ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಕೋಲಾರದ ಕ್ಲಾಕ್ ಟವರ್ ಸೇರಿದಂತೆ ನಾಡಿನ ಎಲ್ಲ ಜಿಲ್ಲೆಗಳಲ್ಲಿ ನೆರವೇರಿದ ಧ್ವಜಾರೋಹಣ

ರಾಜ್ಯಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮಾಣಿಕ್​ ಶಾ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರು ಧ್ವಜಾರೋಹಣ ನೆರವೇರಿಸಿದರು. ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಿದರು.

ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಕೋಲಾರದ ಕ್ಲಾಕ್ ಟವರ್ ಸೇರಿದಂತೆ ನಾಡಿನ ಎಲ್ಲ ಜಿಲ್ಲೆಗಳಲ್ಲಿ ನೆರವೇರಿದ ಧ್ವಜಾರೋಹಣ
ಕೋಲಾರ ಕ್ಲಾಕ್​ ಟವರ್​
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 26, 2024 | 11:13 AM

ಬೆಂಗಳೂರು, ಜನವರಿ 26: ರಾಜ್ಯಾದ್ಯಂತ 75ನೇ ಗಣರಾಜ್ಯೋತ್ಸವ (Republic Day) ಸಂಭ್ರಮ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ (Bengaluru) ಮಾಣಿಕ್​ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನೆರವೇರಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ (Thawar Chand Gehlot) ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್ಯಪಾಲರು ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಿದರು. ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಿದರು.

ನೀಲಿ ಬಣ್ಣದ ಪೇಟಾ ಧರಿಸಿ ದ್ವಜಾರೋಹಣ ನೆರವೇರಿಸಿದ ಡಿ.ಸುಧಾಕರ್

ಚಿತ್ರದುರ್ಗ: ನಗರದ ಜಯದೇವ ಕ್ರೀಡಾಂಗಣದಲ್ಲಿ‌ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕ ಕೆ.ಸಿ.ವೀರೇಂದ್ರ, ಡಿಸಿ ಟಿ.ವೆಂಕಟೇಶ್, ಎಸ್​ಪಿ ಧರ್ಮೇಂಧರ್ ಕುಮಾರ್ ಮೀನಾ, ಜಿ.ಪಂ ಸಿಇಒ ಸೋಮಶೇಖರ್ ಭಾಗಿಯಾಗಿದ್ದರು.

ಉಡಪಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ನಗರದ ಅಜ್ಜರ ಕಾಡು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ವಿವಿಧ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾ ಪೊಲೀಸ್, ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನೆರವೇರಿತು. ಸಮಾಜದ ಗಣ್ಯರಿಗೆ ಸನ್ಮಾನ ಮಾಡಿದರು.

ಚಿಕ್ಕಬಳ್ಳಾಪುರ: ನಗರದ ಸರ್​.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು, ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ಗಣರಾಜ್ಯೋತ್ಸವ ಪ್ರಯುಕ್ತ ಚಿಂತಾಮಣಿ ನಗರದಲ್ಲಿ 2200 ಅಡಿಗಳ ರಾಷ್ಟ್ರಧ್ವಜ ಮೆರವಣಿಗೆ ಮಾಡಲಾಯಿತು. ಮಹಿಳೆಯರು, ಮಕ್ಕಳು ಮತ್ತು ವಿದ್ಯಾರ್ಥಿಗಳು ಾಸೇರಿದಂತೆ ಸಾರ್ವಜನಿಕರು ಮೆರವಣಿಗೆಯಲ್ಲಿ ಬಾಗಿಯಾಗಿದ್ದರು.

ಧ್ವಜಾರೋಹಣ ನೆರವೇರಿಸಿದ ಎಸ್​.ಎಸ್.ಮಲ್ಲಿಕಾರ್ಜುನ

ದಾವಣಗೆರೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ ಧ್ವಜಾರೋಹಣ ನೆರವೇರಿಸಿದರು. ವಿವಿಧ ತಂಡಗಳು ಪಥಸಂಚಲನ ನಡೆದವು. ಡಿಸಿ ಎಂ.ವಿ. ವೆಂಕಟೇಶ್, ಐಜಿಪಿ ತ್ಯಾಗರಾಜನ್, ಎಸ್​ಪಿ ಉಮಾ ಪ್ರಶಾಂತ್ ಭಾಗಿಯಾಗಿದರು.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ‌ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಧ್ವಜಾರೋಹಣ ಮಾಡಿದರು. ಧ್ವಜಾರೋಹಣ ಬಳಿಕ ವಿವಿಧ ತಂಡದಿಂದ ಪಂಥಸಂಚಲನ ನಡೆಯಿತು. ಪೊಲೀಸ್, ಅರಣ್ಯ, ಹೋಂ ಗಾರ್ಡ್, ಎನ್​ಸಿಸಿ ಸೇರಿದಂತೆ ವಿವಿಧ ತಂಡಗಳು ಭಾಗಿಯಾಗಿದ್ದವು.

ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಧ್ವಜಾರೋಹಣ

ಬೆಳಗಾವಿ: ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು. ಸಚಿವರಿಗೆ ಜಿಲ್ಲಾಧಿಕಾರಿ ಸತೇಶ್ ಪಾಟೀಲ್,ಎಸ್ಪಿ ಭೀಮಾಶಂಕರ್ ಗುಳೇದ, ನಗರ ಪೊಲೀಸ್ ಆಯುಕ್ತ ಸಿದ್ರಾಮಪ್ಪ. ಶಾಸಕ ಆಸೀಫ್ ಸೇಠ್, ಮಹೇಶ್ ತಮ್ಮಣ್ಣವರ್ ಸಾಥ್​​​ ನೀಡಿದರು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಸತೀಶ್ ಜಾರಕಿಹೊಳಿ ಪರೇಡ್ ಪರಿವೀಕ್ಷಣೆ ಮಾಡಿದರಿ.

ಕೋಲಾರ ಕ್ಲಾಕ್ ಟವರ್ ಮೇಲೆ ಧ್ವಜಾರೋಹಣ

ಕೋಲಾರ: ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಶಾಸಕ ಕೊತ್ತೂರು ಮಂಜುನಾಥ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ನಾರಾಯಣ ಭಾಗಿಯಾಗಿದ್ದರು. ನಗರದ ಅತಿಸೂಕ್ಷ್ಮ ಪ್ರದೇಶ ಕ್ಲಾಕ್ ಟವರ್​ನಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಎಸ್ಪಿ ನಾರಾಯಣ್ ಅವರು ಧ್ವಜಾರೋಹಣ ನೆರವೇರಿಸಿದರು. 2022 ರಿಂದ ರಾಷ್ಟ್ರೀಯ ಹಬ್ಬಗಳಂದು ಧ್ವಜಾರೋಹಣ ನಡೆಸುವಂತೆ ಸರ್ಕಾರದ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಧ್ವಜಾರೋಹಣ ಮಾಡಲಾಗಿದೆ.

ಗದಗ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಉಸ್ತುವಾರಿ ಸಚಿವ ಹೆಚ್​. ಕೆ.ಪಾಟೀಲ್ ನೆರವೇರಿಸಿದರು. ಪೊಲೀಸ್, ಹೋಂ ಗಾರ್ಡ್, ಎನ್​ಸಿಸಿ, ಸೇವಾದಳ, ಸ್ಕೌಟ್ ಆ್ಯಂಡ್ ಗೈಡ್ಸ್ ಸೇರಿದಂತೆ ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಎಂಎಲ್​ಸಿ ಎಸ್.ವಿ.ಸಂಕನೂರು, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಎಸ್​ಪಿ ಬಿ.ಎಸ್.ನೇಮಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಯಾದಗಿರಿ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರದ ವಾಹನದಲ್ಲಿ ಸಂಚರಿ ಗೌರವ ವಂದನೆ ಪಡೆದರು. ನಂತರ ಪೊಲೀಸ್, ಅಗ್ನಿಶಾಮಕ, ವಿವಿಧ ಶಾಲಾ ಮಕ್ಕಳಿಗೆ ಪರೇಡ್ ನಡೆಯಿತು. ಕಾರ್ಯಕ್ರಮದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್, ಡಿಸಿ,ಎಸ್ ಪಿ ಹಾಗೂ ಸಿಇಒ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಇದನ್ನೂ ಓದಿ: ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಡಿಸಿ ಶಿವಶಂಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗಿಯಾದರು.

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಎಚ್.ಡಿ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್ , ಎಸ್ಪಿ ವಿಕ್ರಂ ಆಮ್ಟೆ ಸೇರಿ ಹಲವರು ಭಾಗಿಯಾಗಿದ್ದರು. ಪೊಲೀಸ್ ತುಕಡಿ, ಎನ್. ಸಿ.ಸಿ. ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನೆರವೇರಿಸಿಸಿತು.

ಬಾಗಲಕೋಟೆ: ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಸಾಗಿ ಪೊಲೀಸ್ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ. ಶಾಸಕ ಹೆಚ್ ವೈ ಮೇಟಿ, ಎಮ್​ಎಲ್​ಸಿ ಪಿ.ಹೆಚ್ ಪೂಜಾರ, ಜಿಲ್ಲಾಧಿಕಾರಿ ಕೆ ಎಮ್​ ಜಾನಕಿ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

ಶಿವಮೊಗ್ಗ: ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವ ಆಚರಣೆ ನಡೆಯುತಿದೆ. ಗರದ ಡಿಎಆರ್ ಮೈದಾನದಲ್ಲಿ ಗಣ ರಾಜ್ಯೋತ್ಸವ ಆಯೋಜಿಲಾಗಿದ್ದು, ಉಸ್ಥುವಾರಿ ಸಚಿವ ಮಧು ಬಂಗಾರಪ್ಪ ಅವರಿಂದ ಧ್ವಜಾರೋಹಣ ನೆರವೇಸಿದರು.

ವಿಜಯಪುರ: ವಿಜಯಪುರ ನಗರದ ಡಾ ಬಿ ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು. ಪಥ ಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ಸಂಸದ ರಮೇಶ ಜಿಗಜಿಣಗಿ ಭಾಗಿಯಾಗಿದ್ದಾರೆ. ಡಿಸಿ ಟಿ ಭೂಬಾಲನ್ ಎಸ್ಪಿ ಋಷಿಕೇಶ ಸೋನೆವಣೆ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ರಾಯಚೂರು: ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು.

ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ‌ಎನ್.ರಾಜಣ್ಣ ಧ್ವಜಾರೋಹಣ ನೆರವೇರಿಸಿದರು. ವಿವಿಧ ಪೊಲೀಸ್ ತುಕಡಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನೆರವೇರಿತು. ಕಾರ್ಯಕ್ರಮದಲ್ಲಿ ಶಾಸಕ ಸ್ವರೂಪ್ ಪ್ರಕಾಶ್, ಡಿಸಿ ಸಿ ಸತ್ಯಭಾಮ, ಎಸ್ಪಿ ಮೊಹಮದ್ ಸುಜೀತ ಭಾಗಿಯಾಗಿದ್ದರು.

ಮಂಗಳೂರು: ನೆಹರು ಮೈದಾನದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ಮಾಡಿದರು. ಪೊಲೀಸ್, ಎನ್​ಸಿಸಿ, ವಿದ್ಯಾರ್ಥಿಗಳು ಪಥಸಂಚಲನ ಮಾಡಿದರು.

ತುಮಕೂರು: ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಪರಮೇಶ್ವರ್ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಒ ಪ್ರಭು, ಎಸ್​ಪಿ ಅಶೋಕ್, ಪಾಲಿಕೆ ಆಯುಕ್ತೆ ಅಶ್ವಿಜಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಶಾಸಕರಾದ ಸುರೇಶ್ ಗೌಡ ಜ್ಯೋತಿ ಗಣೇಶ್ ಎಮ್​ಎಲ್​ಸಿ ರಾಜೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಧಾರವಾಡ: ನಗರದ ಆರ್‌.ಎನ್‌ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಸಂತೋಷ ಲಾಡ್ ಧ್ವಜಾರೋಹಣ ನೆರವೇರಿಸಿದರು.

ಕೊಪ್ಪಳ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಧ್ವಜಾರೋಹಣ ನೆರವೇರಿಸಿದರು. ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ್ ಉಪಸ್ಥಿತರಿದ್ದರು.

150 ಅಡಿ ಎತ್ತರದ ಧ್ವಜ ಸ್ಥಂಬದ ಮೇಲೆ ಧ್ವಜಾರೋಹಣ

ಬಳ್ಳಾರಿ: ಮೋತಿ ವೃತ್ತದಲ್ಲಿ 150 ಅಡಿ ಎತ್ತರದ ಧ್ವಜ ಸ್ಥಂಬದ ಮೇಲೆ ಧ್ವಜಾರೋಹಣ ಮಾಡಿದ ಸಚಿವ ನಾಗೇಂದ್ರ ಧ್ವಜಾರೋಹಣ ನೆರವೇರಿಸಿದರು. ಶಾಸಕ ಭರತ್ ರೆಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ