ಎಸ್​ಸಿ- ಎಸ್​ಟಿ ಮೀಸಲಾತಿ ಹೆಚ್ಚಳ ಕುರಿತು 1 ವಾರದೊಳಗೆ ಸರ್ವಪಕ್ಷ ಸಭೆ; ಸಿಎಂ ಬೊಮ್ಮಾಯಿ ಭರವಸೆ

ಎಸ್​ಟಿ ಮೀಸಲಾತಿಯನ್ನು ಶೇ. 7.5ರಷ್ಟು ಹೆಚ್ಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ದಿನಗಳಿಂದ ಚರ್ಚೆಗಳು, ಒತ್ತಾಯಗಳು ಕೇಳಿಬರುತ್ತಿವೆ. ನ್ಯಾಯಮೂರ್ತಿ ಸುಭಾಷ್ ಆಡಿ ಹಾಗೂ ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿಗಳಿಂದ ವರದಿ ಬಂದಿದೆ.

ಎಸ್​ಸಿ- ಎಸ್​ಟಿ ಮೀಸಲಾತಿ ಹೆಚ್ಚಳ ಕುರಿತು 1 ವಾರದೊಳಗೆ ಸರ್ವಪಕ್ಷ ಸಭೆ; ಸಿಎಂ ಬೊಮ್ಮಾಯಿ ಭರವಸೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 24, 2022 | 9:41 AM

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಎಸ್‌ಸಿ/ಎಸ್‌ಟಿ) ಮೀಸಲಾತಿ ಬೇಡಿಕೆಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯುವುದಾಗಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಶುಕ್ರವಾರ ವಿಧಾನಸಭೆ ಕಲಾಪದ ವೇಳೆ ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ನಿರ್ಧರಿಸುವಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಎಸ್​ಸಿ (SC) ಮತ್ತು ಎಸ್​ಟಿ (ST) ಸಮುದಾಯಗಳ ಕಲ್ಯಾಣಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ.

ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳ ಬಗ್ಗೆ ನಾವು ಈಗಲೇ ಏನೂ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಮುಂದಿನ ವಾರದಲ್ಲಿ ನಾನು ಸರ್ವಪಕ್ಷ ಸಭೆ ಕರೆಯುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಆಯೋಗ ಮತ್ತು ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿಗಳು ತಮ್ಮ ವರದಿಗಳನ್ನು ಸಲ್ಲಿಸಿವೆ. ಈ ಮೀಸಲಾತಿ ವಿಚಾರ ಸಾಂವಿಧಾನಿಕ ಮತ್ತು ಕಾನೂನು ವಿಷಯಗಳು ಒಳಗೊಂಡಿರುವುದರಿಂದ ಅದರ ಬಗ್ಗೆ ಚರ್ಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕುರಿತು ವಿಧಾನಸಭೆಯಲ್ಲಿ ಚರ್ಚೆ: ಬಾವಿಗಿಳಿದು ಪ್ರತಿಭಟನೆ ಮಾಡಿದ ಯತ್ನಾಳ್, ಲಕ್ಷ್ಮೀ ಹೆಬ್ಬಾಳ್ಕರ್

ಎಸ್​ಟಿ ಮೀಸಲಾತಿಯನ್ನು ಶೇ. 7.5ರಷ್ಟು ಹೆಚ್ಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ದಿನಗಳಿಂದ ಚರ್ಚೆಗಳು, ಒತ್ತಾಯಗಳು ಕೇಳಿಬರುತ್ತಿವೆ. ನ್ಯಾಯಮೂರ್ತಿ ಸುಭಾಷ್ ಆಡಿ ಹಾಗೂ ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿಗಳಿಂದ ವರದಿ ಬಂದಿದೆ. ಆ ವರದಿಗಳನ್ನು ಇಟ್ಟುಕೊಂಡು ಸರ್ವಪಕ್ಷ ಸಭೆ ಕರೆದು ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ. ಇನ್ನೊಂದು ವಾರದಲ್ಲಿ ಸರ್ವಪಕ್ಷ ಸಭೆ ಕರೆಯುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಮೀಸಲಾತಿಯ ಹೆಚ್ಚಳದ ಬಗ್ಗೆ ಕಾನೂನಾತ್ಮಕವಾಗಿ ಚರ್ಚಿಸಿ ನಿರ್ಧಾರ ಮಾಡುತ್ತೇವೆ. ಹೀಗಾಗಿ, ಧರಣಿ ಮಾಡುತ್ತಿರುವ ಸ್ವಾಮೀಜಿಗಳು ಪ್ರತಿಭಟನೆಯನ್ನು ಕೈ ಬಿಡಬೇಕು ಎಂದು ಸದನದ ಮೂಲಕ ನಾನು ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು