ಗಣರಾಜ್ಯೋತ್ಸವ: ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಪೊಲೀಸ್ ಇನ್ಸ್ಪೆಕ್ಟರ್ ಮಾಸ್ತೇನಹಳ್ಳಿ ರಾಮಪ್ಪ ಹರೀಶ್, ಇನ್ಸ್ಪೆಕ್ಟರ್ ಸಣ್ಣ ರಂಗಪ್ಪ ವಿರೇಂದ್ರ ಪ್ರಸಾದ್, ಸಬ್ ಇನ್ಸ್ಪೆಕ್ಟರ್ ದಾದಾಪೀರ್ ಕಣ್ಣೂರ್ ಸಾಬ್ ಸೇರಿದಂತೆ ಕರ್ನಾಟಕ 21 ಪೊಲೀಸ್ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.
ಬೆಂಗಳೂರು, ಜನವರಿ 25: ಗಣರಾಜ್ಯೋತ್ಸವದ (Republic Day 2024) ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ (President’s Police Medal) ಭಾಜನರಾಗಿದ್ದಾರೆ. ಶುಕ್ರವಾರ 75ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.
ಗಮನಾರ್ಹ ಸೇವೆ ಗುರುತಿಸಿ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ. ಐಜಿಪಿ ಪ್ರವೀಣ್ ಮಧುಕರ್ ಪವಾರ್, ಐಜಿಪಿ ರಮಣ್ ಗುಪ್ತಾ, ಎಎಸ್ಪಿ ಅನಿಲ್ಕುಮಾರ್.ಎಸ್, ಎಸಿಪಿ ಶಿವಗಂಗೆ ಪುಟ್ಟರಂಗಪ್ಪ, ಡಿವೈಎಸ್ಪಿ ರಘು ಕುಮಾರ್, ಎಸಿಪಿ ನಾರಾಯಣಸ್ವಾಮಿ, ಡಿವೈಎಸ್ಪಿ ಶ್ರೀನಿವಾಸ್ ರಾಜ್ ಬೆಟೋಲಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಮಾಸ್ತೇನಹಳ್ಳಿ ರಾಮಪ್ಪ ಹರೀಶ್, ಇನ್ಸ್ಪೆಕ್ಟರ್ ಸಣ್ಣ ರಂಗಪ್ಪ ವಿರೇಂದ್ರ ಪ್ರಸಾದ್, ಸಬ್ ಇನ್ಸ್ಪೆಕ್ಟರ್ ದಾದಾಪೀರ್ ಕಣ್ಣೂರ್ ಸಾಬ್, ವೈರಲೆಸ್ ಎಎಸ್ಐ ಸುರೇಶ್ ರಾಮಪ್ಪ ಪುಂಡಲಿಕಟ್ಟಿ, ಎಎಸ್ಐ ರಾಮ, ಎಸ್ಪಿ ಕಮಾಂಡೆಂಟ್ ಸಿಬ್ಬಂದಿ ನಾಗರಾಜ್ ಅಂಜಪ್ಪ, ಹೆಡ್ ಕಾನ್ಸ್ಟೇಬಲ್ ಸಿ.ವಿ.ಗೋವಿಂದರಾಜು, ಹೆಡ್ ಕಾನ್ಸ್ಟೇಬಲ್ ಮಣಿಕಂಠ ಮಂದರ್ ಬೈಲ್, ಎಎಸ್ಐ ಸಮಂತ್.ಎಸ್, ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಎಸ್.ಎನ್, ಎಸ್ಐ ಪುಂಡಲಿಕ್ ಜೆ.ವಿ.ರಾಮರಾವ್ ನಾಯಕ್ಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.
ಒಟ್ಟು 1132 ಸಿಬ್ಬಂದಿಗೆ ಮೆಡಲ್
2024 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ ಸೇವೆ, ಗೃಹ ರಕ್ಷಕ ಮತ್ತು ಸಿವಿಲ್ ಡಿಫೆನ್ಸ್ & ಕರೆಕ್ಷನಲ್ ಸೇವೆಯ ಒಟ್ಟು 1132 ಸಿಬ್ಬಂದಿಗೆ ಶೌರ್ಯ / ಸೇವಾ ಪದಕಗಳನ್ನು ಘೋಷಣೆ ಮಾಡಲಾಗಿದೆ. ವಿವಿಧ ಪ್ರಶಸ್ತಿಗಳ ಘೋಷಣೆ ವ್ಯವಸ್ಥೆಯನ್ನು ತರ್ಕಬದ್ಧಗೊಳಿಸಲು ಮತ್ತು ಪರಿವರ್ತಿಸಲು ಸರ್ಕಾರವು ಇತ್ತೀಚಿನ ವರ್ಷಗಳಲ್ಲಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ, ಹದಿನಾರು ಶೌರ್ಯ / ಸೇವಾ ಪದಕಗಳನ್ನು (ಪೊಲೀಸ್, ಅಗ್ನಿಶಾಮಕ ಸೇವೆ, ಗೃಹರಕ್ಷಕ ಮತ್ತು ಸಿವಿಲ್ ಡಿಫೆನ್ಸ್ & ಕರೆಕ್ಷನಲ್ ಸೇವೆ) ತರ್ಕಬದ್ಧಗೊಳಿಸಲಾಗಿದೆ ಮತ್ತು ನಾಲ್ಕು ಪದಕಗಳನ್ನು ವಿಲೀನಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಗಣರಾಜ್ಯೋತ್ಸವ: ಗದಗ ಕಲಾಚೇತನ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಕಾವೆಂಶ್ರೀಗೆ ಆಹ್ವಾನ
ಇದರಂತೆ, ಪ್ರೆಸಿಡೆಂಟ್ಸ್ ಮೆಡಲ್ ಆಫ್ ಗ್ಯಾಲಂಟ್ರಿ, ಮೆಡಲ್ ಫಾರ್ ಗ್ಯಾಲಂಟ್ರಿ, ಪ್ರೆಸಿಡೆಂಟ್ಸ್ ಮೆಡಲ್ ಫಾರ್ ಡಿಸ್ಟಿಂಗ್ಯುಶ್ಡ್ ಸರ್ವೀಸ್, ಮೆಡಲ್ ಫಾರ್ ಮೆರಿಟೋರಿಯಸ್ ಸರ್ವೀಸಸ್ ಅನ್ನು ವಿಲೀನಗೊಳಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:19 pm, Thu, 25 January 24