ಗಣರಾಜ್ಯೋತ್ಸವ ಪರೇಡ್​​ನಲ್ಲಿ ಕರ್ನಾಟಕದ ಟ್ಯಾಬ್ಲೋ ಕಡೆಗಣನೆಗೆ ಸಿದ್ದರಾಮಯ್ಯ ಆಕ್ರೋಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್​ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ರಾಜ್ಯದ 7 ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದೆ ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ಪರೇಡ್​​ನಲ್ಲಿ ಕರ್ನಾಟಕದ ಟ್ಯಾಬ್ಲೋ ಕಡೆಗಣನೆಗೆ ಸಿದ್ದರಾಮಯ್ಯ ಆಕ್ರೋಶ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಕರ್ನಾಟಕದ ಟ್ಯಾಬ್ಲೋ ಕಡೆಗಣನೆಗೆ ಸಿದ್ದರಾಮಯ್ಯ ಆಕ್ರೋಶ Image Credit source: FILE PHOTO
Follow us
TV9 Web
| Updated By: Rakesh Nayak Manchi

Updated on: Jan 09, 2024 | 8:45 PM

ಬೆಂಗಳೂರು, ಜ.9: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ (Republic Day) ಪರೇಡ್​ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿದ ಸಿದ್ದರಾಮಯ್ಯ, ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದರು.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದರು.

ಇದನ್ನೂ ಓದಿ: ಗಣರಾಜ್ಯೋತ್ಸವ 2024 ಪರೇಡ್: ಕರ್ನಾಟಕದ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದರು.

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ