Republic Day: ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ​​ಭಾವಚಿತ್ರ ಕಡ್ಡಾಯ: ಸರ್ಕಾರ ಆದೇಶ

ನಾಳೆ 75ನೇ ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 26ರಂದು ರಾಜ್ಯದ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ. ಬಿಆರ್​ ಅಂಬೇಡ್ಕರ್​ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.

Republic Day: ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ​​ಭಾವಚಿತ್ರ ಕಡ್ಡಾಯ: ಸರ್ಕಾರ ಆದೇಶ
ಡಾ. ಬಿಆರ್​ ಅಂಬೇಡ್ಕರ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 25, 2024 | 8:49 PM

ಬೆಂಗಳೂರು, ಜನವರಿ 25: ದೇಶಾದ್ಯಂತ ನಾಳೆ 75ನೇ ಗಣರಾಜ್ಯೋತ್ಸವ (Republic Day Celebration) ಸಂಭ್ರಮ ಮನೆಮಾಡಲಿದೆ. ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ. ಬಿ.ಆರ್​ ಅಂಬೇಡ್ಕರ್​ ಅವರು ಭಾವಚಿತ್ರವನ್ನು ಇಡುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜನವರಿ 26ರಂದು ರಾಜ್ಯದ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ. ಬಿಆರ್​ ಅಂಬೇಡ್ಕರ್​ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.

ಆಯಕಟ್ಟಿನ ಪ್ರದೇಶಗಳಲ್ಲಿ ನಿಗಾ

ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಬೆಂಗಳೂರು ಪೊಲೀಸ್​ ಆಯುಕ್ತ​ ಬಿ. ದಯಾನಂದ ಮತ್ತು ಜಿಲ್ಲಾಧಿಕಾರಿ ಕೆ.ಎ ದಯಾನಂದ​ ಜಂಟಿ ಸುದ್ದಿಗೋಷ್ಠಿ ಮಾಡಿದ್ದು, ಈ ಬಾರಿ ಗಣರಾಜ್ಯೋತ್ಸವದಲ್ಲಿ ಕೇರಳ ಪೊಲೀಸ್​ ಪಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್​​ಸಿಸಿ, ಸೇವಾದಳ, ವಿವಿಧ ಶಾಲಾ ತಂಡಗಳು ಸೇರಿದಂತೆ 38 ತುಕಡಿಗಳಲ್ಲಿ ಒಟ್ಟು 1,150 ಜನರು ಭಾಗಿಯಾಗಲಿದ್ದಾರೆ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಗಣರಾಜ್ಯೋತ್ಸವ: ಗದಗ ಕಲಾಚೇತನ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಕಾವೆಂಶ್ರೀಗೆ ಆಹ್ವಾನ

ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ನಿಗಾ ಇಡಲಾಗಿದೆ. 9 ಡಿಸಿಪಿ, 16 ಎಸಿಪಿ, 46 ಇನ್ಸ್​ಪೆಕ್ಟರ್​ಗಳು ಸೇರಿದಂತೆ 575 ಅಧಿಕಾರಿಗಳು, 1000 ಸಿಬ್ಬಂದಿ ನಿಯೋಜಿಸಲಾಗಿದೆ. ಜೊತೆಗೆ ಆರ್ಮಡ್ ಫೋರ್ಸ್, ಶ್ವಾನದಳ ಇರಲಿದೆ. ಬ್ಯಾಗೇಜ್ ಸ್ಕ್ಯಾನರ್ ಮತ್ತು 100 ಸಿಸಿಟಿವಿಗಳನ್ನ ಅಳವಡಿಸಲಾಗಿದೆ.

ವಾಹನ ಸಂಚಾರದಲ್ಲೂ ಕೆಲ ಬದಲಾವಣೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದೇವೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ ಬಿ.​ ದಯಾನಂದ್ ಹೇಳಿದ್ದಾರೆ.

ಸಂಚಾರ ನಿರ್ಬಂಧ

ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾಕಡೆ ಎಡ ತಿರುವು ಪಡೆದು ಮೈನ್​ಗಾರ್ಡ್​ ರಸ್ತೆ – ಆಲೀಸ್​ ಸರ್ಕಲ್​- ಡಿಸ್ಪೆನ್ಸರಿ ರಸ್ತೆ – ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: ಗಣರಾಜ್ಯೋತ್ಸವ: ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಭಂಧಿಸಿದ್ದು, ಸದರಿ ವಾಹನಗಳು ವೆಬ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ.ರಸ್ತೆಯ ಮುಖಾಂತರ ಮೆಯೋಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:40 pm, Thu, 25 January 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM