ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ, ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗಾಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 26, 2024 | 4:18 PM

ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಸಂದರ್ಭದಲ್ಲಿ ಪಂಚಾಯತಿ ಎದುರಿಗೆ ಕನ್ನಡಪರ ಸಂಘಟನೆ ಮುಖಂಡ ಮಲ್ಲು ಗಿನ್ನಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಸೋಮವ್ವ ಅವರ ತೊಡೆಗೆ ತಾಗಿದೆ. ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಸೋಮವ್ವ ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ, ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗಾಯ
ಸಾಂದರ್ಭಿಕ ಚಿತ್ರ
Follow us on

ವಿಜಯಪುರ, ಜ.26: ಧ್ವಜಾರೋಹಣ ವೇಳೆ ವ್ಯಕ್ತಿಯೋರ್ವ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ. ಕನ್ನಡಪರ ಸಂಘಟನೆ ಮುಖಂಡ ಮಲ್ಲು ಗಿನ್ನಿ ಎಂಬಾತ ಗುಂಡು ಹಾರಿಸಿದ್ದು (Open Fire) ವೇದಿಕೆಯಲ್ಲಿದ್ದ ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗುಂಡು ತಾಕಿದೆ. ಗಾಯಾಳು ಸೋಮವ್ವಗೆ ವಿಜಯಪುರದ (Vijayapura) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಯಾವ ಕಾರಣಕ್ಕೆ ಫೈರಿಂಗ್ ಮಾಡಲಾಗಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

75ನೇ ಗಣರಾಜ್ಯೋತ್ಸವ ಹಿನ್ನೆಲೆ ಇಂದು ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧ್ವಜಾರೋಹಣ ಸಂದರ್ಭದಲ್ಲಿ ಪಂಚಾಯತಿ ಎದುರಿಗೆ ಕನ್ನಡಪರ ಸಂಘಟನೆ ಮುಖಂಡ ಮಲ್ಲು ಗಿನ್ನಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಸೋಮವ್ವ ಅವರ ತೊಡೆಗೆ ತಾಗಿದೆ. ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಸೋಮವ್ವ ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಇನ್ನು ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದಾನೆ. ಗಣರಾಜ್ಯೋತ್ಸವ ವೇಳೆ ಗುಂಡು ಹಾರಿಸಲು ಅವಕಾಶವಿಲ್ಲ. ಆದರೆ ಗುಂಡು ಹಾರಿಸಲಾಗಿದ್ದು ಅವಘಡ ಸಂಭವಿಸಿದೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಯಾವ ಉದ್ದೇಶಕ್ಕೆ ಹೀಗೆ ಮಾಡಿದ್ದಾನೆ ಎನ್ನುವ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಗಣರಾಜ್ಯೋತ್ಸವದಲ್ಲಿ ಅಪಶೃತಿ.. ಧ್ವಜ ಕಂಬಕ್ಕೆ ವಿದ್ಯುತ್ ತಂತಿ ತಗುಲಿ ಇಬ್ಬರು ಯುವಕರ ಸಾವು

ಗಣರಾಜ್ಯೋತ್ಸವ ಪರೇಡ್ ವೇಳೆ ಏಕಾಏಕಿ ಸಿಎಂ ಬಳಿ ನುಗ್ಗಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಖಾಕಿ

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. ಮೈಸೂರು ಮೂಲದ ಪರಶುರಾಮ್​ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:43 pm, Fri, 26 January 24