರವಾಣಿ ಸಂಖ್ಯೆ: 1800 425 6300 (ಸಮಯ ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ರಜಾ ದಿನಗಳನ್ನು ಹೊರತುಪಡಿಸಿ) ಸಂಪರ್ಕಿಸುವಂತೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಕೇಂದ್ರ ಕಚೇರಿ-1ರ ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




