AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ: ಸಿಎಂ ಸಿದ್ದರಾಮಯ್ಯ

Republic Day 2024: ನಮ್ಮ ಸರ್ಕಾರ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ವ ಸನ್ನದ್ಧವಾಗಿದೆ. ಸಮಾಜವನ್ನು ಧರ್ಮಗಳ ಆಧಾರದಲ್ಲಿ ವಿಭಜಿಸುವ ಹುನ್ನಾರಕ್ಕೆ ಜನತೆ ಬಲಿಯಾಗಬಾರದು ಎಂದು ಗಣರಾಜ್ಯೋತ್ಸವ ಸಂದೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ: ಸಿಎಂ ಸಿದ್ದರಾಮಯ್ಯ
ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ: ಸಿಎಂ ಸಿದ್ದರಾಮಯ್ಯ
Anil Kalkere
| Edited By: |

Updated on: Jan 26, 2024 | 10:45 AM

Share

ಬೆಂಗಳೂರು, ಜನವರಿ 26: ಕೋಮುವಾದಿ ಶಕ್ತಿಗಳ (communal forces) ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಗಣರಾಜ್ಯೋತ್ಸವದ (Republic Day) ಸಂದರ್ಭ ನೀಡಿದ ಸಂದೇಶದಲ್ಲಿ ಅವರು, ಕೋಮುವಾದ ಆಂತಕ ಸೃಷ್ಟಿಸುತ್ತಿದೆ. ನಮ್ಮ ನಡೆ ಅಭಿವೃದ್ಧಿಯ ಕಡೆಗೆ ಸಾಗುತ್ತಿದ್ದರೂ ನಮ್ಮ ಕನಸಿನ ಭಾರತದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎನ್ನುವುದನ್ನು ವಿಷಾದದಿಂದಲೇ ಒಪ್ಪಬೇಕಾಗಿದೆ. ಅಭಿವೃದ್ಧಿಯ ದಾರಿಯಲ್ಲಿ ಹೊಸ ಸವಾಲುಗಳು ಎದುರಾಗಿವೆ ಎಂದು ಹೇಳಿದರು.

ಮುಖ್ಯವಾಗಿ ಇತ್ತೀಚೆಗೆ ಹೆಡೆ ಎತ್ತಿರುವ ಕೋಮುವಾದ, ನಮ್ಮ ಜಾತ್ಯತೀತ ಸಮಾಜಕ್ಕೆ ಅಪಾಯವನ್ನುಂಟು ಮಾಡುವ ಆತಂಕವನ್ನು ಅನುಭವಿಸುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರು ನೀಡಿರುವ ಜನಮತದಲ್ಲಿ ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜದ ರಕ್ಷಣೆಯ ಸಂದೇಶವೂ ಇದೆ ಎನ್ನುವುದನ್ನು ನಮ್ಮ ಸರ್ಕಾರ ಅರ್ಥಮಾಡಿಕೊಂಡಿದೆ. ನಮ್ಮ ಸರ್ಕಾರ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ವ ಸನ್ನದ್ಧವಾಗಿದೆ. ಸಮಾಜವನ್ನು ಧರ್ಮಗಳ ಆಧಾರದಲ್ಲಿ ವಿಭಜಿಸುವ ಹುನ್ನಾರಕ್ಕೆ ಜನತೆ ಬಲಿಯಾಗಬಾರದು. ಚುನಾಯಿತ ಸರ್ಕಾರ ಇಲ್ಲವೇ ಜನಪ್ರತಿನಿಧಿಗಳು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಜಾತಿ-ಧರ್ಮಗಳಂತಹ ಭಾವನಾತ್ಮಕ ವಿಷಯಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ದವಾದುದು ಮತ್ತು ಸಂವಿಧಾನಕ್ಕೆ ಬಗೆವ ದ್ರೋಹವಾಗಿದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಸಂವಿಧಾನ ಬದಲಾವಣೆ ಚರ್ಚೆಯನ್ನು ಸಿಎಂ‌ ಸಿದ್ದರಾಮಯ್ಯ ಖಂಡಿಸಿದರು. ಸಂವಿಧಾನ ಎನ್ನುವುದು ಪ್ರಜಾಪ್ರಭುತ್ವದ ಆತ್ಮ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ. ಇತ್ತೀಚೆಗೆ ಸಂವಿಧಾನ ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿ ಬರುತ್ತಿದೆ. ಇದನ್ನು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಈ ಖಂಡನೆಗೆ ನಾನೂ ದನಿಗೂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಬೆಂಗಳೂರು; ಗಣರಾಜ್ಯೋತ್ಸವ ಸಂಭ್ರಮಾಚರಣೆಯ ನೇರಪ್ರಸಾರ ಇಲ್ಲಿ ನೋಡಿ ​​

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದು, ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಬರಗಾಲವನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿದೆ. ನಮ್ಮ ನಿರಂತರ ಪ್ರಯತ್ನದ ಹೊರತಾಗಿಯೂ ಬರಪರಿಹಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸದೆ ಬಿಡಿಗಾಸನ್ನೂ ನೀಡದಿರುವುದನ್ನು ವಿಷಾದದಿಂದ ಹೇಳಬೇಕಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ